< ಆದಿಕಾಂಡ 31 >

1 “ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.
וַיִּשְׁמַע אֶת־דִּבְרֵי בְנֵֽי־לָבָן לֵאמֹר לָקַח יַעֲקֹב אֵת כָּל־אֲשֶׁר לְאָבִינוּ וּמֵאֲשֶׁר לְאָבִינוּ עָשָׂה אֵת כָּל־הַכָּבֹד הַזֶּֽה׃
2 ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.
וַיַּרְא יַעֲקֹב אֶת־פְּנֵי לָבָן וְהִנֵּה אֵינֶנּוּ עִמּוֹ כִּתְמוֹל שִׁלְשֽׁוֹם׃
3 ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.
וַיֹּאמֶר יְהוָה אֶֽל־יַעֲקֹב שׁוּב אֶל־אֶרֶץ אֲבוֹתֶיךָ וּלְמוֹלַדְתֶּךָ וְאֶֽהְיֶה עִמָּֽךְ׃
4 ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂಡನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ
וַיִּשְׁלַח יַעֲקֹב וַיִּקְרָא לְרָחֵל וּלְלֵאָה הַשָּׂדֶה אֶל־צֹאנֽוֹ׃
5 ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.
וַיֹּאמֶר לָהֶן רֹאֶה אָנֹכִי אֶת־פְּנֵי אֲבִיכֶן כִּֽי־אֵינֶנּוּ אֵלַי כִּתְמֹל שִׁלְשֹׁם וֽ͏ֵאלֹהֵי אָבִי הָיָה עִמָּדִֽי׃
6 ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲಿರಿ.
וְאַתֵּנָה יְדַעְתֶּן כִּי בְּכָל־כֹּחִי עָבַדְתִּי אֶת־אֲבִיכֶֽן׃
7 ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.
וַאֲבִיכֶן הֵתֶל בִּי וְהֶחֱלִף אֶת־מַשְׂכֻּרְתִּי עֲשֶׂרֶת מֹנִים וְלֹֽא־נְתָנוֹ אֱלֹהִים לְהָרַע עִמָּדִֽי׃
8 ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು.
אִם־כֹּה יֹאמַר נְקֻדִּים יִהְיֶה שְׂכָרֶךָ וְיָלְדוּ כָל־הַצֹּאן נְקֻדִּים וְאִם־כֹּה יֹאמַר עֲקֻדִּים יִהְיֶה שְׂכָרֶךָ וְיָלְדוּ כָל־הַצֹּאן עֲקֻדִּֽים׃
9 ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು, ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು.
וַיַּצֵּל אֱלֹהִים אֶת־מִקְנֵה אֲבִיכֶם וַיִּתֶּן־לִֽי׃
10 ೧೦ “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.
וַיְהִי בְּעֵת יַחֵם הַצֹּאן וָאֶשָּׂא עֵינַי וָאֵרֶא בַּחֲלוֹם וְהִנֵּה הָֽעַתֻּדִים הָעֹלִים עַל־הַצֹּאן עֲקֻדִּים נְקֻדִּים וּבְרֻדִּֽים׃
11 ೧೧ ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ
וַיֹּאמֶר אֵלַי מַלְאַךְ הָאֱלֹהִים בַּחֲלוֹם יֽ͏ַעֲקֹב וָאֹמַר הִנֵּֽנִי׃
12 ೧೨ ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.
וַיֹּאמֶר שָׂא־נָא עֵינֶיךָ וּרְאֵה כָּל־הָֽעַתֻּדִים הָעֹלִים עַל־הַצֹּאן עֲקֻדִּים נְקֻדִּים וּבְרֻדִּים כִּי רָאִיתִי אֵת כָּל־אֲשֶׁר לָבָן עֹשֶׂה לָּֽךְ׃
13 ೧೩ ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.
אָנֹכִי הָאֵל בֵּֽית־אֵל אֲשֶׁר מָשַׁחְתָּ שָּׁם מַצֵּבָה אֲשֶׁר נָדַרְתָּ לִּי שָׁם נֶדֶר עַתָּה קוּם צֵא מִן־הָאָרֶץ הַזֹּאת וְשׁוּב אֶל־אֶרֶץ מוֹלַדְתֶּֽךָ׃
14 ೧೪ ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ?
וַתַּעַן רָחֵל וְלֵאָה וַתֹּאמַרְנָה לוֹ הַעוֹד לָנוּ חֵלֶק וְנַחֲלָה בְּבֵית אָבִֽינוּ׃
15 ೧೫ ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.
הֲלוֹא נָכְרִיּוֹת נֶחְשַׁבְנוּ לוֹ כִּי מְכָרָנוּ וַיֹּאכַל גַּם־אָכוֹל אֶת־כַּסְפֵּֽנוּ׃
16 ೧೬ ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು.
