< ಆದಿಕಾಂಡ 24 >

1 ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.
וְאַבְרָהָ֣ם זָקֵ֔ן בָּ֖א בַּיָּמִ֑ים וַֽיהוָ֛ה בֵּרַ֥ךְ אֶת־אַבְרָהָ֖ם בַּכֹּֽל׃
2 ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.
וַיֹּ֣אמֶר אַבְרָהָ֗ם אֶל־עַבְדּוֹ֙ זְקַ֣ן בֵּית֔וֹ הַמֹּשֵׁ֖ל בְּכָל־אֲשֶׁר־ל֑וֹ שִֽׂים־נָ֥א יָדְךָ֖ תַּ֥חַת יְרֵכִֽי׃
3 ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,
וְאַשְׁבִּ֣יעֲךָ֔ בַּֽיהוָה֙ אֱלֹהֵ֣י הַשָּׁמַ֔יִם וֵֽאלֹהֵ֖י הָאָ֑רֶץ אֲשֶׁ֨ר לֹֽא־תִקַּ֤ח אִשָּׁה֙ לִבְנִ֔י מִבְּנוֹת֙ הַֽכְּנַעֲנִ֔י אֲשֶׁ֥ר אָנֹכִ֖י יוֹשֵׁ֥ב בְּקִרְבּֽוֹ׃
4 ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.
כִּ֧י אֶל־אַרְצִ֛י וְאֶל־מוֹלַדְתִּ֖י תֵּלֵ֑ךְ וְלָקַחְתָּ֥ אִשָּׁ֖ה לִבְנִ֥י לְיִצְחָֽק׃
5 ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು.
וַיֹּ֤אמֶר אֵלָיו֙ הָעֶ֔בֶד אוּלַי֙ לֹא־תֹאבֶ֣ה הָֽאִשָּׁ֔ה לָלֶ֥כֶת אַחֲרַ֖י אֶל־הָאָ֣רֶץ הַזֹּ֑את הֶֽהָשֵׁ֤ב אָשִׁיב֙ אֶת־בִּנְךָ֔ אֶל־הָאָ֖רֶץ אֲשֶׁר־יָצָ֥אתָ מִשָּֽׁם׃
6 ಅಬ್ರಹಾಮನು ಅವನಿಗೆ, “ಅಲ್ಲಿಗೆ ನನ್ನ ಮಗನನ್ನು ಎಂದಿಗೂ ಕರೆದುಕೊಂಡು ಹೋಗಲೇ ಬಾರದು.
וַיֹּ֥אמֶר אֵלָ֖יו אַבְרָהָ֑ם הִשָּׁ֣מֶר לְךָ֔ פֶּן־תָּשִׁ֥יב אֶת־בְּנִ֖י שָֽׁמָּה׃
7 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.
יְהוָ֣ה ׀ אֱלֹהֵ֣י הַשָּׁמַ֗יִם אֲשֶׁ֨ר לְקָחַ֜נִי מִבֵּ֣ית אָבִי֮ וּמֵאֶ֣רֶץ מֽוֹלַדְתִּי֒ וַאֲשֶׁ֨ר דִּבֶּר־לִ֜י וַאֲשֶׁ֤ר נִֽשְׁבַּֽע־לִי֙ לֵאמֹ֔ר לְזַ֨רְעֲךָ֔ אֶתֵּ֖ן אֶת־הָאָ֣רֶץ הַזֹּ֑את ה֗וּא יִשְׁלַ֤ח מַלְאָכוֹ֙ לְפָנֶ֔יךָ וְלָקַחְתָּ֥ אִשָּׁ֛ה לִבְנִ֖י מִשָּֽׁם׃
8 ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
וְאִם־לֹ֨א תֹאבֶ֤ה הָֽאִשָּׁה֙ לָלֶ֣כֶת אַחֲרֶ֔יךָ וְנִקִּ֕יתָ מִשְּׁבֻעָתִ֖י זֹ֑את רַ֣ק אֶת־בְּנִ֔י לֹ֥א תָשֵׁ֖ב שָֽׁמָּה׃
9 ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣಮಾಡಿದನು.
