< ಆದಿಕಾಂಡ 25 >
1 ೧ ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.
ଅବ୍ରହାମ କଟୂରା ନାମ୍ନୀ ଆଉ ଗୋଟିଏ ସ୍ତ୍ରୀ ବିବାହ କରିଥିଲେ।
2 ೨ ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.
ସେ ତାଙ୍କ ନିମନ୍ତେ ସିମ୍ରନ୍, ଯକ୍ଷନ୍, ମଦାନ୍, ମିଦୀୟନ, ଯିଶ୍ବକ ଓ ଶୂହ, ଏମାନଙ୍କୁ ଜନ୍ମ କଲା।
3 ೩ ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.
ସେହି ଯକ୍ଷନ୍ ଶିବା ଓ ଦଦାନକୁ ଜାତ କଲା। ଦଦାନ ଅଶୂରୀୟ ଓ ଲଟୂଶୀୟ ଓ ଲୀୟମ୍ମୀୟ ଲୋକମାନଙ୍କର ଆଦିପୁରୁଷ।
4 ೪ ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.
ମିଦୀୟନର ସନ୍ତାନ ଐଫା ଓ ଏଫର ଓ ହନୋକ ଓ ଅବୀଦ ଓ ଇଲଦାୟା; ଏସମସ୍ତେ କଟୂରାର ସନ୍ତାନ।
5 ೫ ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
ଏଥିଉତ୍ତାରେ ଅବ୍ରହାମ ଇସ୍ହାକକୁ ଆପଣାର ସର୍ବସ୍ୱ ଦେଲେ।
6 ೬ ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.
ମାତ୍ର ଅବ୍ରହାମ ଉପପତ୍ନୀମାନଙ୍କ ସନ୍ତାନଗଣକୁ କିଛି କିଛି ଦେଇ ଆପଣା ଜୀବଦ୍ଦଶାରେ ଇସ୍ହାକ ନିକଟରୁ ସେମାନଙ୍କୁ ପୂର୍ବଦିଗସ୍ଥ ଦେଶରେ ରହିବାକୁ ବିଦାୟ କଲେ।
7 ೭ ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.
ଅବ୍ରହାମଙ୍କର ଆୟୁର ପରିମାଣ ଶହେ ପଞ୍ଚସ୍ତରି ବର୍ଷ; ସେ ଏତେ ବର୍ଷ ପର୍ଯ୍ୟନ୍ତ ଜୀବିତ ଥିଲେ।
8 ೮ ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
ଏଥିଉତ୍ତାରେ ଅବ୍ରହାମ ଉତ୍ତମ ବୃଦ୍ଧାବସ୍ଥାରେ ବୃଦ୍ଧ ଓ ପୂର୍ଣ୍ଣାୟୁ ହୋଇ ପ୍ରାଣତ୍ୟାଗ କଲେ; ଆଉ, ପୂର୍ବରୁ ମୃତ୍ୟୁବରଣ କରିଥିବା ଆପଣା ପୂର୍ବପୁରୁଷଗଣ ସହିତ ଜଡିତ ହେଲେ।
9 ೯ ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
ଆଉ ତାଙ୍କର ପୁତ୍ର ଇସ୍ହାକ ଓ ଇଶ୍ମାୟେଲ ମମ୍ରିର ସମ୍ମୁଖରେ ହିତ୍ତୀୟ ସୋହରର ପୁତ୍ର ଇଫ୍ରୋଣର କ୍ଷେତ୍ରସ୍ଥିତ ମକ୍ପେଲା ନାମକ ଗୁହାରେ ତାଙ୍କୁ କବର ଦେଲେ।
10 ೧೦ ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
ଯେହେତୁ ଅବ୍ରହାମ ହିତ୍ତୀୟ ସନ୍ତାନମାନଙ୍କ ନିକଟରୁ ସେହି କ୍ଷେତ୍ର କ୍ରୟ କରିଥିଲେ। ସେହି ସ୍ଥାନରେ ଅବ୍ରହାମଙ୍କର ଓ ତାଙ୍କର ଭାର୍ଯ୍ୟା ସାରାର କବର ଦିଆଗଲା।
11 ೧೧ ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.
ଅବ୍ରହାମଙ୍କ ମୃତ୍ୟୁୁ ଉତ୍ତାରେ ପରମେଶ୍ୱର ତାଙ୍କର ପୁତ୍ର ଇସ୍ହାକଙ୍କୁ ଆଶୀର୍ବାଦ କଲେ; ପୁଣି, ଇସ୍ହାକ ବେର-ଲହୟ-ରୋୟୀ ନାମକ ସ୍ଥାନରେ ବସତି କଲେ।
12 ೧೨ ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.
