< ಆದಿಕಾಂಡ 23 >
1 ೧ ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದಳು. ಇದು ಅವಳ ಒಟ್ಟು ಜೀವಮಾನ ಕಾಲದ ವರ್ಷಗಳು.
१सारा तो एक सौ सताईस वर्ष की आयु को पहुँची; और जब सारा की इतनी आयु हुई;
2 ೨ ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.
२तब वह किर्यतअर्बा में मर गई। यह तो कनान देश में है, और हेब्रोन भी कहलाता है। इसलिए अब्राहम सारा के लिये रोने-पीटने को वहाँ गया।
3 ೩ ಆಮೇಲೆ ಆಕೆಯ ಶವದ ಬಳಿಯಿಂದ ಅಬ್ರಹಾಮನು ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ,
३तब अब्राहम शव के पास से उठकर हित्तियों से कहने लगा,
4 ೪ “ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.
४“मैं तुम्हारे बीच अतिथि और परदेशी हूँ; मुझे अपने मध्य में कब्रिस्तान के लिये ऐसी भूमि दो जो मेरी निज की हो जाए, कि मैं अपने मृतक को गाड़कर अपनी आँख से दूर करूँ।”
5 ೫ ಹಿತ್ತಿಯರು ಅಬ್ರಹಾಮನಿಗೆ,
५हित्तियों ने अब्राहम से कहा,
6 ೬ “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು
६“हे हमारे प्रभु, हमारी सुन; तू तो हमारे बीच में बड़ा प्रधान है। हमारी कब्रों में से जिसको तू चाहे उसमें अपने मृतक को गाड़; हम में से कोई तुझे अपनी कब्र के लेने से न रोकेगा, कि तू अपने मृतक को उसमें गाड़ने न पाए।”
7 ೭ ಅಬ್ರಹಾಮನು ಎದ್ದು, ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು.
७तब अब्राहम उठकर खड़ा हुआ, और हित्तियों के सामने, जो उस देश के निवासी थे, दण्डवत् करके कहने लगा,
8 ೮ ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,
८“यदि तुम्हारी यह इच्छा हो कि मैं अपने मृतक को गाड़कर अपनी आँख से दूर करूँ, तो मेरी प्रार्थना है, कि सोहर के पुत्र एप्रोन से मेरे लिये विनती करो,
9 ೯ ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.
९कि वह अपनी मकपेलावाली गुफा, जो उसकी भूमि की सीमा पर है; उसका पूरा दाम लेकर मुझे दे दे, कि वह तुम्हारे बीच कब्रिस्तान के लिये मेरी निज भूमि हो जाए।”
10 ೧೦ ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,
१०एप्रोन तो हित्तियों के बीच वहाँ बैठा हुआ था, इसलिए जितने हित्ती उसके नगर के फाटक से होकर भीतर जाते थे, उन सभी के सामने उसने अब्राहम को उत्तर दिया,
11 ೧೧ “ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”
११“हे मेरे प्रभु, ऐसा नहीं, मेरी सुन; वह भूमि मैं तुझे देता हूँ, और उसमें जो गुफा है, वह भी मैं तुझे देता हूँ; अपने जातिभाइयों के सम्मुख मैं उसे तुझको दिए देता हूँ; अतः अपने मृतक को कब्र में रख।”
12 ೧೨ ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ
१२तब अब्राहम ने उस देश के निवासियों के सामने दण्डवत् किया।
13 ೧೩ ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.
१३और उनके सुनते हुए एप्रोन से कहा, “यदि तू ऐसा चाहे, तो मेरी सुन उस भूमि का जो दाम हो, वह मैं देना चाहता हूँ; उसे मुझसे ले ले, तब मैं अपने मुर्दे को वहाँ गाड़ूँगा।”
14 ೧೪ ಅದಕ್ಕೆ ಎಫ್ರೋನನು ಅಬ್ರಹಾಮನಿಗೆ,
१४एप्रोन ने अब्राहम को यह उत्तर दिया,
15 ೧೫ “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.
१५“हे मेरे प्रभु, मेरी बात सुन; उस भूमि का दाम तो चार सौ शेकेल रूपा है; पर मेरे और तेरे बीच में यह क्या है? अपने मुर्दे को कब्र में रख।”
16 ೧೬ ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
१६अब्राहम ने एप्रोन की मानकर उसको उतना रूपा तौल दिया, जितना उसने हित्तियों के सुनते हुए कहा था, अर्थात् चार सौ ऐसे शेकेल जो व्यापारियों में चलते थे।
17 ೧೭ ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,
१७इस प्रकार एप्रोन की भूमि, जो मम्रे के सम्मुख मकपेला में थी, वह गुफा समेत, और उन सब वृक्षों समेत भी जो उसमें और उसके चारों ओर सीमा पर थे,
18 ೧೮ ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.
१८जितने हित्ती उसके नगर के फाटक से होकर भीतर जाते थे, उन सभी के सामने अब्राहम के अधिकार में पक्की रीति से आ गई।
19 ೧೯ ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.
१९इसके पश्चात् अब्राहम ने अपनी पत्नी सारा को उस मकपेलावाली भूमि की गुफा में जो मम्रे के अर्थात् हेब्रोन के सामने कनान देश में है, मिट्टी दी।
20 ೨೦ ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.
२०इस प्रकार वह भूमि गुफा समेत, जो उसमें थी, हित्तियों की ओर से कब्रिस्तान के लिये अब्राहम के अधिकार में पूरी रीति से आ गई।