< ಆದಿಕಾಂಡ 2 >
1 ೧ ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.
천지와 만물이 다 이루니라
2 ೨ ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.
하나님의 지으시던 일이 일곱째 날이 이를 때에 마치니 그 지으시던 일이 다하므로 일곱째 날에 안식하시니라
3 ೩ ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
하나님이 일곱째 날을 복 주사 거룩하게 하셨으니 이는 하나님이 그 창조하시며 만드시던 모든 일을 마치시고 이 날에 안식하셨음이더라
4 ೪ ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.
여호와 하나님이 천지를 창조하신 때에 천지의 창조된 대략이 이러하니라
5 ೫ ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
여호와 하나님이 땅에 비를 내리지 아니하셨고 경작할 사람도 없었으므로 들에는 초목이 아직 없었고 밭에는 채소가 나지 아니하였으며
6 ೬ ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.
안개만 땅에서 올라와 온 지면을 적셨더라
7 ೭ ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
여호와 하나님이 흙으로 사람을 지으시고 생기를 그 코에 불어 넣으시니 사람이 생령이 된지라
8 ೮ ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
여호와 하나님이 동방의 에덴에 동산을 창설하시고 그 지으신 사람을 거기 두시고
9 ೯ ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
여호와 하나님이 그 땅에서 보기에 아름답고 먹기에 좋은 나무가 나게 하시니 동산 가운데에는 생명나무와 선악을 알게하는 나무도 있더라
10 ೧೦ ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
강이 에덴에서 발원하여 동산을 적시고 거기서부터 갈라져 네 근원이 되었으니
11 ೧೧ ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
첫째의 이름은 비손이라 금이 있는 하윌라 온 땅에 둘렸으며
12 ೧೨ ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.
그 땅의 금은 정금이요 그 곳에는 베델리엄과 호마노도 있으며
13 ೧೩ ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
둘째 강의 이름은 기혼이라 구스 온 땅에 둘렸고
14 ೧೪ ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
세째 강의 이름은 힛데겔이라 앗수르 동편으로 흐르며 네째 강은 유브라데더라
15 ೧೫ ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
여호와 하나님이 그 사람을 이끌어 에덴 동산에 두사 그것을 다스리며 지키게 하시고
16 ೧೬ ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
여호와 하나님이 그 사람에게 명하여 가라사대 동산 각종 나무의 실과는 네가 임의로 먹되
17 ೧೭ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
선악을 알게하는 나무의 실과는 먹지 말라! 네가 먹는 날에는 정녕 죽으리라! 하시니라
18 ೧೮ ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
여호와 하나님이 가라사대 사람의 독처하는 것이 좋지 못하니 내가 그를 위하여 돕는 배필을 지으리라 하시니라
19 ೧೯ ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
여호와 하나님이 흙으로 각종 들짐승과 공중의 각종 새를 지으시고 아담이 어떻게 이름을 짓나 보시려고 그것들을 그에게로 이끌어 이르시니 아담이 각 생물을 일컫는 바가 곧 그 이름이라
20 ೨೦ ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
아담이 모든 육축과 공중의 새와 들의 모든 짐승에게 이름을 주니라 아담이 돕는 배필이 없으므로
21 ೨೧ ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
여호와 하나님이 아담을 깊이 잠들게 하시니 잠들매 그가 그 갈빗대 하나를 취하고 살로 대신 채우시고
22 ೨೨ ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
여호와 하나님이 아담에게서 취하신 그 갈빗대로 여자를 만드시고 그를 아담에게로 이끌어 오시니
23 ೨೩ “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
아담이 가로되 `이는 내 뼈 중의 뼈요! 살 중의 살이라! 이것을 남자에게서 취하였은즉 여자라 칭하리라' 하니라
24 ೨೪ ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
이러므로 남자가 부모를 떠나 그 아내와 연합하여 둘이 한 몸을 이룰지로다!
25 ೨೫ ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
아담과 그 아내 두 사람이 벌거벗었으나 부끄러워 아니하니라