< ಆದಿಕಾಂಡ 28 >

1 ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.
וַיִּקְרָ֥א יִצְחָ֛ק אֶֽל־יַעֲקֹ֖ב וַיְבָ֣רֶךְ אֹתֹ֑ו וַיְצַוֵּ֙הוּ֙ וַיֹּ֣אמֶר לֹ֔ו לֹֽא־תִקַּ֥ח אִשָּׁ֖ה מִבְּנֹ֥ות כְּנָֽעַן׃
2 ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.
ק֥וּם לֵךְ֙ פַּדֶּ֣נָֽה אֲרָ֔ם בֵּ֥יתָה בְתוּאֵ֖ל אֲבִ֣י אִמֶּ֑ךָ וְקַח־לְךָ֤ מִשָּׁם֙ אִשָּׁ֔ה מִבְּנֹ֥ות לָבָ֖ן אֲחִ֥י אִמֶּֽךָ׃
3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.
וְאֵ֤ל שַׁדַּי֙ יְבָרֵ֣ךְ אֹֽתְךָ֔ וְיַפְרְךָ֖ וְיַרְבֶּ֑ךָ וְהָיִ֖יתָ לִקְהַ֥ל עַמִּֽים׃
4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.
וְיִֽתֶּן־לְךָ֙ אֶת־בִּרְכַּ֣ת אַבְרָהָ֔ם לְךָ֖ וּלְזַרְעֲךָ֣ אִתָּ֑ךְ לְרִשְׁתְּךָ֙ אֶת־אֶ֣רֶץ מְגֻרֶ֔יךָ אֲשֶׁר־נָתַ֥ן אֱלֹהִ֖ים לְאַבְרָהָֽם׃
5 ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
וַיִּשְׁלַ֤ח יִצְחָק֙ אֶֽת־יַעֲקֹ֔ב וַיֵּ֖לֶךְ פַּדֶּ֣נָֽה אֲרָ֑ם אֶל־לָבָ֤ן בֶּן־בְּתוּאֵל֙ הָֽאֲרַמִּ֔י אֲחִ֣י רִבְקָ֔ה אֵ֥ם יַעֲקֹ֖ב וְעֵשָֽׂו׃
6 ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ ಅರಾಮಿನಲ್ಲಿ ಹೆಣ್ಣನ್ನು ಹುಡುಕಿ ಮದುವೆ ಮಾಡಿಕೊಳ್ಳಲು ಕಳುಹಿಸಿದ್ದನ್ನೂ, ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ, ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಕೊಟ್ಟದ್ದನ್ನೂ, ಏಸಾವನು ನೋಡಿದನು.
וַיַּ֣רְא עֵשָׂ֗ו כִּֽי־בֵרַ֣ךְ יִצְחָק֮ אֶֽת־יַעֲקֹב֒ וְשִׁלַּ֤ח אֹתֹו֙ פַּדֶּ֣נָֽה אֲרָ֔ם לָקַֽחַת־לֹ֥ו מִשָּׁ֖ם אִשָּׁ֑ה בְּבָרֲכֹ֣ו אֹתֹ֔ו וַיְצַ֤ו עָלָיו֙ לֵאמֹ֔ר לֹֽא־תִקַּ֥ח אִשָּׁ֖ה מִבְּנֹ֥ות כְּנָֽעַן׃
7 ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.
וַיִּשְׁמַ֣ע יַעֲקֹ֔ב אֶל־אָבִ֖יו וְאֶל־אִמֹּ֑ו וַיֵּ֖לֶךְ פַּדֶּ֥נָֽה אֲרָֽם׃
8 ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು.
וַיַּ֣רְא עֵשָׂ֔ו כִּ֥י רָעֹ֖ות בְּנֹ֣ות כְּנָ֑עַן בְּעֵינֵ֖י יִצְחָ֥ק אָבִֽיו׃
9 ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು.
וַיֵּ֥לֶךְ עֵשָׂ֖ו אֶל־יִשְׁמָעֵ֑אל וַיִּקַּ֡ח אֶֽת־מָחֲלַ֣ת ׀ בַּת־יִשְׁמָעֵ֨אל בֶּן־אַבְרָהָ֜ם אֲחֹ֧ות נְבָיֹ֛ות עַל־נָשָׁ֖יו לֹ֥ו לְאִשָּֽׁה׃ ס
10 ೧೦ ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.
וַיֵּצֵ֥א יַעֲקֹ֖ב מִבְּאֵ֣ר שָׁ֑בַע וַיֵּ֖לֶךְ חָרָֽנָה׃
11 ೧೧ ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
וַיִּפְגַּ֨ע בַּמָּקֹ֜ום וַיָּ֤לֶן שָׁם֙ כִּי־בָ֣א הַשֶּׁ֔מֶשׁ וַיִּקַּח֙ מֵאַבְנֵ֣י הַמָּקֹ֔ום וַיָּ֖שֶׂם מְרַֽאֲשֹׁתָ֑יו וַיִּשְׁכַּ֖ב בַּמָּקֹ֥ום הַהֽוּא׃
12 ೧೨ ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.
