< ಆದಿಕಾಂಡ 3 >

1 ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
А змията беше най-хитра от всички полски зверове, които Господ Бог беше създал. И тя рече на жената: Истина ли каза Бог да не ядете от всяко дърво в градината?
2 ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
Жената рече на змията: От плода на градинските дървета можем да ядем;
3 ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
но от плода на дървото, което е всред градината, Бог каза: Да не ядете от него, нито да се допрете до него, за да не умрете.
4 ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
А змията рече на жената: Никак няма да умрете;
5 ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
но знае Бог, че в деня, когато ядете от него, ще ви се отворят очите и ще бъдете, като Бога, да познавате доброто и злото.
6 ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
И като видя жената, че дървото беше добро за храна, и че беше приятно за очите, дърво желателно, за да дава знание, взе от плода му та яде, даде и на мъжа си да яде с нея, та и той яде.
7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
Тогава се отвориха очите и на двамата и те познаха, че бяха голи; и съшиха смокинови листа та си направиха препаски.
8 ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
И при вечерния ветрец чуха гласа на Господа Бога, като ходеше из градината; и човекът и жена му се скриха от лицето на Господа Бога между градинските дървета.
9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
Но Господ Бог повика човека и му рече: Где си?
10 ೧೦ ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
А той рече: Чух гласа Ти в градината и уплаших се, защото съм гол; и се скрих.
11 ೧೧ ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
А Бог му рече: Кой ти каза, че си гол? Да не би да си ял от дървото, от което ти заповядах да не ядеш?
12 ೧೨ ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
И човекът рече: Жената, която си ми дал за другарка, тя ми даде от дървото, та ядох.
13 ೧೩ ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
И Господ Бог рече на жената: Що е това, което си сторила? А жената рече: Змията ме подмами, та ядох.
14 ೧೪ ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
Тогава рече Господ Бог на змията: Понеже си сторила това, проклета да си измежду всеки вид добитък и измежду всички полски зверове; по корема си ще се влачиш, и пръст ще ядеш през всичките дни на живота си.
15 ೧೫ ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
Ще поставя и вражда между тебе и жената и между твоето потомство и нейното потомство; то ще ти нарани главата, а ти ще му нараниш петата.
16 ೧೬ ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
На жената рече: Ще ти преумножа скръбта в бременността; със скръб ще раждаш чада; и на мъжа ти ще бъде подчинено всяко твое желание и той ще те владее.
17 ೧೭ ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
А на човека рече: Понеже си послушал гласа на жена си и си ял от дървото, за което ти заповядах, като казах: Да не ядеш от него, то проклета да бъде земята поради тебе; със скръб ще се прехранваш от нея през всичките дни на живота си.
18 ೧೮ ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
Тръни и бодли ще ти ражда; и ти ще ядеш полската трева.
19 ೧೯ ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
С пот на лицето си ще ядеш хляб, докато се върнеш в земята, защото от нея си взет; понеже си пръст и в пръстта ще се върнеш.
20 ೨೦ ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
И човекът наименува жена си Ева, защото тя беше майка на всички живи.
21 ೨೧ ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
И Господ Бог направи кожени дрехи на Адама и на жена му и ги облече.
22 ೨೨ ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
И Господ Бог каза: Ето човекът стана като един от Нас, да познава доброто и злото; и сега за да не простре ръката си да вземе от дървото на живота, да яде и да живее вечно,
23 ೨೩ ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
затова Господ Бог го изпъди от Едемската градина да обработва земята, от която бе взет.
24 ೨೪ ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
Така Той изпъди Адама; и постави на изток от Едемската градина херувимите и пламенния меч, който се въртеше, за да пазят пътя към дървото на живота.

< ಆದಿಕಾಂಡ 3 >