< ಆದಿಕಾಂಡ 30 >

1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.
וַתֵּ֣רֶא רָחֵ֗ל כִּ֣י לֹ֤א יָֽלְדָה֙ לְיַעֲקֹ֔ב וַתְּקַנֵּ֥א רָחֵ֖ל בַּאֲחֹתָ֑הּ וַתֹּ֤אמֶר אֶֽל־יַעֲקֹב֙ הָֽבָה־לִּ֣י בָנִ֔ים וְאִם־אַ֖יִן מֵתָ֥ה אָנֹֽכִי׃
2 ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.
וַיִּֽחַר־אַ֥ף יַעֲקֹ֖ב בְּרָחֵ֑ל וַיֹּ֗אמֶר הֲתַ֤חַת אֱלֹהִים֙ אָנֹ֔כִי אֲשֶׁר־מָנַ֥ע מִמֵּ֖ךְ פְּרִי־בָֽטֶן׃
3 ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ,
וַתֹּ֕אמֶר הִנֵּ֛ה אֲמָתִ֥י בִלְהָ֖ה בֹּ֣א אֵלֶ֑יהָ וְתֵלֵד֙ עַל־בִּרְכַּ֔י וְאִבָּנֶ֥ה גַם־אָנֹכִ֖י מִמֶּֽנָּה׃
4 ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.
וַתִּתֶּן־ל֛וֹ אֶת־בִּלְהָ֥ה שִׁפְחָתָ֖הּ לְאִשָּׁ֑ה וַיָּבֹ֥א אֵלֶ֖יהָ יַעֲקֹֽב׃
5 ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು,
וַתַּ֣הַר בִּלְהָ֔ה וַתֵּ֥לֶד לְיַעֲקֹ֖ב בֵּֽן׃
6 ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು.
וַתֹּ֤אמֶר רָחֵל֙ דָּנַ֣נִּי אֱלֹהִ֔ים וְגַם֙ שָׁמַ֣ע בְּקֹלִ֔י וַיִּתֶּן־לִ֖י בֵּ֑ן עַל־כֵּ֛ן קָרְאָ֥ה שְׁמ֖וֹ דָּֽן׃
7 ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು,
וַתַּ֣הַר ע֔וֹד וַתֵּ֕לֶד בִּלְהָ֖ה שִׁפְחַ֣ת רָחֵ֑ל בֵּ֥ן שֵׁנִ֖י לְיַעֲקֹֽב׃
8 ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.
וַתֹּ֣אמֶר רָחֵ֗ל נַפְתּוּלֵ֨י אֱלֹהִ֧ים ׀ נִפְתַּ֛לְתִּי עִם־אֲחֹתִ֖י גַּם־יָכֹ֑לְתִּי וַתִּקְרָ֥א שְׁמ֖וֹ נַפְתָּלִֽי׃
9 ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.
וַתֵּ֣רֶא לֵאָ֔ה כִּ֥י עָמְדָ֖ה מִלֶּ֑דֶת וַתִּקַּח֙ אֶת־זִלְפָּ֣ה שִׁפְחָתָ֔הּ וַתִּתֵּ֥ן אֹתָ֛הּ לְיַעֲקֹ֖ב לְאִשָּֽׁה׃
10 ೧೦ ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಗಂಡು ಮಗುವನ್ನು ಹೆರಲು,
וַתֵּ֗לֶד זִלְפָּ֛ה שִׁפְחַ֥ת לֵאָ֖ה לְיַעֲקֹ֥ב בֵּֽן׃
11 ೧೧ ಲೇಯಳು, “ನನಗೆ ಶುಭವಾಯಿತೆಂದು” ಹೇಳಿ ಅದಕ್ಕೆ “ಗಾದ್” ಎಂದು ಹೆಸರಿಟ್ಟಳು.
וַתֹּ֥אמֶר לֵאָ֖ה בגד וַתִּקְרָ֥א אֶת־שְׁמ֖וֹ גָּֽד׃
12 ೧೨ ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಇನ್ನೊಂದು ಗಂಡು ಮಗುವನ್ನು ಹೆರಲು,
וַתֵּ֗לֶד זִלְפָּה֙ שִׁפְחַ֣ת לֵאָ֔ה בֵּ֥ן שֵׁנִ֖י לְיַעֲקֹֽב׃
13 ೧೩ ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಆಶೇರ್” ಎಂದು ಹೆಸರಿಟ್ಟಳು.
וַתֹּ֣אמֶר לֵאָ֔ה בְּאָשְׁרִ֕י כִּ֥י אִשְּׁר֖וּנִי בָּנ֑וֹת וַתִּקְרָ֥א אֶת־שְׁמ֖וֹ אָשֵֽׁר׃
14 ೧೪ ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು.