וַיָּ֤שֶׂם הָעֶ֙בֶד֙ אֶת־יָד֔וֹ תַּ֛חַת יֶ֥רֶךְ אַבְרָהָ֖ם אֲדֹנָ֑יו וַיִּשָּׁ֣בַֽע ל֔וֹ עַל־הַדָּבָ֖ר הַזֶּֽה׃
10 ೧೦ ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
וַיִּקַּ֣ח הָ֠עֶבֶד עֲשָׂרָ֨ה גְמַלִּ֜ים מִגְּמַלֵּ֤י אֲדֹנָיו֙ וַיֵּ֔לֶךְ וְכָל־ט֥וּב אֲדֹנָ֖יו בְּיָד֑וֹ וַיָּ֗קָם וַיֵּ֛לֶךְ אֶל־אֲרַ֥ם נַֽהֲרַ֖יִם אֶל־עִ֥יר נָחֽוֹר׃
11 ೧೧ ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.
וַיַּבְרֵ֧ךְ הַגְּמַלִּ֛ים מִח֥וּץ לָעִ֖יר אֶל־בְּאֵ֣ר הַמָּ֑יִם לְעֵ֣ת עֶ֔רֶב לְעֵ֖ת צֵ֥את הַשֹּׁאֲבֹֽת׃
12 ೧೨ “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.
וַיֹּאמַ֓ר ׀ יְהוָ֗ה אֱלֹהֵי֙ אֲדֹנִ֣י אַבְרָהָ֔ם הַקְרֵה־נָ֥א לְפָנַ֖י הַיּ֑וֹם וַעֲשֵׂה־חֶ֕סֶד עִ֖ם אֲדֹנִ֥י אַבְרָהָֽם׃
13 ೧೩ ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.
הִנֵּ֛ה אָנֹכִ֥י נִצָּ֖ב עַל־עֵ֣ין הַמָּ֑יִם וּבְנוֹת֙ אַנְשֵׁ֣י הָעִ֔יר יֹצְאֹ֖ת לִשְׁאֹ֥ב מָֽיִם׃
14 ೧೪ ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.
וְהָיָ֣ה הַֽנַּעֲרָ֗ אֲשֶׁ֨ר אֹמַ֤ר אֵלֶ֙יהָ֙ הַטִּי־נָ֤א כַדֵּךְ֙ וְאֶשְׁתֶּ֔ה וְאָמְרָ֣ה שְׁתֵ֔ה וְגַם־גְּמַלֶּ֖יךָ אַשְׁקֶ֑ה אֹתָ֤הּ הֹכַ֙חְתָּ֙ לְעַבְדְּךָ֣ לְיִצְחָ֔ק וּבָ֣הּ אֵדַ֔ע כִּי־עָשִׂ֥יתָ חֶ֖סֶד עִם־אֲדֹנִֽי׃
15 ೧೫ ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.
וַֽיְהִי־ה֗וּא טֶרֶם֮ כִּלָּ֣ה לְדַבֵּר֒ וְהִנֵּ֧ה רִבְקָ֣ה יֹצֵ֗את אֲשֶׁ֤ר יֻלְּדָה֙ לִבְתוּאֵ֣ל בֶּן־מִלְכָּ֔ה אֵ֥שֶׁת נָח֖וֹר אֲחִ֣י אַבְרָהָ֑ם וְכַדָּ֖הּ עַל־שִׁכְמָֽהּ׃
16 ೧೬ ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.
וְהַֽנַּעֲרָ֗ טֹבַ֤ת מַרְאֶה֙ מְאֹ֔ד בְּתוּלָ֕ה וְאִ֖ישׁ לֹ֣א יְדָעָ֑הּ וַתֵּ֣רֶד הָעַ֔יְנָה וַתְּמַלֵּ֥א כַדָּ֖הּ וַתָּֽעַל׃
17 ೧೭ ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು.
וַיָּ֥רָץ הָעֶ֖בֶד לִקְרָאתָ֑הּ וַיֹּ֕אמֶר הַגְמִיאִ֥ינִי נָ֛א מְעַט־מַ֖יִם מִכַּדֵּֽךְ׃
18 ೧೮ ಆಕೆ ತಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ “ಕುಡಿಯಿರಿ” ಎಂದು ಕುಡಿಯಲು ಕೊಟ್ಟಳು.
