< ಆದಿಕಾಂಡ 34 >
1 ೧ ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.
१एक दिन लिआ की बेटी दीना, जो याकूब से उत्पन्न हुई थी, उस देश की लड़कियों से भेंट करने को निकली।
2 ೨ ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.
२तब उस देश के प्रधान हिब्बी हमोर के पुत्र शेकेम ने उसे देखा, और उसे ले जाकर उसके साथ कुकर्म करके उसको भ्रष्ट कर डाला।
3 ೩ ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.
३तब उसका मन याकूब की बेटी दीना से लग गया, और उसने उस कन्या से प्रेम की बातें की, और उससे प्रेम करने लगा।
4 ೪ ಶೆಕೆಮನು ತನ್ನ ತಂದೆಯಾದ ಹಮೋರನಿಗೆ, “ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು” ಎಂದು ಕೇಳಿಕೊಂಡನು.
४अतः शेकेम ने अपने पिता हमोर से कहा, “मुझे इस लड़की को मेरी पत्नी होने के लिये दिला दे।”
5 ೫ ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
५और याकूब ने सुना कि शेकेम ने मेरी बेटी दीना को अशुद्ध कर डाला है, पर उसके पुत्र उस समय पशुओं के संग मैदान में थे, इसलिए वह उनके आने तक चुप रहा।
6 ೬ ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.
६तब शेकेम का पिता हमोर निकलकर याकूब से बातचीत करने के लिये उसके पास गया।
7 ೭ ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
७याकूब के पुत्र यह सुनते ही मैदान से बहुत उदास और क्रोधित होकर आए; क्योंकि शेकेम ने याकूब की बेटी के साथ कुकर्म करके इस्राएल के घराने से मूर्खता का ऐसा काम किया था, जिसका करना अनुचित था।
8 ೮ ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
८हमोर ने उन सबसे कहा, “मेरे पुत्र शेकेम का मन तुम्हारी बेटी पर बहुत लगा है, इसलिए उसे उसकी पत्नी होने के लिये उसको दे दो।
9 ೯ ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ.
९और हमारे साथ ब्याह किया करो; अपनी बेटियाँ हमको दिया करो, और हमारी बेटियों को आप लिया करो।
10 ೧೦ ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು.
१०और हमारे संग बसे रहो; और यह देश तुम्हारे सामने पड़ा है; इसमें रहकर लेन-देन करो, और इसकी भूमि को अपने लिये ले लो।”
11 ೧೧ ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.
११और शेकेम ने भी दीना के पिता और भाइयों से कहा, “यदि मुझ पर तुम लोगों की अनुग्रह की दृष्टि हो, तो जो कुछ तुम मुझसे कहो, वह मैं दूँगा।
12 ೧೨ ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.
१२तुम मुझसे कितना ही मूल्य या बदला क्यों न माँगो, तो भी मैं तुम्हारे कहे के अनुसार दूँगा; परन्तु उस कन्या को पत्नी होने के लिये मुझे दो।”
13 ೧೩ ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
१३तब यह सोचकर कि शेकेम ने हमारी बहन दीना को अशुद्ध किया है, याकूब के पुत्रों ने शेकेम और उसके पिता हमोर को छल के साथ यह उत्तर दिया,
14 ೧೪ ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.
१४“हम ऐसा काम नहीं कर सकते कि किसी खतनारहित पुरुष को अपनी बहन दें; क्योंकि इससे हमारी नामधराई होगी।
15 ೧೫ ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.
१५इस बात पर तो हम तुम्हारी मान लेंगे कि हमारे समान तुम में से हर एक पुरुष का खतना किया जाए।
16 ೧೬ ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
१६तब हम अपनी बेटियाँ तुम्हें ब्याह देंगे, और तुम्हारी बेटियाँ ब्याह लेंगे, और तुम्हारे संग बसे भी रहेंगे, और हम दोनों एक ही समुदाय के मनुष्य हो जाएँगे।
17 ೧೭ ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು.