ସାରାର ଦାସୀ ମିସରୀୟା ହାଗାର ଅବ୍ରହାମଙ୍କ ନିମନ୍ତେ ଯାହାକୁ ପ୍ରସବ କରିଥିଲା, ଅବ୍ରହାମଙ୍କର ସେହି ପୁତ୍ର ଇଶ୍ମାୟେଲର ବଂଶାବଳୀ।
13 ೧೩ ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
ନାମ ଓ ଗୋଷ୍ଠୀ ଅନୁସାରେ ଇଶ୍ମାୟେଲର ସନ୍ତାନମାନଙ୍କ ନାମ ଏହି। ଇଶ୍ମାୟେଲର ଜ୍ୟେଷ୍ଠ ପୁତ୍ର ନବାୟୋତ୍; ତାହା ଉତ୍ତାରେ କେଦାର ଓ ଅଦ୍ବେଲ ଓ ମିବ୍ସମ୍,
14 ೧೪ ಮಿಷ್ಮಾ, ದೂಮಾ, ಮಸ್ಸಾ,
ମିଶ୍ମା ଓ ଦୂମା ଓ ମସା,
15 ೧೫ ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.
ଓ ହଦଦ୍ ଓ ତେମା ଓ ଯିଟୁର ଓ ନାଫୀଶ୍ ଓ କେଦମା।
16 ೧೬ ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.
ଏହି ସମସ୍ତେ ଇଶ୍ମାୟେଲର ସନ୍ତାନ, ପୁଣି, ସେମାନଙ୍କ ନାମାନୁସାରେ ସେମାନଙ୍କର ଗ୍ରାମ ଓ ଛାଉଣି-ସ୍ଥାନ ଥିଲା; ଆଉ ସେମାନେ ଆପଣା ଆପଣା ଗୋତ୍ରାନୁସାରେ ଦ୍ୱାଦଶ ଅଧିପତି ଥିଲେ।
17 ೧೭ ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
ଇଶ୍ମାୟେଲର ଆୟୁର ପରିମାଣ ଶହେ ସଇଁତିରିଶ ବର୍ଷ ଥିଲା; ତହୁଁ ସେ ପ୍ରାଣତ୍ୟାଗ କଲା; ଆଉ ସେ ଆପଣା ଲୋକମାନଙ୍କ ନିକଟରେ ସଂଗୃହୀତ ହେଲା।
18 ೧೮ ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.
ଏଥିଉତ୍ତାରେ ତାହାର ସନ୍ତାନମାନେ ହବୀଲା ଓ ମିସରର ପୂର୍ବସ୍ଥିତ ଶୂରଠାରୁ ଅଶୂରୀୟା ଦିଗରେ ବସତି କଲେ। ଏହିରୂପେ ସେ ଆପଣା ସମସ୍ତ ଭ୍ରାତୃଗଣର ସମ୍ମୁଖସ୍ଥ ବସତି ସ୍ଥାନ ପାଇଲା।
19 ೧೯ ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.
ଅବ୍ରହାମଙ୍କର ପୁତ୍ର ଇସ୍ହାକଙ୍କର ବଂଶାବଳୀ। ଅବ୍ରହାମ ଇସ୍ହାକଙ୍କୁ ଜାତ କଲେ;
20 ೨೦ ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
ସେହି ଇସ୍ହାକ ଚାଳିଶ ବର୍ଷ ବୟସରେ ପଦ୍ଦନ୍ ଅରାମୀୟ ବଥୂୟେଲର କନ୍ୟା, ଅର୍ଥାତ୍, ଅରାମୀୟ ଲାବନର ଭଗିନୀ ରିବିକାକୁ ବିବାହ କଲେ।
21 ೨೧ ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
ଇସ୍ହାକଙ୍କର ସେହି ଭାର୍ଯ୍ୟା ବନ୍ଧ୍ୟା ହେବାରୁ ସେ ତାହା ନିମନ୍ତେ ସଦାପ୍ରଭୁଙ୍କ ନିକଟରେ ପ୍ରାର୍ଥନା କଲେ; ତହିଁରେ ସଦାପ୍ରଭୁ ତାଙ୍କର ପ୍ରାର୍ଥନା ଶୁଣନ୍ତେ, ତାହାର ଭାର୍ଯ୍ୟା ରିବିକା ଗର୍ଭବତୀ ହେଲା।
22 ೨೨ ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.
ଏଥିଉତ୍ତାରେ ତାହାର ଗର୍ଭ ମଧ୍ୟରେ ଶିଶୁମାନେ ଛନ୍ଦାଛନ୍ଦି ହେବାରୁ, “ମୋହର ଏପରି କାହିଁକି ହେଲା? ଏପରି କି ହୋଇଥାଏ?” ଏହା ଭାବି ସେ ସଦାପ୍ରଭୁଙ୍କ ନିକଟକୁ ପଚାରିବା ପାଇଁ ଗଲା।
23 ೨೩ ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.