וַתֹּ֖אמֶר שְׁתֵ֣ה אֲדֹנִ֑י וַתְּמַהֵ֗ר וַתֹּ֧רֶד כַּדָּ֛הּ עַל־יָדָ֖הּ וַתַּשְׁקֵֽהוּ׃
19 ೧೯ ನೀರು ಕೊಟ್ಟ ಮೇಲೆ, “ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ” ಎಂದು ಹೇಳಿ,
וַתְּכַ֖ל לְהַשְׁקֹת֑וֹ וַתֹּ֗אמֶר גַּ֤ם לִגְמַלֶּ֙יךָ֙ אֶשְׁאָ֔ב עַ֥ד אִם־כִּלּ֖וּ לִשְׁתֹּֽת׃
20 ೨೦ ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.
וַתְּמַהֵ֗ר וַתְּעַ֤ר כַּדָּהּ֙ אֶל־הַשֹּׁ֔קֶת וַתָּ֥רָץ ע֛וֹד אֶֽל־הַבְּאֵ֖ר לִשְׁאֹ֑ב וַתִּשְׁאַ֖ב לְכָל־גְּמַלָּֽיו׃
21 ೨೧ ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.
וְהָאִ֥ישׁ מִשְׁתָּאֵ֖ה לָ֑הּ מַחֲרִ֕ישׁ לָדַ֗עַת הַֽהִצְלִ֧יחַ יְהוָ֛ה דַּרְכּ֖וֹ אִם־לֹֽא׃
22 ೨೨ ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.
וַיְהִ֗י כַּאֲשֶׁ֨ר כִּלּ֤וּ הַגְּמַלִּים֙ לִשְׁתּ֔וֹת וַיִּקַּ֤ח הָאִישׁ֙ נֶ֣זֶם זָהָ֔ב בֶּ֖קַע מִשְׁקָל֑וֹ וּשְׁנֵ֤י צְמִידִים֙ עַל־יָדֶ֔יהָ עֲשָׂרָ֥ה זָהָ֖ב מִשְׁקָלָֽם׃
23 ೨೩ ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?” ಎಂದು ಕೇಳಲು.
וַיֹּ֙אמֶר֙ בַּת־מִ֣י אַ֔תְּ הַגִּ֥ידִי נָ֖א לִ֑י הֲיֵ֧שׁ בֵּית־אָבִ֛יךְ מָק֥וֹם לָ֖נוּ לָלִֽין׃
24 ೨೪ ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಕೊಟ್ಟಳು.
וַתֹּ֣אמֶר אֵלָ֔יו בַּת־בְּתוּאֵ֖ל אָנֹ֑כִי בֶּן־מִלְכָּ֕ה אֲשֶׁ֥ר יָלְדָ֖ה לְנָחֽוֹר׃
25 ೨೫ ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ” ಎಂದಳು.
וַתֹּ֣אמֶר אֵלָ֔יו גַּם־תֶּ֥בֶן גַּם־מִסְפּ֖וֹא רַ֣ב עִמָּ֑נוּ גַּם־מָק֖וֹם לָלֽוּן׃
26 ೨೬ ಆ ಮನುಷ್ಯನು ಇದನ್ನು ಕೇಳಿ ಅಡ್ಡಬಿದ್ದು ಯೆಹೋವನಿಗೆ ನಮಸ್ಕರಿಸಿ,
וַיִּקֹּ֣ד הָאִ֔ישׁ וַיִּשְׁתַּ֖חוּ לַֽיהוָֽה׃
27 ೨೭ “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.
וַיֹּ֗אמֶר בָּר֤וּךְ יְהוָה֙ אֱלֹהֵי֙ אֲדֹנִ֣י אַבְרָהָ֔ם אֲ֠שֶׁר לֹֽא־עָזַ֥ב חַסְדּ֛וֹ וַאֲמִתּ֖וֹ מֵעִ֣ם אֲדֹנִ֑י אָנֹכִ֗י בַּדֶּ֙רֶךְ֙ נָחַ֣נִי יְהוָ֔ה בֵּ֖ית אֲחֵ֥י אֲדֹנִֽי׃
28 ೨೮ ಆ ಹುಡುಗಿಯು ಓಡಿ ಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯವರಿಗೆ ತಿಳಿಸಿದಳು.
וַתָּ֙רָץ֙ הַֽנַּעֲרָ֔ וַתַּגֵּ֖ד לְבֵ֣ית אִמָּ֑הּ כַּדְּבָרִ֖ים הָאֵֽלֶּה׃
29 ೨೯ ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.