וַיֵּ֨לֶךְ רְאוּבֵ֜ן בִּימֵ֣י קְצִיר־חִטִּ֗ים וַיִּמְצָ֤א דֽוּדָאִים֙ בַּשָּׂדֶ֔ה וַיָּבֵ֣א אֹתָ֔ם אֶל־לֵאָ֖ה אִמּ֑וֹ וַתֹּ֤אמֶר רָחֵל֙ אֶל־לֵאָ֔ה תְּנִי־נָ֣א לִ֔י מִדּוּדָאֵ֖י בְּנֵֽךְ׃
15 ೧೫ ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.
וַתֹּ֣אמֶר לָ֗הּ הַמְעַט֙ קַחְתֵּ֣ךְ אֶת־אִישִׁ֔י וְלָקַ֕חַת גַּ֥ם אֶת־דּוּדָאֵ֖י בְּנִ֑י וַתֹּ֣אמֶר רָחֵ֗ל לָכֵן֙ יִשְׁכַּ֤ב עִמָּךְ֙ הַלַּ֔יְלָה תַּ֖חַת דּוּדָאֵ֥י בְנֵֽךְ׃
16 ೧೬ ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು.
וַיָּבֹ֨א יַעֲקֹ֣ב מִן־הַשָּׂדֶה֮ בָּעֶרֶב֒ וַתֵּצֵ֨א לֵאָ֜ה לִקְרָאת֗וֹ וַתֹּ֙אמֶר֙ אֵלַ֣י תָּב֔וֹא כִּ֚י שָׂכֹ֣ר שְׂכַרְתִּ֔יךָ בְּדוּדָאֵ֖י בְּנִ֑י וַיִּשְׁכַּ֥ב עִמָּ֖הּ בַּלַּ֥יְלָה הֽוּא׃
17 ೧೭ ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.
וַיִּשְׁמַ֥ע אֱלֹהִ֖ים אֶל־לֵאָ֑ה וַתַּ֛הַר וַתֵּ֥לֶד לְיַעֲקֹ֖ב בֵּ֥ן חֲמִישִֽׁי׃
18 ೧೮ ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ಇಸ್ಸಾಕಾರ್” ಎಂದು ಹೆಸರಿಟ್ಟಳು.
וַתֹּ֣אמֶר לֵאָ֗ה נָתַ֤ן אֱלֹהִים֙ שְׂכָרִ֔י אֲשֶׁר־נָתַ֥תִּי שִׁפְחָתִ֖י לְאִישִׁ֑י וַתִּקְרָ֥א שְׁמ֖וֹ יִשָּׂשכָֽר׃
19 ೧೯ ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.
וַתַּ֤הַר עוֹד֙ לֵאָ֔ה וַתֵּ֥לֶד בֵּן־שִׁשִּׁ֖י לְּיַעֲקֹֽב׃
20 ೨೦ ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ಜೆಬುಲೂನ್” ಎಂದು ಹೆಸರಿಟ್ಟಳು.
וַתֹּ֣אמֶר לֵאָ֗ה זְבָדַ֨נִי אֱלֹהִ֥ים ׀ אֹתִי֮ זֵ֣בֶד טוֹב֒ הַפַּ֙עַם֙ יִזְבְּלֵ֣נִי אִישִׁ֔י כִּֽי־יָלַ֥דְתִּי ל֖וֹ שִׁשָּׁ֣ה בָנִ֑ים וַתִּקְרָ֥א אֶת־שְׁמ֖וֹ זְבֻלֽוּן׃
21 ೨೧ ತರುವಾಯ ಆಕೆಯು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ “ದೀನಾ” ಎಂದು ಹೆಸರಿಟ್ಟಳು.
וְאַחַ֖ר יָ֣לְדָה בַּ֑ת וַתִּקְרָ֥א אֶת־שְׁמָ֖הּ דִּינָֽה׃
22 ೨೨ ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.
וַיִּזְכֹּ֥ר אֱלֹהִ֖ים אֶת־רָחֵ֑ל וַיִּשְׁמַ֤ע אֵלֶ֙יהָ֙ אֱלֹהִ֔ים וַיִּפְתַּ֖ח אֶת־רַחְמָֽהּ׃
23 ೨೩ ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು.
וַתַּ֖הַר וַתֵּ֣לֶד בֵּ֑ן וַתֹּ֕אמֶר אָסַ֥ף אֱלֹהִ֖ים אֶת־חֶרְפָּתִֽי׃
24 ೨೪ ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು.
