< ಆದಿಕಾಂಡ 15 >
1 ೧ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
Po tych wydarzeniach słowo PANA doszło do Abrama w widzeniu: Nie bój się, Abramie. Ja jestem twoją tarczą i twoją niezmiernie obfitą nagrodą.
2 ೨ ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
I Abram powiedział: Panie BOŻE, co mi dasz, skoro ja jestem bezdzietny, a szafarzem mego domu [jest] ten Damasceńczyk Eliezer?
3 ೩ ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು.
Abram dodał: Oto nie dałeś mi potomka, a sługa [urodzony] w moim domu będzie moim dziedzicem.
4 ೪ ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,
A oto [dotarło] do niego słowo PANA: Nie on będzie twoim dziedzicem, lecz ten, który wyjdzie z twego wnętrza, będzie twoim dziedzicem.
5 ೫ “ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.
Potem wyprowadził go na dwór i powiedział: Spójrz teraz na niebo i policz gwiazdy, jeśli będziesz mógł je policzyć; i powiedział mu: Takie będzie twoje potomstwo.
6 ೬ ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.
I uwierzył PANU, i poczytano mu [to] za sprawiedliwość.
7 ೭ ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.
Potem powiedział do niego: Ja jestem PANEM, który cię wyprowadził z Ur chaldejskiego, aby ci dać tę ziemię w posiadanie.
8 ೮ “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು.
[Abram] zapytał: Panie BOŻE, po czym poznam, że ją odziedziczę?
9 ೯ ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು.
I odpowiedział mu: Weź dla mnie trzyletnią jałówkę, trzyletnią kozę i trzyletniego barana, a także synogarlicę i pisklę gołębia.
10 ೧೦ ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.
Wziął więc to wszystko i rozciął na połowy; a jedną część położył naprzeciwko drugiej, ale ptaków nie rozcinał.
11 ೧೧ ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
Kiedy zleciało się ptactwo do tej padliny, Abram je odganiał.
12 ೧೨ ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.
[Gdy] słońce zachodziło, głęboki sen ogarnął Abrama i oto groza wielkiej ciemności zapadła na niego.
13 ೧೩ ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.
I [PAN] powiedział do Abrama: Wiedz o tym dobrze, że twoje potomstwo będzie przybyszem w cudzej ziemi i wezmą je w niewolę, i będzie uciskane [przez] czterysta lat.
14 ೧೪ ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
A ja osądzę ten naród, któremu będą służyć; a potem wyjdą [stamtąd] z wielkim dobytkiem.
15 ೧೫ ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.
Ale ty odejdziesz w pokoju do twoich ojców i będziesz pochowany w dobrej starości.
16 ೧೬ ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.
A w czwartym pokoleniu wrócą tutaj, bo jeszcze nie dopełniła się nieprawość Amorytów.
17 ೧೭ ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.
Gdy słońce zaszło i nastała ciemność, oto [ukazał się] dymiący piec i ognista pochodnia, która przechodziła między tymi połowami [zwierząt].
18 ೧೮ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
W tym właśnie dniu PAN zawarł przymierze z Abramem, mówiąc: Twemu potomstwu dam tę ziemię, od rzeki Egiptu aż do wielkiej rzeki, rzeki Eufrat;
19 ೧೯ ಕೇನಿಯರೂ, ಕೆನಿಜೀಯರೂ, ಕದ್ಮೋನಿಯರೂ,
Kenitów, Kenizytów i Kadmonitów;
20 ೨೦ ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,
Chetytów, Peryzzytów i Refaitów;
21 ೨೧ ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.
Amorytów, Kananejczyków, Girgaszytów i Jebusytów.