וֽ͏ַיַּחֲלֹ֗ם וְהִנֵּ֤ה סֻלָּם֙ מֻצָּ֣ב אַ֔רְצָה וְרֹאשֹׁ֖ו מַגִּ֣יעַ הַשָּׁמָ֑יְמָה וְהִנֵּה֙ מַלְאֲכֵ֣י אֱלֹהִ֔ים עֹלִ֥ים וְיֹרְדִ֖ים בֹּֽו׃
13 ೧೩ ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
וְהִנֵּ֨ה יְהוָ֜ה נִצָּ֣ב עָלָיו֮ וַיֹּאמַר֒ אֲנִ֣י יְהוָ֗ה אֱלֹהֵי֙ אַבְרָהָ֣ם אָבִ֔יךָ וֵאלֹהֵ֖י יִצְחָ֑ק הָאָ֗רֶץ אֲשֶׁ֤ר אַתָּה֙ שֹׁכֵ֣ב עָלֶ֔יהָ לְךָ֥ אֶתְּנֶ֖נָּה וּלְזַרְעֶֽךָ׃
14 ೧೪ ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.
וְהָיָ֤ה זַרְעֲךָ֙ כַּעֲפַ֣ר הָאָ֔רֶץ וּפָרַצְתָּ֛ יָ֥מָּה וָקֵ֖דְמָה וְצָפֹ֣נָה וָנֶ֑גְבָּה וְנִבְרֲכ֥וּ בְךָ֛ כָּל־מִשְׁפְּחֹ֥ת הָאֲדָמָ֖ה וּבְזַרְעֶֽךָ׃
15 ೧೫ ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.
וְהִנֵּ֨ה אָנֹכִ֜י עִמָּ֗ךְ וּשְׁמַרְתִּ֙יךָ֙ בְּכֹ֣ל אֲשֶׁר־תֵּלֵ֔ךְ וַהֲשִׁ֣בֹתִ֔יךָ אֶל־הָאֲדָמָ֖ה הַזֹּ֑את כִּ֚י לֹ֣א אֽ͏ֶעֱזָבְךָ֔ עַ֚ד אֲשֶׁ֣ר אִם־עָשִׂ֔יתִי אֵ֥ת אֲשֶׁר־דִּבַּ֖רְתִּי לָֽךְ׃
16 ೧೬ ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.
וַיִּיקַ֣ץ יַעֲקֹב֮ מִשְּׁנָתֹו֒ וַיֹּ֕אמֶר אָכֵן֙ יֵ֣שׁ יְהוָ֔ה בַּמָּקֹ֖ום הַזֶּ֑ה וְאָנֹכִ֖י לֹ֥א יָדָֽעְתִּי׃
17 ೧೭ ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.
וַיִּירָא֙ וַיֹּאמַ֔ר מַה־נֹּורָ֖א הַמָּקֹ֣ום הַזֶּ֑ה אֵ֣ין זֶ֗ה כִּ֚י אִם־בֵּ֣ית אֱלֹהִ֔ים וְזֶ֖ה שַׁ֥עַר הַשָּׁמָֽיִם׃
18 ೧೮ ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
וַיַּשְׁכֵּ֨ם יַעֲקֹ֜ב בַּבֹּ֗קֶר וַיִּקַּ֤ח אֶת־הָאֶ֙בֶן֙ אֲשֶׁר־שָׂ֣ם מְרַֽאֲשֹׁתָ֔יו וַיָּ֥שֶׂם אֹתָ֖הּ מַצֵּבָ֑ה וַיִּצֹ֥ק שֶׁ֖מֶן עַל־רֹאשָֽׁהּ׃
19 ೧೯ ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.
וַיִּקְרָ֛א אֶת־שֵֽׁם־הַמָּקֹ֥ום הַה֖וּא בֵּֽית־אֵ֑ל וְאוּלָ֛ם ל֥וּז שֵׁם־הָעִ֖יר לָרִאשֹׁנָֽה׃
20 ೨೦ ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,
וַיִּדַּ֥ר יַעֲקֹ֖ב נֶ֣דֶר לֵאמֹ֑ר אִם־יִהְיֶ֨ה אֱלֹהִ֜ים עִמָּדִ֗י וּשְׁמָרַ֙נִי֙ בַּדֶּ֤רֶךְ הַזֶּה֙ אֲשֶׁ֣ר אָנֹכִ֣י הֹולֵ֔ךְ וְנָֽתַן־לִ֥י לֶ֛חֶם לֶאֱכֹ֖ל וּבֶ֥גֶד לִלְבֹּֽשׁ׃
21 ೨೧ ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.
וְשַׁבְתִּ֥י בְשָׁלֹ֖ום אֶל־בֵּ֣ית אָבִ֑י וְהָיָ֧ה יְהוָ֛ה לִ֖י לֵאלֹהִֽים׃
22 ೨೨ ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.
וְהָאֶ֣בֶן הַזֹּ֗את אֲשֶׁר־שַׂ֙מְתִּי֙ מַצֵּבָ֔ה יִהְיֶ֖ה בֵּ֣ית אֱלֹהִ֑ים וְכֹל֙ אֲשֶׁ֣ר תִּתֶּן־לִ֔י עַשֵּׂ֖ר אֲעַשְּׂרֶ֥נּוּ לָֽךְ׃

< ಆದಿಕಾಂಡ 28 >