כִּי כָל־הָעֹשֶׁר אֲשֶׁר הִצִּיל אֱלֹהִים מֵֽאָבִינוּ לָנוּ הוּא וּלְבָנֵינוּ וְעַתָּה כֹּל אֲשֶׁר אָמַר אֱלֹהִים אֵלֶיךָ עֲשֵֽׂה׃
17 ೧೭ ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು.
וַיָּקָם יַעֲקֹב וַיִּשָּׂא אֶת־בָּנָיו וְאֶת־נָשָׁיו עַל־הַגְּמַלִּֽים׃
18 ೧೮ ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.
וַיִּנְהַג אֶת־כָּל־מִקְנֵהוּ וְאֶת־כָּל־רְכֻשׁוֹ אֲשֶׁר רָכָשׁ מִקְנֵה קִנְיָנוֹ אֲשֶׁר רָכַשׁ בְּפַדַּן אֲרָם לָבוֹא אֶל־יִצְחָק אָבִיו אַרְצָה כְּנָֽעַן׃
19 ೧೯ ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
וְלָבָן הָלַךְ לִגְזֹז אֶת־צֹאנוֹ וַתִּגְנֹב רָחֵל אֶת־הַתְּרָפִים אֲשֶׁר לְאָבִֽיהָ׃
20 ೨೦ ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.
וַיִּגְנֹב יַעֲקֹב אֶת־לֵב לָבָן הָאֲרַמִּי עַל־בְּלִי הִגִּיד לוֹ כִּי בֹרֵחַ הֽוּא׃
21 ೨೧ ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.
וַיִּבְרַח הוּא וְכָל־אֲשֶׁר־לוֹ וַיָּקָם וַיַּעֲבֹר אֶת־הַנָּהָר וַיָּשֶׂם אֶת־פָּנָיו הַר הַגִּלְעָֽד׃
22 ೨೨ ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,
וַיֻּגַּד לְלָבָן בַּיּוֹם הַשְּׁלִישִׁי כִּי בָרַח יַעֲקֹֽב׃
23 ೨೩ ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.
וַיִּקַּח אֶת־אֶחָיו עִמּוֹ וַיִּרְדֹּף אַחֲרָיו דֶּרֶךְ שִׁבְעַת יָמִים וַיַּדְבֵּק אֹתוֹ בְּהַר הַגִּלְעָֽד׃
24 ೨೪ ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.
וַיָּבֹא אֱלֹהִים אֶל־לָבָן הָאֲרַמִּי בַּחֲלֹם הַלָּיְלָה וַיֹּאמֶר לוֹ הִשָּׁמֶר לְךָ פֶּן־תְּדַבֵּר עִֽם־יַעֲקֹב מִטּוֹב עַד־רָֽע׃
25 ೨೫ ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.
וַיַּשֵּׂג לָבָן אֶֽת־יַעֲקֹב וְיַעֲקֹב תָּקַע אֶֽת־אָהֳלוֹ בָּהָר וְלָבָן תָּקַע אֶת־אֶחָיו בְּהַר הַגִּלְעָֽד׃
26 ೨೬ ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.
וַיֹּאמֶר לָבָן לְיַעֲקֹב מֶה עָשִׂיתָ וַתִּגְנֹב אֶת־לְבָבִי וַתְּנַהֵג אֶת־בְּנֹתַי כִּשְׁבֻיוֹת חָֽרֶב׃
27 ೨೭ ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.
לָמָּה נַחְבֵּאתָ לִבְרֹחַ וַתִּגְנֹב אֹתִי וְלֹא־הִגַּדְתָּ לִּי וָֽאֲשַׁלֵּחֲךָ בְּשִׂמְחָה וּבְשִׁרִים בְּתֹף וּבְכִנּֽוֹר׃
28 ೨೮ ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.
וְלֹא נְטַשְׁתַּנִי לְנַשֵּׁק לְבָנַי וְלִבְנֹתָי עַתָּה הִסְכַּלְתָּֽ עֲשֽׂוֹ׃
29 ೨೯ ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.
יֶשׁ־לְאֵל יָדִי לַעֲשׂוֹת עִמָּכֶם רָע וֽ͏ֵאלֹהֵי אֲבִיכֶם אֶמֶשׁ ׀ אָמַר אֵלַי לֵאמֹר הִשָּׁמֶר לְךָ מִדַּבֵּר עִֽם־יַעֲקֹב מִטּוֹב עַד־רָֽע׃
30 ೩೦ ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.
