< ಆದಿಕಾಂಡ 23 >

1 ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದಳು. ಇದು ಅವಳ ಒಟ್ಟು ಜೀವಮಾನ ಕಾಲದ ವರ್ಷಗಳು.
Zato tsi-roapolo fito’amby taoñe ty haantera’ i Sarà, ty taon-kavelo’ i Sarà,
2 ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.
ie nivilasy e Kiriàte-arbà (toe i Kebròne) an-tane’ Kanàne ao; le nimbeo t’i Avrahame handala i Sarà vaho hirovetse aze.
3 ಆಮೇಲೆ ಆಕೆಯ ಶವದ ಬಳಿಯಿಂದ ಅಬ್ರಹಾಮನು ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ,
Niongak’ amy vilasi’ey t’i Avrahame vaho nisaontsy amo nte-Kheteo, ami’ty hoe,
4 “ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.
Renetane naho mpañialo ama’ areo iraho; anoloro hanañañe ama’ areo handentehako i vilasikoy tsy ho aolom-pihaino.
5 ಹಿತ್ತಿಯರು ಅಬ್ರಹಾಮನಿಗೆ,
Le hoe ty natoi’ o nte-Kheteo amy Avrahame,
6 “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು
Ijanjiño roandriako; Mpifeleke ama’ay irehe. Alenteho an-kibory lengo’e ama’ay i vilasi’oy, tsy ia ama’ay ty hitañe azo amy lona’ey tsy handeveña’o i vilasi’oy.
7 ಅಬ್ರಹಾಮನು ಎದ್ದು, ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು.
Niongake t’i Avrahame vaho nibokok’ am’ ondati’ i taneio, amo ana’ i Kheteo,
8 ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,
le nisaon­tsia’e ty hoe, Naho no’areo ty handentehako tsy ho aolom-pihainoko i vilasikoy, le janjiño, vaho halalio t’i Efrone ana’ i Tsokare
9 ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.
ty hanolora’e ahiko i lakato’ i Makpelà ama’ey; i añ’ ila’ i tete’eiy. Ami’ty vola-foty do’e ty hanolora’e ahy ho fanañako añivo’ areo ao ho fandentehako.
10 ೧೦ ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,
Niam­besatse añivo’ o nte-Kheteo t’i Efrone; vaho hoe ty natoi’ i Efrone nte-Khete amy Avrahame am-pijanjiña’ ze hene nte-Khete mpiheo mb’an-dalam-bei’ i rovaio:
11 ೧೧ “ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”
Aiy! ry Androanavio: Janjiño iraho, fa omeiko azo i tonday, naho atoloko azo i lakato ama’ey. Añatrefa’ o ana’ ondatiko etoañe ty anolorako azo; aleveño i vilasi’o.
12 ೧೨ ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ
Aa le nibokok’ añatrefa’ ondati’ i taneio t’i Avrahame,
13 ೧೩ ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.
vaho nanao ty hoe amy Efrone am-pijanjiña’ ondati’ i taneio, Aa naho mete le janjiño o ahikoo! Hitolo­rako drala amy tetekey; andrambeso amako le haleveko ao i vilasikoy.
14 ೧೪ ಅದಕ್ಕೆ ಎಫ್ರೋನನು ಅಬ್ರಹಾಮನಿಗೆ,
Nanoiñe i Avrahame t’i Efrone ami’ty hoe,
15 ೧೫ “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.
O talèko, Inao; mañeva 400 sekelem-bolafoty i taney, fa inon-jay añivon-tika? Aleveño i vilasi’oy.
16 ೧೬ ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
Niantofa’ i Avrahame t’i Efrone le linanja’e amy Efrone i volafoty tsinara’e am-pijanjiña’ o nte-Kheteoy, i sekele volafoty 400 an-danjam-pandetake rey.
17 ೧೭ ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,
Aa le tsitsike voalily ty tonda’ i Efrone e Makpelà ao atiñana’ i Mamrè añe, i tetekey reketse ty lakato’e ao, naho ze hatae amy tetekey naho ze mifahetse amy taney,
18 ೧೮ ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.
amy Avrahame ho fanaña’e añatrefa’ o ana’ i Kheteo, aolo’ ze mpimoak’ an-dalambei’ i rovay.
19 ೧೯ ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.
Añe izay le naleve’ i Avrahame amy lakato an-tete’ i Makpelày miatreke i Mamrè (toe i Khebrone) an-tane Kanàne ao t’i Sarà.
20 ೨೦ ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.
Songa pinate’ o ana’ i Kheteo ho a i Avrahame i tonday rekets’ i lakato ama’e ao ho fandetehañe.

< ಆದಿಕಾಂಡ 23 >