< ಆದಿಕಾಂಡ 35 >
1 ೧ ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
ときに神はヤコブに言われた、「あなたは立ってベテルに上り、そこに住んで、あなたがさきに兄エサウの顔を避けてのがれる時、あなたに現れた神に祭壇を造りなさい」。
2 ೨ ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,
ヤコブは、その家族および共にいるすべての者に言った、「あなたがたのうちにある異なる神々を捨て、身を清めて着物を着替えなさい。
3 ೩ ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.
われわれは立ってベテルに上り、その所でわたしの苦難の日にわたしにこたえ、かつわたしの行く道で共におられた神に祭壇を造ろう」。
4 ೪ ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.
そこで彼らは持っている異なる神々と、耳につけている耳輪をことごとくヤコブに与えたので、ヤコブはこれをシケムのほとりにあるテレビンの木の下に埋めた。
5 ೫ ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
そして彼らは、いで立ったが、大いなる恐れが周囲の町々に起ったので、ヤコブの子らのあとを追う者はなかった。
6 ೬ ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.
こうしてヤコブは共にいたすべての人々と一緒にカナンの地にあるルズ、すなわちベテルにきた。
7 ೭ ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
彼はそこに祭壇を築き、その所をエル・ベテルと名づけた。彼が兄の顔を避けてのがれる時、神がそこで彼に現れたからである。
8 ೮ ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.
時にリベカのうばデボラが死んで、ベテルのしもの、かしの木の下に葬られた。これによってその木の名をアロン・バクテと呼ばれた。
9 ೯ ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.
さてヤコブがパダンアラムから帰ってきた時、神は再び彼に現れて彼を祝福された。
10 ೧೦ ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
神は彼に言われた、「あなたの名はヤコブである。しかしあなたの名をもはやヤコブと呼んではならない。あなたの名をイスラエルとしなさい」。こうして彼をイスラエルと名づけられた。
11 ೧೧ ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
神はまた彼に言われた、「わたしは全能の神である。あなたは生めよ、またふえよ。一つの国民、また多くの国民があなたから出て、王たちがあなたの身から出るであろう。
12 ೧೨ ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
わたしはアブラハムとイサクとに与えた地を、あなたに与えよう。またあなたの後の子孫にその地を与えよう」。
13 ೧೩ ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು.
神は彼と語っておられたその場所から彼を離れてのぼられた。
14 ೧೪ ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
そこでヤコブは神が自分と語られたその場所に、一本の石の柱を立て、その上に灌祭をささげ、また油を注いだ。
15 ೧೫ ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.
そしてヤコブは神が自分と語られたその場所をベテルと名づけた。
16 ೧೬ ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
こうして彼らはベテルを立ったが、エフラタに行き着くまでに、なお隔たりのある所でラケルは産気づき、その産は重かった。
17 ೧೭ ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.
その難産に当って、産婆は彼女に言った、「心配することはありません。今度も男の子です」。
18 ೧೮ ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.
彼女は死にのぞみ、魂の去ろうとする時、子の名をベノニと呼んだ。しかし、父はこれをベニヤミンと名づけた。
19 ೧೯ ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.
ラケルは死んでエフラタ、すなわちベツレヘムの道に葬られた。
20 ೨೦ ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ.
ヤコブはその墓に柱を立てた。これはラケルの墓の柱であって、今日に至っている。
21 ೨೧ ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.
イスラエルはまた、いで立ってミグダル・エダルの向こうに天幕を張った。
22 ೨೨ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
イスラエルがその地に住んでいた時、ルベンは父のそばめビルハのところへ行って、これと寝た。イスラエルはこれを聞いた。さてヤコブの子らは十二人であった。
23 ೨೩ ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.
すなわちレアの子らはヤコブの長子ルベンとシメオン、レビ、ユダ、イッサカル、ゼブルン。
24 ೨೪ ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.
ラケルの子らはヨセフとベニヤミン。
25 ೨೫ ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.
ラケルのつかえめビルハの子らはダンとナフタリ。
26 ೨೬ ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
レアのつかえめジルパの子らはガドとアセル。これらはヤコブの子らであって、パダンアラムで彼に生れた者である。
27 ೨೭ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.
ヤコブはキリアテ・アルバ、すなわちヘブロンのマムレにいる父イサクのもとへ行った。ここはアブラハムとイサクとが寄留した所である。
28 ೨೮ ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
イサクの年は百八十歳であった。
29 ೨೯ ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.
イサクは年老い、日満ちて息絶え、死んで、その民に加えられた。その子エサウとヤコブとは、これを葬った。