וְעַתָּה הָלֹךְ הָלַכְתָּ כִּֽי־נִכְסֹף נִכְסַפְתָּה לְבֵית אָבִיךָ לָמָּה גָנַבְתָּ אֶת־אֱלֹהָֽי׃
31 ೩೧ ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.
וַיַּעַן יַעֲקֹב וַיֹּאמֶר לְלָבָן כִּי יָרֵאתִי כִּי אָמַרְתִּי פֶּן־תִּגְזֹל אֶת־בְּנוֹתֶיךָ מֵעִמִּֽי׃
32 ೩೨ ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.
עִם אֲשֶׁר תִּמְצָא אֶת־אֱלֹהֶיךָ לֹא יִֽחְיֶה נֶגֶד אַחֵינוּ הַֽכֶּר־לְךָ מָה עִמָּדִי וְקַֽח־לָךְ וְלֹֽא־יָדַע יַעֲקֹב כִּי רָחֵל גְּנָבָֽתַם׃
33 ೩೩ ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.
וַיָּבֹא לָבָן בְּאֹהֶל יַעֲקֹב ׀ וּבְאֹהֶל לֵאָה וּבְאֹהֶל שְׁתֵּי הָאֲמָהֹת וְלֹא מָצָא וַיֵּצֵא מֵאֹהֶל לֵאָה וַיָּבֹא בְּאֹהֶל רָחֵֽל׃
34 ೩೪ ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.
וְרָחֵל לָקְחָה אֶת־הַתְּרָפִים וַתְּשִׂמֵם בְּכַר הַגָּמָל וַתֵּשֶׁב עֲלֵיהֶם וַיְמַשֵּׁשׁ לָבָן אֶת־כָּל־הָאֹהֶל וְלֹא מָצָֽא׃
35 ೩೫ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.
וַתֹּאמֶר אֶל־אָבִיהָ אַל־יִחַר בְּעֵינֵי אֲדֹנִי כִּי לוֹא אוּכַל לָקוּם מִפָּנֶיךָ כִּי־דֶרֶךְ נָשִׁים לִי וַיְחַפֵּשׂ וְלֹא מָצָא אֶת־הַתְּרָפִֽים׃
36 ೩೬ ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?
וַיִּחַר לְיַעֲקֹב וַיָּרֶב בְּלָבָן וַיַּעַן יַעֲקֹב וַיֹּאמֶר לְלָבָן מַה־פִּשְׁעִי מַה חַטָּאתִי כִּי דָלַקְתָּ אַחֲרָֽי׃
37 ೩೭ ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.
כִּֽי־מִשַּׁשְׁתָּ אֶת־כָּל־כֵּלַי מַה־מָּצָאתָ מִכֹּל כְּלֵי־בֵיתֶךָ שִׂים כֹּה נֶגֶד אַחַי וְאַחֶיךָ וְיוֹכִיחוּ בֵּין שְׁנֵֽינוּ׃
38 ೩೮ “ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ.
זֶה עֶשְׂרִים שָׁנָה אָנֹכִי עִמָּךְ רְחֵלֶיךָ וְעִזֶּיךָ לֹא שִׁכֵּלוּ וְאֵילֵי צֹאנְךָ לֹא אָכָֽלְתִּי׃
39 ೩೯ ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.
טְרֵפָה לֹא־הֵבֵאתִי אֵלֶיךָ אָנֹכִי אֲחַטֶּנָּה מִיָּדִי תְּבַקְשֶׁנָּה גְּנֻֽבְתִי יוֹם וּגְנֻֽבְתִי לָֽיְלָה׃
40 ೪೦ ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.
הָיִיתִי בַיּוֹם אֲכָלַנִי חֹרֶב וְקֶרַח בַּלָּיְלָה וַתִּדַּד שְׁנָתִי מֵֽעֵינָֽי׃
41 ೪೧ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.
זֶה־לִּי עֶשְׂרִים שָׁנָה בְּבֵיתֶךָ עֲבַדְתִּיךָ אַרְבַּֽע־עֶשְׂרֵה שָׁנָה בִּשְׁתֵּי בְנֹתֶיךָ וְשֵׁשׁ שָׁנִים בְּצֹאנֶךָ וַתַּחֲלֵף אֶת־מַשְׂכֻּרְתִּי עֲשֶׂרֶת מֹנִֽים׃
42 ೪೨ ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.
לוּלֵי אֱלֹהֵי אָבִי אֱלֹהֵי אַבְרָהָם וּפַחַד יִצְחָק הָיָה לִי כִּי עַתָּה רֵיקָם שִׁלַּחְתָּנִי אֶת־עָנְיִי וְאֶת־יְגִיעַ כַּפַּי רָאָה אֱלֹהִים וַיּוֹכַח אָֽמֶשׁ׃
43 ೪೩ ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ?
