< ಆದಿಕಾಂಡ 22 >
1 ೧ ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.
Now after these things, God put Abraham to the test, and said to him, Abraham; and he said, Here am I.
2 ೨ ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.
And he said to him, Take your son, your dearly loved only son Isaac, and go to the land of Moriah and give him as a burned offering on one of the mountains of which I will give you knowledge.
3 ೩ ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
And Abraham got up early in the morning, and made ready his ass, and took with him two of his young men and Isaac, his son, and after the wood for the burned offering had been cut, he went on his way to the place of which God had given him word.
4 ೪ ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ,
And on the third day, Abraham, lifting up his eyes, saw the place a long way off.
5 ೫ “ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು.
Then he said to his young men, Keep here with the ass; and I and the boy will go on and give worship and come back again to you.
6 ೬ ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.
And Abraham put the wood for the burned offering on his son's back, and he himself took the fire and the knife in his hand, and the two of them went on together.
7 ೭ ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ,
Then Isaac said to Abraham, My father; and he said, Here am I, my son. And he said, We have wood and fire here, but where is the lamb for the burned offering?
8 ೮ ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.
And Abraham said, God himself will give the lamb for the burned offering: so they went on together.
9 ೯ ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
And they came to the place of which God had given him knowledge; and there Abraham made the altar and put the wood in place on it, and having made tight the bands round Isaac his son, he put him on the wood on the altar.
10 ೧೦ ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು.
And stretching out his hand, Abraham took the knife to put his son to death.
11 ೧೧ ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.
But the voice of the angel of the Lord came from heaven, saying, Abraham, Abraham: and he said, Here am I.
12 ೧೨ ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.
And he said, Let not your hand be stretched out against the boy to do anything to him; for now I am certain that the fear of God is in your heart, because you have not kept back your son, your only son, from me.
13 ೧೩ ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.
And lifting up his eyes, Abraham saw a sheep fixed by its horns in the brushwood: and Abraham took the sheep and made a burned offering of it in place of his son.
14 ೧೪ ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.
And Abraham gave that place the name Yahweh-yireh: as it is said to this day, In the mountain the Lord is seen.
15 ೧೫ ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,
And the voice of the angel of the Lord came to Abraham a second time from heaven,
16 ೧೬ “ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
Saying, I have taken an oath by my name, says the Lord, because you have done this and have not kept back from me your dearly loved only son,
17 ೧೭ ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
That I will certainly give you my blessing, and your seed will be increased like the stars of heaven and the sand by the seaside; your seed will take the land of those who are against them;
18 ೧೮ ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.
And your seed will be a blessing to all the nations of the earth, because you have done what I gave you orders to do.
19 ೧೯ ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.
Then Abraham went back to his young men and they went together to Beer-sheba, the place where Abraham was living.
20 ೨೦ ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.
After these things, Abraham had news that Milcah, the wife of his brother Nahor, had given birth to children;
21 ೨೧ ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.
Uz the oldest, and Buz his brother, and Kemuel, the father of Aram,
22 ೨೨ ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರೇ.
And Chesed and Hazo and Pildash and Jidlaph and Bethuel.
23 ೨೩ ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.
Bethuel was the father of Rebekah: these eight were the children of Milcah and Nahor, Abraham's brother.
24 ೨೪ ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.
And his servant Reumah gave birth to Tebah and Gaham and Tahash and Maacah.