וּלְרִבְקָ֥ה אָ֖ח וּשְׁמ֣וֹ לָבָ֑ן וַיָּ֨רָץ לָבָ֧ן אֶל־הָאִ֛ישׁ הַח֖וּצָה אֶל־הָעָֽיִן׃
30 ೩೦ ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕ್ಕಳು ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು.
וַיְהִ֣י ׀ כִּרְאֹ֣ת אֶת־הַנֶּ֗זֶם וְֽאֶת־הַצְּמִדִים֮ עַל־יְדֵ֣י אֲחֹתוֹ֒ וּכְשָׁמְע֗וֹ אֶת־דִּבְרֵ֞י רִבְקָ֤ה אֲחֹתוֹ֙ לֵאמֹ֔ר כֹּֽה־דִבֶּ֥ר אֵלַ֖י הָאִ֑ישׁ וַיָּבֹא֙ אֶל־הָאִ֔ישׁ וְהִנֵּ֛ה עֹמֵ֥ד עַל־הַגְּמַלִּ֖ים עַל־הָעָֽיִן׃
31 ೩೧ ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು.
וַיֹּ֕אמֶר בּ֖וֹא בְּר֣וּךְ יְהוָ֑ה לָ֤מָּה תַעֲמֹד֙ בַּח֔וּץ וְאָנֹכִי֙ פִּנִּ֣יתִי הַבַּ֔יִת וּמָק֖וֹם לַגְּמַלִּֽים׃
32 ೩೨ ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.
וַיָּבֹ֤א הָאִישׁ֙ הַבַּ֔יְתָה וַיְפַתַּ֖ח הַגְּמַלִּ֑ים וַיִּתֵּ֨ן תֶּ֤בֶן וּמִסְפּוֹא֙ לַגְּמַלִּ֔ים וּמַ֙יִם֙ לִרְחֹ֣ץ רַגְלָ֔יו וְרַגְלֵ֥י הָאֲנָשִׁ֖ים אֲשֶׁ֥ר אִתּֽוֹ׃
33 ೩೩ ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ” ಅನ್ನಲು ಲಾಬಾನನು, “ಹೇಳು” ಎಂದನು.
ויישם לְפָנָיו֙ לֶאֱכֹ֔ל וַיֹּ֙אמֶר֙ לֹ֣א אֹכַ֔ל עַ֥ד אִם־דִּבַּ֖רְתִּי דְּבָרָ֑י וַיֹּ֖אמֶר דַּבֵּֽר׃
34 ೩೪ ಆಗ ಅವನು, “ನಾನು ಅಬ್ರಹಾಮನ ಸೇವಕನು.
וַיֹּאמַ֑ר עֶ֥בֶד אַבְרָהָ֖ם אָנֹֽכִי׃
35 ೩೫ ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.
וַיהוָ֞ה בֵּרַ֧ךְ אֶת־אֲדֹנִ֛י מְאֹ֖ד וַיִּגְדָּ֑ל וַיִּתֶּן־ל֞וֹ צֹ֤אן וּבָקָר֙ וְכֶ֣סֶף וְזָהָ֔ב וַעֲבָדִם֙ וּשְׁפָחֹ֔ת וּגְמַלִּ֖ים וַחֲמֹרִֽים׃
36 ೩೬ ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ.
וַתֵּ֡לֶד שָׂרָה֩ אֵ֨שֶׁת אֲדֹנִ֥י בֵן֙ לַֽאדֹנִ֔י אַחֲרֵ֖י זִקְנָתָ֑הּ וַיִּתֶּן־לּ֖וֹ אֶת־כָּל ־אֲשֶׁר־לֽוֹ׃
37 ೩೭ ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, ‘ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ
וַיַּשְׁבִּעֵ֥נִי אֲדֹנִ֖י לֵאמֹ֑ר לֹא־תִקַּ֤ח אִשָּׁה֙ לִבְנִ֔י מִבְּנוֹת֙ הַֽכְּנַעֲנִ֔י אֲשֶׁ֥ר אָנֹכִ֖י יֹשֵׁ֥ב בְּאַרְצֽוֹ׃
38 ೩೮ ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.’
אִם־לֹ֧א אֶל־בֵּית־אָבִ֛י תֵּלֵ֖ךְ וְאֶל־מִשְׁפַּחְתִּ֑י וְלָקַחְתָּ֥ אִשָּׁ֖ה לִבְנִֽי׃
39 ೩೯ ನಾನು ನನ್ನ ದಣಿಗೆ, ‘ಒಂದು ವೇಳೆ ನನ್ನ ಹಿಂದೆ ಬರುವುದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ’” ಎಂದು ಹೇಳಲು.