וַיַּעַן לָבָן וַיֹּאמֶר אֶֽל־יַעֲקֹב הַבָּנוֹת בְּנֹתַי וְהַבָּנִים בָּנַי וְהַצֹּאן צֹאנִי וְכֹל אֲשֶׁר־אַתָּה רֹאֶה לִי־הוּא וְלִבְנֹתַי מָֽה־אֽ͏ֶעֱשֶׂה לָאֵלֶּה הַיּוֹם אוֹ לִבְנֵיהֶן אֲשֶׁר יָלָֽדוּ׃
44 ೪೪ ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು.
וְעַתָּה לְכָה נִכְרְתָה בְרִית אֲנִי וָאָתָּה וְהָיָה לְעֵד בֵּינִי וּבֵינֶֽךָ׃
45 ೪೫ ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.
וַיִּקַּח יַעֲקֹב אָבֶן וַיְרִימֶהָ מַצֵּבָֽה׃
46 ೪೬ ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.
וַיֹּאמֶר יַעֲקֹב לְאֶחָיו לִקְטוּ אֲבָנִים וַיִּקְחוּ אֲבָנִים וַיַּֽעֲשׂוּ־גָל וַיֹּאכְלוּ שָׁם עַל־הַגָּֽל׃
47 ೪೭ ಆ ಗುಡ್ಡೆಗೆ ಲಾಬಾನನು “ಯಗರಸಾಹದೂತ” ಎಂದೂ ಯಾಕೋಬನು “ಗಲೇದ್” ಎಂದೂ ಹೆಸರಿಟ್ಟರು.
וַיִּקְרָא־לוֹ לָבָן יְגַר שָׂהֲדוּתָא וְיַֽעֲקֹב קָרָא לוֹ גַּלְעֵֽד׃
48 ೪೮ ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.
וַיֹּאמֶר לָבָן הַגַּל הַזֶּה עֵד בֵּינִי וּבֵינְךָ הַיּוֹם עַל־כֵּן קָרָֽא־שְׁמוֹ גַּלְעֵֽד׃
49 ೪೯ ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು
וְהַמִּצְפָּה אֲשֶׁר אָמַר יִצֶף יְהוָה בֵּינִי וּבֵינֶךָ כִּי נִסָּתֵר אִישׁ מֵרֵעֵֽהוּ׃
50 ೫೦ ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು.
אִם־תְּעַנֶּה אֶת־בְּנֹתַי וְאִם־תִּקַּח נָשִׁים עַל־בְּנֹתַי אֵין אִישׁ עִמָּנוּ רְאֵה אֱלֹהִים עֵד בֵּינִי וּבֵינֶֽךָ׃
51 ೫೧ ಇದಲ್ಲದೆ ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು.
וַיֹּאמֶר לָבָן לְיַעֲקֹב הִנֵּה ׀ הַגַּל הַזֶּה וְהִנֵּה הַמַצֵּבָה אֲשֶׁר יָרִיתִי בֵּינִי וּבֵינֶֽךָ׃
52 ೫೨ ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ.
עֵד הַגַּל הַזֶּה וְעֵדָה הַמַּצֵּבָה אִם־אָנִי לֹֽא־אֽ͏ֶעֱבֹר אֵלֶיךָ אֶת־הַגַּל הַזֶּה וְאִם־אַתָּה לֹא־תַעֲבֹר אֵלַי אֶת־הַגַּל הַזֶּה וְאֶת־הַמַּצֵּבָה הַזֹּאת לְרָעָֽה׃
53 ೫೩ ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
אֱלֹהֵי אַבְרָהָם וֵֽאלֹהֵי נָחוֹר יִשְׁפְּטוּ בֵינֵינוּ אֱלֹהֵי אֲבִיהֶם וַיִּשָּׁבַע יַעֲקֹב בְּפַחַד אָבִיו יִצְחָֽק׃
54 ೫೪ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.
וַיִּזְבַּח יַעֲקֹב זֶבַח בָּהָר וַיִּקְרָא לְאֶחָיו לֶאֱכָל־לָחֶם וַיֹּאכְלוּ לֶחֶם וַיָּלִינוּ בָּהָֽר׃
55 ೫೫ ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.
וַיַּשְׁכֵּם לָבָן בַּבֹּקֶר וַיְנַשֵּׁק לְבָנָיו וְלִבְנוֹתָיו וַיְבָרֶךְ אֶתְהֶם וַיֵּלֶךְ וַיָּשָׁב לָבָן לִמְקֹמֽוֹ׃

< ಆದಿಕಾಂಡ 31 >