< ಆದಿಕಾಂಡ 28 >
1 ೧ ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.
依撒格叫了雅各伯來,祝福他,吩咐他說:「你不要娶客納罕女人為妻。
2 ೨ ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.
你應起身往帕丹阿蘭你外祖父貝突耳家去,在那裏娶你舅父拉班的女兒為妻。
3 ೩ ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.
願全能的天主祝福你,使你生育繁殖,成為一大家族。
4 ೪ ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.
願天主將亞巴郎的祝福賜與你和你的後裔,使你承受你所住的地方,即天主賜與亞巴郎的土地作為產業。」
5 ೫ ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
依撒格就這樣打發了雅各伯往帕丹阿蘭,投往阿蘭人貝突耳的兒子拉班,即雅各伯和厄撒烏的母親黎貝加的哥哥裏去了。
6 ೬ ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ ಅರಾಮಿನಲ್ಲಿ ಹೆಣ್ಣನ್ನು ಹುಡುಕಿ ಮದುವೆ ಮಾಡಿಕೊಳ್ಳಲು ಕಳುಹಿಸಿದ್ದನ್ನೂ, ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ, ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಕೊಟ್ಟದ್ದನ್ನೂ, ಏಸಾವನು ನೋಡಿದನು.
厄撒烏見依撒烏祝福了雅各伯,打發他到帕丹阿蘭去,在那裏娶妻;祝福他時還吩咐他說:「不要娶客納罕女人為妻。」
7 ೭ ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.
厄撒烏見雅各伯聽從父母的命,往帕丹阿蘭去了,
8 ೮ ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು.
便明白父親依撒格不喜歡客納罕女子。
9 ೯ ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು.
所以他去了依市瑪耳那裏,除自己所有的兩個妻子外,又娶了亞巴郎之子依市瑪耳的女兒乃巴約特的妹妹瑪哈拉特為妻。
10 ೧೦ ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.
雅各伯離開貝爾舍巴,往哈蘭去了。
11 ೧೧ ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
他來到一個地方,因太陽已落,就在那裏過宿,隨地拿了一塊石頭,放在頭底下,就在那地方躺下睡了。
12 ೧೨ ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.
他作了一夢:見一個梯子直立在地上,梯頂與天相接;天主的使者在梯子上,上去下來。
13 ೧೩ ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
上主立在梯上說:「我是上主,你父亞巴郎的天主,依撒格的天主。我要將你所躺的地方,賜給你和你的後裔。
14 ೧೪ ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.
你的後裔要多得如地上的灰塵;你要向東西南北擴展,地上的萬民都要因你和你的後裔蒙受祝福。
15 ೧೫ ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.
看我與你同在;你不論到那裏,我必護佑你,領你回到此地。我決不離棄你,直到我實踐了我對你所許的。」
16 ೧೬ ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.
雅各伯一覺醒來,說:「上主實在在這地方,我竟不知道。」
17 ೧೭ ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.
他又滿懷敬畏地說:「這地方多麼可畏! 這裏不是別處,乃是天主的住所,上天之門。」
18 ೧೮ ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
雅各伯清早一起來,就把那塊放在頭底下的石頭,立作石柱,在頂上倒了油,
19 ೧೯ ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.
給那地方起名叫貝特耳,原先那城名叫路次。
20 ೨೦ ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,
然後雅各伯許願說:「若是天主與我同在,在我所走的路上護佑我,賜我豐衣足食,
21 ೨೧ ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.
使我平安回到父家,上主實在當是我的天主。
22 ೨೨ ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.
我立作石柱的這塊石頭,必要成為天主的住所;凡你賜與我的,我必給你奉獻十分之一。」