וַתִּקְרָ֧א אֶת־שְׁמ֛וֹ יוֹסֵ֖ף לֵאמֹ֑ר יֹסֵ֧ף יְהוָ֛ה לִ֖י בֵּ֥ן אַחֵֽר׃
25 ೨೫ ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.
וַיְהִ֕י כַּאֲשֶׁ֛ר יָלְדָ֥ה רָחֵ֖ל אֶת־יוֹסֵ֑ף וַיֹּ֤אמֶר יַעֲקֹב֙ אֶל־לָבָ֔ן שַׁלְּחֵ֙נִי֙ וְאֵ֣לְכָ֔ה אֶל־מְקוֹמִ֖י וּלְאַרְצִֽי׃
26 ೨೬ ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.
תְּנָ֞ה אֶת־נָשַׁ֣י וְאֶת־יְלָדַ֗י אֲשֶׁ֨ר עָבַ֧דְתִּי אֹֽתְךָ֛ בָּהֵ֖ן וְאֵלֵ֑כָה כִּ֚י אַתָּ֣ה יָדַ֔עְתָּ אֶת־עֲבֹדָתִ֖י אֲשֶׁ֥ר עֲבַדְתִּֽיךָ׃
27 ೨೭ ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.
וַיֹּ֤אמֶר אֵלָיו֙ לָבָ֔ן אִם־נָ֛א מָצָ֥אתִי חֵ֖ן בְּעֵינֶ֑יךָ נִחַ֕שְׁתִּי וַיְבָרֲכֵ֥נִי יְהוָ֖ה בִּגְלָלֶֽךָ׃
28 ೨೮ ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ” ಎಂದು ಹೇಳಿದನು.
וַיֹּאמַ֑ר נָקְבָ֧ה שְׂכָרְךָ֛ עָלַ֖י וְאֶתֵּֽנָה׃
29 ೨೯ ಅದಕ್ಕೆ ಯಾಕೋಬನು, “ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ.
וַיֹּ֣אמֶר אֵלָ֔יו אַתָּ֣ה יָדַ֔עְתָּ אֵ֖ת אֲשֶׁ֣ר עֲבַדְתִּ֑יךָ וְאֵ֛ת אֲשֶׁר־הָיָ֥ה מִקְנְךָ֖ אִתִּֽי׃
30 ೩೦ ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು.
כִּ֡י מְעַט֩ אֲשֶׁר־הָיָ֨ה לְךָ֤ לְפָנַי֙ וַיִּפְרֹ֣ץ לָרֹ֔ב וַיְבָ֧רֶךְ יְהוָ֛ה אֹתְךָ֖ לְרַגְלִ֑י וְעַתָּ֗ה מָתַ֛י אֶֽעֱשֶׂ֥ה גַם־אָנֹכִ֖י לְבֵיתִֽי׃
31 ೩೧ ಅದಕ್ಕೆ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು” ಅನ್ನಲು ಯಾಕೋಬನು, “ನನಗೆ ಏನೂ ಕೊಡಬೇಡ, ನೀನು ನನಗೆ ಈ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು”
וַיֹּ֖אמֶר מָ֣ה אֶתֶּן־לָ֑ךְ וַיֹּ֤אמֶר יַעֲקֹב֙ לֹא־תִתֶּן־לִ֣י מְא֔וּמָה אִם־תַּֽעֲשֶׂה ־לִּי֙ הַדָּבָ֣ר הַזֶּ֔ה אָשׁ֛וּבָה אֶרְעֶ֥ה צֹֽאנְךָ֖ אֶשְׁמֹֽר׃
32 ೩೨ ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.
אֶֽעֱבֹ֨ר בְּכָל־צֹֽאנְךָ֜ הַיּ֗וֹם הָסֵ֨ר מִשָּׁ֜ם כָּל־שֶׂ֣ה ׀ נָקֹ֣ד וְטָל֗וּא וְכָל־שֶׂה־חוּם֙ בַּכְּשָׂבִ֔ים וְטָל֥וּא וְנָקֹ֖ד בָּעִזִּ֑ים וְהָיָ֖ה שְׂכָרִֽי׃
33 ೩೩ ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು.
וְעָֽנְתָה־בִּ֤י צִדְקָתִי֙ בְּי֣וֹם מָחָ֔ר כִּֽי־תָב֥וֹא עַל־שְׂכָרִ֖י לְפָנֶ֑יךָ כֹּ֣ל אֲשֶׁר־אֵינֶנּוּ֩ נָקֹ֨ד וְטָל֜וּא בָּֽעִזִּ֗ים וְחוּם֙ בַּכְּשָׂבִ֔ים גָּנ֥וּב ה֖וּא אִתִּֽי׃
34 ೩೪ ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ” ಎಂದನು.