ତହିଁରେ ସଦାପ୍ରଭୁ ତାହାକୁ କହିଲେ, “ତୁମ୍ଭ ଗର୍ଭରେ ଦୁଇ ଗୋଷ୍ଠୀ ଅଛନ୍ତି ଓ ଦୁଇ ଗୋତ୍ର ତୁମ୍ଭ ଉଦରରୁ ବିଭିନ୍ନ ହେବେ; ଏକ ଗୋତ୍ର ଅନ୍ୟ ଗୋତ୍ରଠାରୁ ବଳବାନ ହେବ, ପୁଣି, ଜ୍ୟେଷ୍ଠ କନିଷ୍ଠର ସେବା କରିବ।”
24 ೨೪ ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.
ଏଥିଉତ୍ତାରେ ପ୍ରସବକାଳ ସମ୍ପୂର୍ଣ୍ଣ ହୁଅନ୍ତେ, ତାହାର ଗର୍ଭରୁ ଯାଆଁଳା ପୁତ୍ର ଜନ୍ମିଲେ।
25 ೨೫ ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು.
ତାହାର ଜ୍ୟେଷ୍ଠ ରକ୍ତବର୍ଣ୍ଣ ଓ ସର୍ବାଙ୍ଗ ଲୋମଶ ବସ୍ତ୍ର ପରି ଥିଲା; ଏହେତୁ ତାହାର ନାମ ଏଷୌ ଦିଆଗଲା।
26 ೨೬ ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
ତହିଁ ଉତ୍ତାରେ ଏଷୌର ପାଦମୂଳ ଧରି ତାହାର ଭ୍ରାତା ଭୂମିଷ୍ଠ ହେଲା; ଏଥିପାଇଁ ତାହାର ନାମ ଯାକୁବ ଦିଆଗଲା। ଇସ୍ହାକଙ୍କର ଷାଠିଏ ବର୍ଷ ବୟସରେ ଏହି ଯାଆଁଳା ପୁତ୍ର ଜାତ ହେଲେ।
27 ೨೭ ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
ଏଥିଉତ୍ତାରେ ବାଳକମାନେ ବଢ଼ିଲା ଉତ୍ତାରେ ଏଷୌ ମୃଗୟାନିପୁଣ ଓ ବନବିହାରୀ ହେଲା; ପୁଣି, ଯାକୁବ ମୃଦୁ ମନୁଷ୍ୟ ଓ ତମ୍ବୁବାସୀ ହେଲା।
28 ೨೮ ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
ଇସ୍ହାକ ମୃଗୟା ମାଂସ ଅତି ସୁସ୍ୱାଦୁ ବୋଧ କରିବାରୁ ଏଷୌକୁ ଭଲ ପାଇଲେ। ମାତ୍ର ରିବିକା ଯାକୁବକୁ ଭଲ ପାଇଲା।
29 ೨೯ ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;
ଏକ ଦିନ ଯାକୁବ ଡାଲି ରାନ୍ଧୁଥିଲା, ସେହି ସମୟରେ ଏଷୌ କ୍ଳାନ୍ତ ହୋଇ କ୍ଷେତ୍ରରୁ ଆସିଲା;
30 ೩೦ ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.
ତହୁଁ ସେ ଯାକୁବକୁ କହିଲା, “ମୁଁ କ୍ଳାନ୍ତ ହୋଇଅଛି, ବିନୟ କରେ, ସେହି ରଙ୍ଗା ଡାଲି ଦେଇ ଭୋଜନ କରାଅ,” ଏହି ନିମନ୍ତେ ତାହାର ନାମ ଇଦୋମ୍ (ରଙ୍ଗା) ଖ୍ୟାତ ହେଲା।
31 ೩೧ ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು.
ସେତେବେଳେ ଯାକୁବ କହିଲା, “ଆଜି ତୁମ୍ଭେ ମୋତେ ଆପଣା ଜ୍ୟେଷ୍ଠାଧିକାର ବିକ୍ରୟ କର।”
32 ೩೨ ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.
ଏଷୌ ଉତ୍ତର କଲା, “ଦେଖ, ମୁଁ ମଲା ପରି, ଜ୍ୟେଷ୍ଠାଧିକାରରେ ମୋର କି ଲାଭ?”
33 ೩೩ ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.
ଯାକୁବ କହିଲା, “ତୁମ୍ଭେ ଆଜି ମୋʼ ନିକଟରେ ଶପଥ କର,” ତହିଁରେ ସେ ତାହା ନିକଟରେ ଶପଥ କଲା। ଏହିରୂପେ ସେ ଆପଣା ଜ୍ୟେଷ୍ଠାଧିକାର ଯାକୁବକୁ ବିକ୍ରୟ କରିଦେଲା।
34 ೩೪ ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.
ତହୁଁ ଯାକୁବ ଏଷୌକୁ ରୁଟି ଓ ରନ୍ଧା ମସୁର ଡାଲି ଦିଅନ୍ତେ, ସେ ଭୋଜନପାନ କରି ଉଠିଗଲା। ଏହିରୂପେ ଏଷୌ ଆପଣା ଜ୍ୟେଷ୍ଠାଧିକାର ତୁଚ୍ଛଜ୍ଞାନ କଲା।