< ಆದಿಕಾಂಡ 16 >

1 ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.
亞巴郎的妻子撒辣依,沒有給他生孩子,她有個埃及婢女,名叫哈加爾。
2 ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.
撒辣依就對亞巴郎說:「請看,上主既使我不能生育,你可去親近我的婢女,或許我能由她得到孩子。」亞巴郎就聽了撒辣依的話。
3 ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.
亞巴郎住在客納罕地十年後,亞巴郎的妻子撒辣依將自己的埃及婢女哈加爾,給了丈夫亞巴郎做妾。
4 ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದೆನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಸಾರ ಮಾಡತೊಡಗಿದಳು.
亞巴郎自從同哈加爾親近,哈加爾就懷了孕;她見自己懷了孕;就看不起自己的主母。
5 ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.
撒辣依對亞巴郎說:「我受羞辱是你的過錯。我將我的婢女放在你懷裏,她一見自己懷了孕,便看不起我。願上主在我與你之間來判斷! 」
6 ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.
亞巴郎對撒辣依說:「你的婢女是在你手中;你看怎樣好,就怎樣待她罷! 」於是撒辣依就虐待她,她便由撒辣依面前逃跑了。
7 ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,
上主的使者在曠野的水泉旁,即在往叔爾道上的水泉旁,遇見了她,
8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.
對她說:「撒辣依的婢女哈加爾! 你從那裏來,要往那裏去﹖」她答說:「我由我主母撒辣依那裏逃出來的。」
9 ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು.
上主的使者對她說:「你要回到你主母那裏,屈服在她手下。」
10 ೧೦ ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.
上主的使者又對她說:「我要使你的後裔繁衍,多得不可勝數。」
11 ೧೧ ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
上主的使者再對她說:「看,你已懷孕,要生個兒子;要給他起名叫依市瑪耳,因為上主俯聽了你的苦訴。
12 ೧೨ ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.
他將來為人,像頭野驢;他要反對眾人,眾人也要反對他;他要衝著自己的眾兄弟支搭帳幕。」
13 ೧೩ ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
哈加爾遂給那對她說話的上主起名叫「你是看顧人的天主,」因為她說:「我不是也看見了那看顧人的天主嗎﹖」
14 ೧೪ ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
為此她給那井起名叫拉海洛依井。這井是在卡德士與貝勒得之間。
15 ೧೫ ಹಾಗರಳು ಅಬ್ರಾಮನಿಂದ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.
哈加爾給亞巴郎生了一個兒子,亞巴郎給哈加爾所生的兒子,起名叫依市瑪耳。
16 ೧೬ ಹಾಗರಳು ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರ್ಷದವನಾಗಿದ್ದನು.
哈加爾給亞巴郎生依市瑪耳時,亞巴郎已八十六歲。

< ಆದಿಕಾಂಡ 16 >