וַיֹּ֥אמֶר לָבָ֖ן הֵ֑ן ל֖וּ יְהִ֥י כִדְבָרֶֽךָ׃
35 ೩೫ ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.
וַיָּ֣סַר בַּיּוֹם֩ הַה֨וּא אֶת־הַתְּיָשִׁ֜ים הָֽעֲקֻדִּ֣ים וְהַטְּלֻאִ֗ים וְאֵ֤ת כָּל־הָֽעִזִּים֙ הַנְּקֻדּ֣וֹת וְהַטְּלֻאֹ֔ת כֹּ֤ל אֲשֶׁר־לָבָן֙ בּ֔וֹ וְכָל־ח֖וּם בַּכְּשָׂבִ֑ים וַיִּתֵּ֖ן בְּיַד־בָּנָֽיו׃
36 ೩೬ ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು.
וַיָּ֗שֶׂם דֶּ֚רֶךְ שְׁלֹ֣שֶׁת יָמִ֔ים בֵּינ֖וֹ וּבֵ֣ין יַעֲקֹ֑ב וְיַעֲקֹ֗ב רֹעֶ֛ה אֶת־צֹ֥אן לָבָ֖ן הַנּוֹתָרֹֽת׃
37 ೩೭ ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು,
וַיִּֽקַּֽח־ל֣וֹ יַעֲקֹ֗ב מַקַּ֥ל לִבְנֶ֛ה לַ֖ח וְל֣וּז וְעֶרְמ֑וֹן וַיְפַצֵּ֤ל בָּהֵן֙ פְּצָל֣וֹת לְבָנ֔וֹת מַחְשֹׂף֙ הַלָּבָ֔ן אֲשֶׁ֖ר עַל־הַמַּקְלֽוֹת׃
38 ೩೮ ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು. ಆ ಕೋಲುಗಳನ್ನು ಆಡುಕುರಿಗಳ ಹಿಂಡು ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ.
וַיַּצֵּ֗ג אֶת־הַמַּקְלוֹת֙ אֲשֶׁ֣ר פִּצֵּ֔ל בָּרֳהָטִ֖ים בְּשִֽׁקֲת֣וֹת הַמָּ֑יִם אֲשֶׁר֩ תָּבֹ֨אןָ הַצֹּ֤אן לִשְׁתּוֹת֙ לְנֹ֣כַח הַצֹּ֔אן וַיֵּחַ֖מְנָה בְּבֹאָ֥ן לִשְׁתּֽוֹת׃
39 ೩೯ ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
וַיֶּחֱמ֥וּ הַצֹּ֖אן אֶל־הַמַּקְל֑וֹת וַתֵּלַ֣דְןָ הַצֹּ֔אן עֲקֻדִּ֥ים נְקֻדִּ֖ים וּטְלֻאִֽים׃
40 ೪೦ ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಆಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು.
וְהַכְּשָׂבִים֮ הִפְרִ֣יד יַעֲקֹב֒ וַ֠יִּתֵּן פְּנֵ֨י הַצֹּ֧אן אֶל־עָקֹ֛ד וְכָל־ח֖וּם בְּצֹ֣אן לָבָ֑ן וַיָּֽשֶׁת־ל֤וֹ עֲדָרִים֙ לְבַדּ֔וֹ וְלֹ֥א שָׁתָ֖ם עַל־צֹ֥אן לָבָֽן׃
41 ೪೧ ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಆಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ.
וְהָיָ֗ה בְּכָל־יַחֵם֮ הַצֹּ֣אן הַמְקֻשָּׁרוֹת֒ וְשָׂ֨ם יַעֲקֹ֧ב אֶת־הַמַּקְל֛וֹת לְעֵינֵ֥י הַצֹּ֖אן בָּרֳהָטִ֑ים לְיַחְמֵ֖נָּה בַּמַּקְלֽוֹת׃
42 ೪೨ ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು.
וּבְהַעֲטִ֥יף הַצֹּ֖אן לֹ֣א יָשִׂ֑ים וְהָיָ֤ה הָעֲטֻפִים֙ לְלָבָ֔ן וְהַקְּשֻׁרִ֖ים לְיַעֲקֹֽב׃
43 ೪೩ ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.
וַיִּפְרֹ֥ץ הָאִ֖ישׁ מְאֹ֣ד מְאֹ֑ד וַֽיְהִי־לוֹ֙ צֹ֣אן רַבּ֔וֹת וּשְׁפָחוֹת֙ וַעֲבָדִ֔ים וּגְמַלִּ֖ים וַחֲמֹרִֽים׃

< ಆದಿಕಾಂಡ 30 >