१७पर यदि तुम हमारी बात न मानकर अपना खतना न कराओगे, तो हम अपनी लड़की को लेकर यहाँ से चले जाएँगे।”
18 ೧೮ ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.
१८उसकी इस बात पर हमोर और उसका पुत्र शेकेम प्रसन्न हुए।
19 ೧೯ ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
१९और वह जवान जो याकूब की बेटी को बहुत चाहता था, इस काम को करने में उसने विलम्ब न किया। वह तो अपने पिता के सारे घराने में अधिक प्रतिष्ठित था।
20 ೨೦ ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,
२०इसलिए हमोर और उसका पुत्र शेकेम अपने नगर के फाटक के निकट जाकर नगरवासियों को यह समझाने लगे;
21 ೨೧ “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.
२१“वे मनुष्य तो हमारे संग मेल से रहना चाहते हैं; अतः उन्हें इस देश में रहकर लेन-देन करने दो; देखो, यह देश उनके लिये भी बहुत है; फिर हम लोग उनकी बेटियों को ब्याह लें, और अपनी बेटियों को उन्हें दिया करें।
22 ೨೨ “ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.
२२वे लोग केवल इस बात पर हमारे संग रहने और एक ही समुदाय के मनुष्य हो जाने को प्रसन्न हैं कि उनके समान हमारे सब पुरुषों का भी खतना किया जाए।
23 ೨೩ ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.
२३क्या उनकी भेड़-बकरियाँ, और गाय-बैल वरन् उनके सारे पशु और धन-सम्पत्ति हमारी न हो जाएगी? इतना ही करें कि हम लोग उनकी बात मान लें, तो वे हमारे संग रहेंगे।”
24 ೨೪ ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
२४इसलिए जितने उस नगर के फाटक से निकलते थे, उन सभी ने हमोर की और उसके पुत्र शेकेम की बात मानी; और हर एक पुरुष का खतना किया गया, जितने उस नगर के फाटक से निकलते थे।
25 ೨೫ ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
२५तीसरे दिन, जब वे लोग पीड़ित पड़े थे, तब ऐसा हुआ कि शिमोन और लेवी नामक याकूब के दो पुत्रों ने, जो दीना के भाई थे, अपनी-अपनी तलवार ले उस नगर में निधड़क घुसकर सब पुरुषों को घात किया।
26 ೨೬ ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.
२६हमोर और उसके पुत्र शेकेम को उन्होंने तलवार से मार डाला, और दीना को शेकेम के घर से निकाल ले गए।
27 ೨೭ ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
२७याकूब के पुत्रों ने घात कर डालने पर भी चढ़कर नगर को इसलिए लूट लिया कि उसमें उनकी बहन अशुद्ध की गई थी।
28 ೨೮ ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
२८उन्होंने भेड़-बकरी, और गाय-बैल, और गदहे, और नगर और मैदान में जितना धन था ले लिया।
29 ೨೯ ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.
२९उस सब को, और उनके बाल-बच्चों, और स्त्रियों को भी हर ले गए, वरन् घर-घर में जो कुछ था, उसको भी उन्होंने लूट लिया।
30 ೩೦ ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
३०तब याकूब ने शिमोन और लेवी से कहा, “तुम ने जो इस देश के निवासी कनानियों और परिज्जियों के मन में मेरे प्रति घृणा उत्पन्न कराई है, इससे तुम ने मुझे संकट में डाला है, क्योंकि मेरे साथ तो थोड़े ही लोग हैं, इसलिए अब वे इकट्ठे होकर मुझ पर चढ़ेंगे, और मुझे मार डालेंगे, तो मैं अपने घराने समेत सत्यानाश हो जाऊँगा।”
31 ೩೧ ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು.
३१उन्होंने कहा, “क्या वह हमारी बहन के साथ वेश्या के समान बर्ताव करे?”