< ಆದಿಕಾಂಡ 26 >
1 ೧ ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.
Basi njaa kubwa ikawa katika nchi hiyo, kuliko ile njaa iliyotangulia iliyotokea wakati wa Abrahamu. Isaki akamwendea Abimeleki mfalme wa Wafilisti huko Gerari.
2 ೨ ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.
Bwana akamtokea Isaki, akamwambia, “Usiende Misri, bali ukae katika nchi nitakayokuambia.
3 ೩ ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
Kaa katika nchi hii kwa kitambo, mimi nitakuwa pamoja na wewe na nitakubariki. Kwa maana nitakupa wewe na uzao wako nchi hizi zote na nitatimiza kiapo nilichomwapia Abrahamu baba yako.
4 ೪ ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
Nitafanya wazao wako kuwa wengi kama nyota za angani, nami nitawapa nchi hizi zote na kutokana na uzao wako mataifa yote yatabarikiwa,
5 ೫ ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.
kwa sababu Abrahamu alinitii mimi akatunza kanuni zangu na maagizo yangu, amri zangu pamoja na sheria zangu.”
6 ೬ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
Hivyo Isaki akaishi huko Gerari.
7 ೭ ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.
Watu wa mahali pale walipomuuliza habari za mke wake, akasema, “Huyu ni dada yangu,” kwa sababu aliogopa kusema, “Huyu ni mke wangu.” Alifikiri, “Watu wa mahali pale wataweza kumuua kwa sababu ya Rebeka, kwa kuwa alikuwa mzuri wa sura.”
8 ೮ ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.
Wakati Isaki alipokuwa amekaa huko siku nyingi, Abimeleki mfalme wa Wafilisti akachungulia dirishani, akaona jinsi Isaki alivyomkumbatia Rebeka mke wake.
9 ೯ ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು” ಎಂದನು.
Abimeleki akamwita Isaki akamwambia, “Hakika huyu ni mke wako! Mbona uliniambia, ‘Huyu ni dada yangu?’” Isaki akamjibu, “Kwa sababu nilifikiri ningeweza kuuawa kwa sababu yake.”
10 ೧೦ ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?”
Ndipo Abimeleki akamjibu, “Ni nini hiki ulichotufanyia? Ingewezekana mtu yeyote akawa amekutana kimwili na mke wako, nawe ungeleta hatia juu yetu.”
11 ೧೧ ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು.
Hivyo Abimeleki akatoa amri kwa watu wote, akisema, “Yeyote atakayemnyanyasa mtu huyu au mkewe hakika atauawa.”
12 ೧೨ ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
Isaki akapanda mazao katika nchi hiyo, kwa mwaka huo huo, akavuna mara mia, kwa sababu Bwana alimbariki.
13 ೧೩ ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು.
Isaki akawa tajiri, mali zake zikaendelea kuongezeka mpaka akawa tajiri sana.
14 ೧೪ ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
Akawa na mifugo ya kondoo na ngʼombe, na watumishi wengi sana, kiasi kwamba Wafilisti wakamwonea wivu.
15 ೧೫ ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.
Kwa hiyo visima vyote vilivyochimbwa na watumishi wakati wa Abrahamu baba yake, Wafilisti wakavifukia, wakavijaza udongo.
16 ೧೬ ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ;
Ndipo Abimeleki akamwambia Isaki, “Ondoka kwetu, kwa maana umetuzidi nguvu sana.”
17 ೧೭ ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.
Basi Isaki akatoka huko akajenga kambi katika Bonde la Gerari, akaishi huko.
18 ೧೮ ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
Ndipo Isaki akavichimbua tena vile visima vya maji ambavyo vilichimbwa siku zile za Abrahamu baba yake, ambavyo Wafilisti walivifukia baada ya kufa Abrahamu, akavipa majina yale yale ambayo baba yake alikuwa amevipa.
19 ೧೯ ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.
Watumishi wa Isaki wakachimba katika lile bonde wakagundua huko kisima chenye maji safi.
20 ೨೦ ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು.
Lakini wachungaji wa Gerari wakagombana na wachungaji wa Isaki wakisema, “Maji haya ni yetu!” Ndipo akakiita kile kisima Eseki, kwa sababu waligombana naye.
21 ೨೧ ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ಸಿಟ್ನಾ” ಎಂದು ಹೆಸರಿಟ್ಟನು.
Kisha wakachimba kisima kingine, lakini hata hicho pia wakakigombania, akakiita Sitna.
22 ೨೨ ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು.
Akaondoka huko, akachimba kisima kingine, wala hakuna yeyote aliyekigombania. Akakiita Rehobothi, akisema, “Sasa Bwana ametufanyia nafasi, nasi tutastawi katika nchi.”
23 ೨೩ ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಷೆಬಕ್ಕೆ ಬಂದನು.
Kutoka pale akaenda Beer-Sheba.
24 ೨೪ ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.
Usiku ule Bwana akamtokea, akamwambia, “Mimi ndimi Mungu wa Abrahamu baba yako. Usiogope, kwa maana mimi niko pamoja nawe, nitakubariki na kuongeza idadi ya wazao wako kwa ajili ya Abrahamu mtumishi wangu.”
25 ೨೫ ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.
Isaki akajenga madhabahu huko, akaliitia jina la Bwana. Akapiga hema lake huko, nao watumishi wake wakachimba kisima.
26 ೨೬ ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು.
Wakati huo, Abimeleki alikuwa amemjia kutoka Gerari, akifuatana na Ahuzathi mshauri wake, pamoja na Fikoli jemadari wa majeshi yake.
27 ೨೭ ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು,
Isaki akawauliza, “Mbona mmekuja kwangu na ninyi mlinichukia na kunifukuza?”
28 ೨೮ “ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
Wakamjibu, “Tuliona wazi kuwa Bwana alikuwa pamoja nawe, kwa hiyo tukasema, ‘Inabidi kuwe na kiapo cha mapatano kati yetu, kati yetu na wewe. Na tufanye mkataba pamoja nawe
29 ೨೯ ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.
kwamba hutatudhuru, kama jinsi nasi hatukuwanyanyasa bali tuliwatendea mema wakati wote na kuwaondoa kwetu kwa amani. Tena sasa umebarikiwa na Bwana.’”
30 ೩೦ ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.
Basi Isaki akawaandalia karamu, nao wakala na kunywa.
31 ೩೧ ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.
Kesho yake asubuhi na mapema, wakaapizana wao kwa wao. Kisha Isaki akawaruhusu waende zao, wakamwacha Isaki kwa amani.
32 ೩೨ ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.
Siku hiyo watumishi wa Isaki wakaja wakampa habari kuhusu kisima walichokuwa wamekichimba, wakamwambia, “Tumepata maji!”
33 ೩೩ ಅವನು ಆ ಬಾವಿಗೆ “ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು.
Naye akakiita Shiba, mpaka leo mji huo unaitwa Beer-Sheba.
34 ೩೪ ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.
Esau alipokuwa na umri wa miaka arobaini, akamwoa Yudithi binti Beeri Mhiti, kisha akamwoa Basemathi binti Eloni Mhiti.
35 ೩೫ ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು.
Hawa walikuwa chanzo cha huzuni ya Isaki na Rebeka.