< ಆದಿಕಾಂಡ 3 >
1 ೧ ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
Porém a serpente era astuta, mais que todos os animais do campo que o SENHOR Deus havia feito. E ela disse à mulher: Deus vos disse: Não comais de toda árvore do jardim?
2 ೨ ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
E a mulher respondeu à serpente: Do fruto das árvores do jardim podemos comer;
3 ೩ ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
mas do fruto da árvore que está no meio do jardim, Deus disse: Não comereis dele, nem o tocareis, para que não morrais.
4 ೪ ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
Então a serpente disse à mulher: Não morrereis;
5 ೫ ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
Mas Deus sabe que no dia que comerdes dele, vossos olhos serão abertos, e sereis como deuses, sabendo o bem e o mal.
6 ೬ ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
E a mulher viu que a árvore era boa para se comer, agradável aos olhos, e árvore desejável para se obter conhecimento. E ela tomou de seu fruto, e comeu; e deu também ao seu marido com ela, e ele comeu.
7 ೭ ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
E foram abertos os olhos de ambos, e conheceram que estavam nus. Então coseram folhas de figueira, e fizeram para si aventais.
8 ೮ ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
E ouviram a voz do SENHOR Deus, que passeava no jardim à brisa do dia; e o homem e sua mulher esconderam-se da presença do SENHOR Deus entre as árvores do jardim.
9 ೯ ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
E o SENHOR Deus chamou ao homem, e lhe disse: “Onde estás?
10 ೧೦ ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
E ele respondeu: “Ouvi tua voz no jardim, e tive medo, porque estava nu; e me escondi”.
11 ೧೧ ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
E disse-lhe: “Quem te ensinou que estavas nu? Comeste da árvore de que te mandei que não comesses?”
12 ೧೨ ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
E o homem respondeu: “A mulher que me deste por companheira me deu da árvore, e eu comi”.
13 ೧೩ ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
Então o SENHOR Deus disse à mulher: “Por que fizeste isto?” E a mulher disse: “A serpente me enganou, e comi”.
14 ೧೪ ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
E o SENHOR Deus disse à serpente: “Porque fizeste isto, maldita serás entre todos os animais selvagens e entre todos os animais do campo; sobre teu ventre andarás, e pó comerás todos os dias da tua vida.
15 ೧೫ ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
E porei inimizade entre ti e a mulher, e entre tua descendência e a descendência dela; esta te ferirá a cabeça, e tu lhe ferirás o calcanhar”.
16 ೧೬ ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
E para a mulher disse: “Multiplicarei grandemente as tuas dores e teus sofrimentos de parto; com dor darás à luz filhos; e o teu desejo será para o teu marido, e ele te dominará”.
17 ೧೭ ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
E ao homem disse: “Porque deste ouvidos à voz de tua mulher, e comeste da árvore de que te mandei dizendo, ‘Não comerás dela’, maldita será a terra por causa de ti; com dor comerás dela todos os dias da tua vida;
18 ೧೮ ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
Espinhos e cardos te produzirá, e comerás erva do campo.
19 ೧೯ ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
No suor do teu rosto comerás o pão até que voltes à terra, porque dela foste tomado; porque pó és, e ao pó voltarás”.
20 ೨೦ ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
E chamou o homem o nome de sua mulher, Eva; porquanto ela era mãe de todos o viventes.
21 ೨೧ ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
E o SENHOR Deus fez ao homem e à sua mulher túnicas de peles, e os vestiu.
22 ೨೨ ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
E disse o SENHOR Deus: Eis que o homem é como um de Nos sabendo o bem e o mal; agora, pois, para que não estenda sua mão, e tome também da árvore da vida, e coma, e viva para sempre:
23 ೨೩ ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
E tirou-o o SENHOR do jardim de Éden, para que lavrasse a terra de que foi tomado.
24 ೨೪ ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
Lançou, pois, fora ao homem, e pôs ao oriente do jardim de Éden querubins, e uma espada acesa que se revolvia a todos os lados, para guardar o caminho da árvore da vida.