וָאֹמַ֖ר אֶל־אֲדֹנִ֑י אֻלַ֛י לֹא־תֵלֵ֥ךְ הָאִשָּׁ֖ה אַחֲרָֽי׃
40 ೪೦ ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.
וַיֹּ֖אמֶר אֵלָ֑י יְהוָ֞ה אֲשֶׁר־הִתְהַלַּ֣כְתִּי לְפָנָ֗יו יִשְׁלַ֨ח מַלְאָכ֤וֹ אִתָּךְ֙ וְהִצְלִ֣יחַ דַּרְכֶּ֔ךָ וְלָקַחְתָּ֤ אִשָּׁה֙ לִבְנִ֔י מִמִּשְׁפַּחְתִּ֖י וּמִבֵּ֥ית אָבִֽי׃
41 ೪೧ ಆ ಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಹೋದಾಗ ನನ್ನ ಬಂಧುಗಳಲ್ಲಿ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ” ಎಂದು ಹೇಳಿದನು.
אָ֤ז תִּנָּקֶה֙ מֵאָ֣לָתִ֔י כִּ֥י תָב֖וֹא אֶל־מִשְׁפַּחְתִּ֑י וְאִם־לֹ֤א יִתְּנוּ֙ לָ֔ךְ וְהָיִ֥יתָ נָקִ֖י מֵאָלָתִֽי׃
42 ೪೨ ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ
וָאָבֹ֥א הַיּ֖וֹם אֶל־הָעָ֑יִן וָאֹמַ֗ר יְהוָה֙ אֱלֹהֵי֙ אֲדֹנִ֣י אַבְרָהָ֔ם אִם־יֶשְׁךָ־נָּא֙ מַצְלִ֣יחַ דַּרְכִּ֔י אֲשֶׁ֥ר אָנֹכִ֖י הֹלֵ֥ךְ עָלֶֽיהָ׃
43 ೪೩ ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು,
הִנֵּ֛ה אָנֹכִ֥י נִצָּ֖ב עַל־עֵ֣ין הַמָּ֑יִם וְהָיָ֤ה הָֽעַלְמָה֙ הַיֹּצֵ֣את לִשְׁאֹ֔ב וְאָמַרְתִּ֣י אֵלֶ֔יהָ הַשְׁקִֽינִי־נָ֥א מְעַט־מַ֖יִם מִכַּדֵּֽךְ׃
44 ೪೪ ‘ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ’ ಎಂದು,
וְאָמְרָ֤ה אֵלַי֙ גַּם־אַתָּ֣ה שְׁתֵ֔ה וְגַ֥ם לִגְמַלֶּ֖יךָ אֶשְׁאָ֑ב הִ֣וא הָֽאִשָּׁ֔ה אֲשֶׁר־הֹכִ֥יחַ יְהוָ֖ה לְבֶן־אֲדֹנִֽי׃
45 ೪೫ ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದೆನು.
אֲנִי֩ טֶ֨רֶם אֲכַלֶּ֜ה לְדַבֵּ֣ר אֶל־לִבִּ֗י וְהִנֵּ֨ה רִבְקָ֤ה יֹצֵאת֙ וְכַדָּ֣הּ עַל־שִׁכְמָ֔הּ וַתֵּ֥רֶד הָעַ֖יְנָה וַתִּשְׁאָ֑ב וָאֹמַ֥ר אֵלֶ֖יהָ הַשְׁקִ֥ינִי נָֽא׃
46 ೪೬ ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು.
וַתְּמַהֵ֗ר וַתּ֤וֹרֶד כַּדָּהּ֙ מֵֽעָלֶ֔יהָ וַתֹּ֣אמֶר שְׁתֵ֔ה וְגַם־גְּמַלֶּ֖יךָ אַשְׁקֶ֑ה וָאֵ֕שְׁתְּ וְגַ֥ם הַגְּמַלִּ֖ים הִשְׁקָֽתָה׃
47 ೪೭ ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು.
