< ಆದಿಕಾಂಡ 36 >
1 ೧ ಎದೋಮ್ ಎಂಬ ಏಸಾವನ ವಂಶಾವಳಿ ಇದು:
Waɗannan su ne zuriyar Isuwa (wato, Edom).
2 ೨ ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,
Isuwa ya ɗauko matansa daga cikin matan Kan’ana, ya ɗauko Ada’yar Elon mutumin Hitti, da Oholibama’yar Ana wadda take jikanyar Zibeyon Bahiwiye
3 ೩ ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.
ya kuma auri Basemat’yar Ishmayel wadda take’yar’uwar Nebayiwot.
4 ೪ ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
Ada ta haifi wa Isuwa, Elifaz. Basemat kuma ta haifa masa Reyuwel.
5 ೫ ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.
Oholibama kuwa ta haifa masa Yewush, Yalam da Kora. Waɗannan su ne’ya’yan Isuwa maza, waɗanda aka haifa masa a Kan’ana.
6 ೬ ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.
Isuwa ya ɗauki matansa da’ya’yansa maza da mata da kuma dukan membobin gidansa, ya kuma ɗauki shanunsa da dukan sauran dabbobinsa, da dukan dukiyarsa da ya samu a ƙasar Kan’ana zuwa wata ƙasa nesa da ɗan’uwansa Yaƙub.
7 ೭ ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
Mallakarsu ta yi yawa ƙwarai da ba za su iya zauna tare ba; gama ƙasar da suke zaune a ciki ba za tă ishe su su biyu ba saboda dabbobinsu.
8 ೮ ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.
Saboda haka Isuwa (wato, Edom) ya zauna a ƙasar tuddai na Seyir.
9 ೯ ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:
Wannan shi ne zuriyar Isuwa, kakan mutanen Edom, a ƙasar tuddai na Seyir.
10 ೧೦ ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.
Waɗannan su ne sunayen’ya’yan Isuwa maza, Elifaz, ɗan Ada matar Isuwa, da Reyuwel ɗan Basemat matar Isuwa.
11 ೧೧ ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,
’Ya’yan Elifaz maza su ne, Teman, Omar, Zefo, Gatam da Kenaz.
12 ೧೨ ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.
Elifaz ɗan Isuwa kuma yana da ƙwarƙwara mai suna Timna, wadda ta haifa masa Amalek. Waɗannan su ne jikokin Ada matar Isuwa.
13 ೧೩ ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.
’Ya’yan Reyuwel maza su ne, Nahat, Zera, Shamma da Mizza. Waɗannan su ne jikokin Basemat matar Isuwa.
14 ೧೪ ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.
’Ya’yan Oholibama maza’yar Ana wadda take jikanyar Zibeyon, matar Isuwa, waɗanda ta haifa wa Isuwa su ne, Yewush, Yalam da Kora.
15 ೧೫ ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,
Waɗannan su ne manya a cikin zuriyar Isuwa,’Ya’ya Elifaz maza ɗan farin Isuwa, Shugabannin su ne; Teman, Omar, Zefo, Kenaz,
16 ೧೬ ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.
Kora, Gatam da kuma Amalek. Waɗannan ne manya da suka fito daga dangin Elifaz a Edom; su ne jikokin Ada.
17 ೧೭ ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.
’Ya’yan Reyuwel maza, Shugabannin su ne; Nahat, Zera, Shamma da Mizza. Waɗannan su ne manya da suka fito daga dangin Reyuwel a Edom; su ne jikokin Basemat matar Isuwa.
18 ೧೮ ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.
’Ya’yan Oholibama maza matar Isuwa, Shugabannin su ne; Yewush, Yalam da Kora. Waɗannan su ne manya da suka fito daga dangin Oholibama’yar Ana matar Isuwa.
19 ೧೯ ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.
Waɗannan su ne’ya’yan Isuwa maza (wato, Edom), waɗannan ne manyansu.
