< ಆದಿಕಾಂಡ 29 >
1 ೧ ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.
Then Jacob went on his journey, and came to the land of the children of the east.
2 ೨ ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.
He looked, and saw a well in the field, and saw three flocks of sheep lying there by it. For out of that well they watered the flocks. The stone on the well’s mouth was large.
3 ೩ ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.
There all the flocks were gathered. They rolled the stone from the well’s mouth, and watered the sheep, and put the stone back on the well’s mouth in its place.
4 ೪ ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.
Jacob said to them, “My relatives, where are you from?” They said, “We are from Haran.”
5 ೫ ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಲ್ಲೆವು” ಎಂದರು.
He said to them, “Do you know Laban, the son of Nahor?” They said, “We know him.”
6 ೬ ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು.
He said to them, “Is it well with him?” They said, “It is well. See, Rachel, his daughter, is coming with the sheep.”
7 ೭ ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು,
He said, “Behold, it is still the middle of the day, not time to gather the livestock together. Water the sheep, and go and feed them.”
8 ೮ ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು.
They said, “We can’t, until all the flocks are gathered together, and they roll the stone from the well’s mouth. Then we will water the sheep.”
9 ೯ ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.
While he was yet speaking with them, Rachel came with her father’s sheep, for she kept them.
10 ೧೦ ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.
When Jacob saw Rachel the daughter of Laban, his mother’s brother, and the sheep of Laban, his mother’s brother, Jacob went near, and rolled the stone from the well’s mouth, and watered the flock of Laban his mother’s brother.
11 ೧೧ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಜೋರಾಗಿ ಅತ್ತು ಆಕೆಗೆ,
Jacob kissed Rachel, and lifted up his voice, and wept.
12 ೧೨ “ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.
Jacob told Rachel that he was her father’s relative, and that he was Rebekah’s son. She ran and told her father.
13 ೧೩ ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.
When Laban heard the news of Jacob, his sister’s son, he ran to meet Jacob, and embraced him, and kissed him, and brought him to his house. Jacob told Laban all these things.
14 ೧೪ ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.
Laban said to him, “Surely you are my bone and my flesh.” Jacob stayed with him for a month.
15 ೧೫ ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು.
Laban said to Jacob, “Because you are my relative, should you therefore serve me for nothing? Tell me, what will your wages be?”
16 ೧೬ ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.
Laban had two daughters. The name of the elder was Leah, and the name of the younger was Rachel.
17 ೧೭ ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿ ಹೀನವಾಗಿದ್ದವು. ಆದರೆ ರಾಹೇಲಳು ಬಹು ಸುಂದರಿಯು ಲಾವಣ್ಯವತಿಯೂ ಆಗಿದ್ದಳು.
Leah’s eyes were weak, but Rachel was beautiful in form and attractive.
18 ೧೮ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,
Jacob loved Rachel. He said, “I will serve you seven years for Rachel, your younger daughter.”
19 ೧೯ ಲಾಬಾನನು, “ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು” ಎಂದನು.
Laban said, “It is better that I give her to you, than that I should give her to another man. Stay with me.”
20 ೨೦ ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.
Jacob served seven years for Rachel. They seemed to him but a few days, for the love he had for her.
21 ೨೧ ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು.
Jacob said to Laban, “Give me my wife, for my days are fulfilled, that I may go in to her.”
22 ೨೨ ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು.
Laban gathered together all the men of the place, and made a feast.
23 ೨೩ ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.
In the evening, he took Leah his daughter, and brought her to Jacob. He went in to her.
24 ೨೪ ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.
Laban gave Zilpah his servant to his daughter Leah for a servant.
25 ೨೫ ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ,
In the morning, behold, it was Leah! He said to Laban, “What is this you have done to me? Didn’t I serve with you for Rachel? Why then have you deceived me?”
26 ೨೬ ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.
Laban said, “It is not done so in our place, to give the younger before the firstborn.
27 ೨೭ ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು.
Fulfill the week of this one, and we will give you the other also for the service which you will serve with me for seven more years.”
28 ೨೮ ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.
Jacob did so, and fulfilled her week. He gave him Rachel his daughter as wife.
29 ೨೯ ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಬಿಲ್ಹಾ ಎಂಬ ದಾಸಿಯನ್ನು ಕೂಡ ಕೊಟ್ಟನು.
Laban gave Bilhah, his servant, to his daughter Rachel to be her servant.
30 ೩೦ ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.
He went in also to Rachel, and he loved also Rachel more than Leah, and served with him seven more years.
31 ೩೧ ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.
Yahweh saw that Leah was hated, and he opened her womb, but Rachel was barren.
32 ೩೨ ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”
Leah conceived, and bore a son, and she named him Reuben. For she said, “Because Yahweh has looked at my affliction; for now my husband will love me.”
33 ೩೩ ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”
She conceived again, and bore a son, and said, “Because Yahweh has heard that I am hated, he has therefore given me this son also.” She named him Simeon.
34 ೩೪ ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.
She conceived again, and bore a son. She said, “Now this time my husband will be joined to me, because I have borne him three sons.” Therefore his name was called Levi.
35 ೩೫ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.
She conceived again, and bore a son. She said, “This time I will praise Yahweh.” Therefore she named him Judah. Then she stopped bearing.