וָאֶשְׁאַ֣ל אֹתָ֗הּ וָאֹמַר֮ בַּת־מִ֣י אַתְּ֒ וַתֹּ֗אמֶר בַּת־בְּתוּאֵל֙ בֶּן־נָח֔וֹר אֲשֶׁ֥ר יָֽלְדָה־לּ֖וֹ מִלְכָּ֑ה וָאָשִׂ֤ם הַנֶּ֙זֶם֙ עַל־אַפָּ֔הּ וְהַצְּמִידִ֖ים עַל־יָדֶֽיהָ׃
48 ೪೮ ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.
וָאֶקֹּ֥ד וָֽאֶשְׁתַּחֲוֶ֖ה לַיהוָ֑ה וָאֲבָרֵ֗ךְ אֶת־יְהוָה֙ אֱלֹהֵי֙ אֲדֹנִ֣י אַבְרָהָ֔ם אֲשֶׁ֤ר הִנְחַ֙נִי֙ בְּדֶ֣רֶךְ אֱמֶ֔ת לָקַ֛חַת אֶת־בַּת־אֲחִ֥י אֲדֹנִ֖י לִבְנֽוֹ׃
49 ೪೯ ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು.
וְ֠עַתָּה אִם־יֶשְׁכֶ֨ם עֹשִׂ֜ים חֶ֧סֶד וֶֽאֱמֶ֛ת אֶת־אֲדֹנִ֖י הַגִּ֣ידוּ לִ֑י וְאִם־לֹ֕א הַגִּ֣ידוּ לִ֔י וְאֶפְנֶ֥ה עַל־יָמִ֖ין א֥וֹ עַל־שְׂמֹֽאל׃
50 ೫೦ ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;
וַיַּ֨עַן לָבָ֤ן וּבְתוּאֵל֙ וַיֹּ֣אמְר֔וּ מֵיְהוָ֖ה יָצָ֣א הַדָּבָ֑ר לֹ֥א נוּכַ֛ל דַּבֵּ֥ר אֵלֶ֖יךָ רַ֥ע אוֹ־טֽוֹב׃
51 ೫೧ ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ” ಎಂದರು.
הִנֵּֽה־רִבְקָ֥ה לְפָנֶ֖יךָ קַ֣ח וָלֵ֑ךְ וּתְהִ֤י אִשָּׁה֙ לְבֶן־אֲדֹנֶ֔יךָ כַּאֲשֶׁ֖ר דִּבֶּ֥ר יְהוָֽה׃
52 ೫೨ ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.
וַיְהִ֕י כַּאֲשֶׁ֥ר שָׁמַ֛ע עֶ֥בֶד אַבְרָהָ֖ם אֶת־דִּבְרֵיהֶ֑ם וַיִּשְׁתַּ֥חוּ אַ֖רְצָה לַֽיהוָֽה׃
53 ೫೩ ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.
וַיּוֹצֵ֨א הָעֶ֜בֶד כְּלֵי־כֶ֨סֶף וּכְלֵ֤י זָהָב֙ וּבְגָדִ֔ים וַיִּתֵּ֖ן לְרִבְקָ֑ה וּמִ֨גְדָּנֹ֔ת נָתַ֥ן לְאָחִ֖יהָ וּלְאִמָּֽהּ׃
54 ೫೪ ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು.
וַיֹּאכְל֣וּ וַיִּשְׁתּ֗וּ ה֛וּא וְהָאֲנָשִׁ֥ים אֲשֶׁר־עִמּ֖וֹ וַיָּלִ֑ינוּ וַיָּק֣וּמוּ בַבֹּ֔קֶר וַיֹּ֖אמֶר שַׁלְּחֻ֥נִי לַֽאדֹנִֽי׃
55 ೫೫ ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.
וַיֹּ֤אמֶר אָחִ֙יהָ֙ וְאִמָּ֔הּ תֵּשֵׁ֨ב הַנַּעֲרָ֥ אִתָּ֛נוּ יָמִ֖ים א֣וֹ עָשׂ֑וֹר אַחַ֖ר תֵּלֵֽךְ׃
56 ೫೬ ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು.
וַיֹּ֤אמֶר אֲלֵהֶם֙ אַל־תְּאַחֲר֣וּ אֹתִ֔י וַֽיהוָ֖ה הִצְלִ֣יחַ דַּרְכִּ֑י שַׁלְּח֕וּנִי וְאֵלְכָ֖ה לַֽאדֹנִֽי׃
57 ೫೭ ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ” ಎಂದರು.