20 ೨೦ ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
Waɗannan su ne’ya’yan Seyir Bahore maza, waɗanda suke zaune a yankin, Lotan, Shobal, Zibeyon, Ana,
21 ೨೧ ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು.
Dishon, Ezer da Dishan. Waɗannan su ne manyan Horiyawa,’ya’yan Seyir, maza, a ƙasar Edom.
22 ೨೨ ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.
’Ya’yan Lotan maza su ne, Hori da Homam. Timna’yar’uwar Lotan ce.
23 ೨೩ ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.
’Ya’yan Shobal maza su ne, Alwan, Manahat, Ebal, Shefo da Onam.
24 ೨೪ ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.
’Ya’yan Zibeyon maza su ne, Aiya da Ana. Wannan shi ne Ana wanda ya sami maɓulɓulan ruwan zafi a hamada yayinda yake kiwon jakuna na mahaifinsa Zibeyon.
25 ೨೫ ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
’Ya’yan Ana su ne, Dishon da Oholibama’yar Ana.
26 ೨೬ ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್.
’Ya’yan Dishon maza su ne, Hemdan, Eshban, Itran da Keran.
27 ೨೭ ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್.
’Ya’yan Ezer maza su ne, Bilhan, Za’aban da Akan.
28 ೨೮ ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.
’Ya’yan Dishan maza su ne, Uz da Aran.
29 ೨೯ ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ
Waɗannan su ne manyan Horiyawa, Lotan, Shobal, Zibeyon, Ana,
30 ೩೦ ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.
Dishon, Ezer da Dishan. Waɗannan su ne manyan Horiyawa, bisa ga ɓangarorinsu, a ƙasar Seyir.
31 ೩೧ ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:
Waɗannan su ne sarakunan da suka yi mulki a Edom kafin wani sarki mutumin Isra’ila yă yi mulki,
32 ೩೨ ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.
Bela ɗan Beyor ya zama sarkin Edom. Sunan birninsa shi ne Dinhaba.
33 ೩೩ ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.
Sa’ad da Bela ya rasu, Yobab ɗan Zera daga Bozra ya gāje shi.
34 ೩೪ ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.
Sa’ad da Yobab ya rasu, Husham daga ƙasar Temaniyawa ya gāje shi.
35 ೩೫ ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
Sa’ad da Husham ya rasu, Hadad ɗan Bedad, wanda ya ci Midiyan da yaƙi a ƙasar Mowab, ya gāje shi. Sunan birninsa shi ne Awit.
36 ೩೬ ಹದದನು ಸತ್ತ ನಂತರ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.
Sa’ad da Hadad ya rasu, Samla daga Masreka ya gāje shi.
37 ೩೭ ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.
Sa’ad da Samla ya rasu, Sha’ul daga Rehobot na ta kogi ya gāje shi.
38 ೩೮ ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.
Sa’ad da Sha’ul ya rasu, Ba’al-Hanan ɗan Akbor ya gāje shi.
39 ೩೯ ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
Sa’ad da Ba’al-Hanan ɗan Akbor ya rasu, Hadad ya gāje shi. Sunan birninsa shi ne Fau, kuma sunan matarsa Mehetabel ce’yar Matired, jikanyar Me-Zahab.
40 ೪೦ ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,
Waɗannan su ne manya da suka fito daga zuriyar Isuwa, bisa ga danginsu, bisa kuma ga kabilansu da yankunansu. Sunayensu su ne, Timna, Alwa, Yetet.
41 ೪೧ ಒಹೋಲಿಬಾಮ, ಏಲಾ, ಪೀನೋನ್,
Oholibama, Ela, Finon.
42 ೪೨ ಕೆನೆಜ್, ತೇಮಾನ್, ಮಿಪ್ಚಾರ್
Kenaz, Teman, Mibzar.
43 ೪೩ ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.
Magdiyel da Iram. Waɗannan su ne manyan Edom bisa ga mazauninsu cikin ƙasar da suka zauna. Wannan shi ne zuriyar Isuwa, kakan mutanen Edom.