וַיֹּאמְר֖וּ נִקְרָ֣א לַֽנַּעֲרָ֑ וְנִשְׁאֲלָ֖ה אֶת־פִּֽיהָ׃
58 ೫೮ ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು.
וַיִּקְרְא֤וּ לְרִבְקָה֙ וַיֹּאמְר֣וּ אֵלֶ֔יהָ הֲתֵלְכִ֖י עִם־הָאִ֣ישׁ הַזֶּ֑ה וַתֹּ֖אמֶר אֵלֵֽךְ׃
59 ೫೯ ಆಗ ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ, ಅವಳ ದಾಸಿಯರನ್ನು, ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು.
וַֽיְשַׁלְּח֛וּ אֶת־רִבְקָ֥ה אֲחֹתָ֖ם וְאֶת־מֵנִקְתָּ֑הּ וְאֶת־עֶ֥בֶד אַבְרָהָ֖ם וְאֶת־אֲנָשָֽׁיו׃
60 ೬೦ ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.
וַיְבָרֲכ֤וּ אֶת־רִבְקָה֙ וַיֹּ֣אמְרוּ לָ֔הּ אֲחֹתֵ֕נוּ אַ֥תְּ הֲיִ֖י לְאַלְפֵ֣י רְבָבָ֑ה וְיִירַ֣שׁ זַרְעֵ֔ךְ אֵ֖ת שַׁ֥עַר שֹׂנְאָֽיו׃
61 ೬೧ ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕರು ರೆಬೆಕ್ಕಳನ್ನು ಕರೆದುಕೊಂಡು ಹೊರಟನು.
וַתָּ֨קָם רִבְקָ֜ה וְנַעֲרֹתֶ֗יהָ וַתִּרְכַּ֙בְנָה֙ עַל־הַגְּמַלִּ֔ים וַתֵּלַ֖כְנָה אַחֲרֵ֣י הָאִ֑ישׁ וַיִּקַּ֥ח הָעֶ֛בֶד אֶת־רִבְקָ֖ה וַיֵּלַֽךְ׃
62 ೬೨ ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.
וְיִצְחָק֙ בָּ֣א מִבּ֔וֹא בְּאֵ֥ר לַחַ֖י רֹאִ֑י וְה֥וּא יוֹשֵׁ֖ב בְּאֶ֥רֶץ הַנֶּֽגֶב׃
63 ೬೩ ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.
וַיֵּצֵ֥א יִצְחָ֛ק לָשׂ֥וּחַ בַּשָּׂדֶ֖ה לִפְנ֣וֹת עָ֑רֶב וַיִּשָּׂ֤א עֵינָיו֙ וַיַּ֔רְא וְהִנֵּ֥ה גְמַלִּ֖ים בָּאִֽים׃
64 ೬೪ ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗೆ ಇಳಿದಳು.
וַתִּשָּׂ֤א רִבְקָה֙ אֶת־עֵינֶ֔יהָ וַתֵּ֖רֶא אֶת־יִצְחָ֑ק וַתִּפֹּ֖ל מֵעַ֥ל הַגָּמָֽל׃
65 ೬೫ ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.
וַתֹּ֣אמֶר אֶל־הָעֶ֗בֶד מִֽי־הָאִ֤ישׁ הַלָּזֶה֙ הַהֹלֵ֤ךְ בַּשָּׂדֶה֙ לִקְרָאתֵ֔נוּ וַיֹּ֥אמֶר הָעֶ֖בֶד ה֣וּא אֲדֹנִ֑י וַתִּקַּ֥ח הַצָּעִ֖יף וַתִּתְכָּֽס׃
66 ೬೬ ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು.
וַיְסַפֵּ֥ר הָעֶ֖בֶד לְיִצְחָ֑ק אֵ֥ת כָּל־הַדְּבָרִ֖ים אֲשֶׁ֥ר עָשָֽׂה׃
67 ೬೭ ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.
וַיְבִאֶ֣הָ יִצְחָ֗ק הָאֹ֙הֱלָה֙ שָׂרָ֣ה אִמּ֔וֹ וַיִּקַּ֧ח אֶת־רִבְקָ֛ה וַתְּהִי־ל֥וֹ לְאִשָּׁ֖ה וַיֶּאֱהָבֶ֑הָ וַיִּנָּחֵ֥ם יִצְחָ֖ק אַחֲרֵ֥י אִמּֽוֹ׃ פ

< ಆದಿಕಾಂಡ 24 >