< ಆದಿಕಾಂಡ 36 >

1 ಎದೋಮ್ ಎಂಬ ಏಸಾವನ ವಂಶಾವಳಿ ಇದು:
А оце нащадки Ісава, цебто Едома.
2 ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,
Ісав узяв жінок своїх з дочок ханаанських, — Аду, дочку Елона хіттеянина, та Оголіваму, дочку Ани, дочку Ців'она хівеянина, (questioned)
3 ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.
та Босмат, дочку Ізмаїлову, сестру Невайотову.
4 ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
І породила Ада Ісавові Еліфаза, а Босмат породила Реуїла,
5 ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.
а Оголівама породила Суша, і Ялама, і Кораха. Оце сини Ісавові, що були йому народжені в ханаанській землі.
6 ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.
І взяв Ісав жінок своїх, і синів своїх, і дочок своїх, і всі душі дому свого, і худобу свою, і все стадо своє, і все своє майно, що набув у ханаанській землі, та й пішов до Краю від обличчя Якова, брата свого,
7 ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
бо маєток їх був більший, щоб пробува́ти їм разом, і край їх часового замешкання не міг вмістити їх через їхню худобу.
8 ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.
І осівся Ісав на горі Сеїр, Ісав — він Едом.
9 ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:
А оце нащадки Ісава, батька Едому на горі Сеїр.
10 ೧೦ ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.
Оце ймення синів Ісавових: Еліфаз, син Ади, жінки Ісавової, Реуїл, син Босмати, Ісавової жінки.
11 ೧೧ ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,
А сини Еліфазові були: Теман, Омар, Цефо́, і Ґатам, і Кеназ.
12 ೧೨ ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.
А Тимна була наложниця Еліфаза, Ісавового сина, і породила вона Еліфазові Амали́ка. Оце сини́ Ади, Ісавової жінки.
13 ೧೩ ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.
А оце сини Реуїлові: Нагат і Зера, Шамма й Мізза. Оце сини Босмати, Ісавової жінки.
14 ೧೪ ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.
А оці були сини Оголівами, дочки Ани, дочки Ців'она, Ісавової жінки, — і вродила вона Ісаву Єуша, і Ялама, і Корея.
15 ೧೫ ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,
А оце провідники Ісавових синів. Сини Еліфаза, Ісавового перворідного: провідник Теман, провідник Омар, провідник Цефо, провідник Кеназ,
16 ೧೬ ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.
провідник Корей, провідник Ґатам, провідник Амалик. Оце провідники Еліфаза в краю Едома, оце сини Ади.
17 ೧೭ ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.
А оце сини Реуїла, Ісавового сина: провідник Нагат, провідник Зерах, провідник Шамма, провідник Мізза. Оце провідники Реуїлові в краю едомському, оце сини Босмати, Ісавової жінки.
18 ೧೮ ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.
А оце сини Оголівами, жінки Ісава: провідник Еуш, провідник Ялам, провідник Корей, — оце провідники Оголівами, дочки Ани, Ісавової жінки.
19 ೧೯ ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.
Оце сини Ісава, цебто Едома, і оце їхні провідники.
20 ೨೦ ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
Оце сини Сеїра, хореянина, мешканці цієї землі: Лотан і Шовал, і Ців'он, і Ана,
21 ೨೧ ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು.
і Дішон, і Ецев, і Дішан, — оце провідники хореянина, сини Сеїру, краю едомського.
22 ೨೨ ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.
А сини Лотана були: Хорі й Гемам, а Лотанова сестра — Тимна.
23 ೨೩ ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.
А оце сини Шовалові: Алван і Манахат, і Евал, Шефо, і Онам.
24 ೨೪ ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.
А ото сини Ців'онові: і Айя, і Ана, той Ана, що знайшов був в пустині гарячі джерела, коли пас осли Ців'она, свого батька.
25 ೨೫ ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
А оце діти Ани: Дішон, і Оголівама, дочка Ани.
26 ೨೬ ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್.
А оце сини Дішо́нові: Хемдан, і Ешбан, і Ітран, і Керан.
27 ೨೭ ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್.
Ото сини Ецера: Білган, і Зааван, і Акан.
28 ೨೮ ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.
Оце сини Дішана: Уц і Аран.
29 ೨೯ ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ
Оце провідники хореянина: провідник Лотан, провідник Шовал, провідник Ців'он, провідник Ана,
30 ೩೦ ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.
провідник Дішон, провідник Ецер, провідник Дішан, — оце провідники хореянина за їхніми провідниками в краї Сеїр.
31 ೩೧ ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:
А оце царі, що царювали в краю Едома перед царюва́нням царя в синів Ізраїлевих.
32 ೩೨ ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.
І царював в Едомі Бела, син Беора, а ймення його міста Дінгава.
33 ೩೩ ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.
І вмер Бела, і зацарював замість нього Йовав, син Зераха з Боцри.
34 ೩೪ ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.
І вмер Йовав, і зацарював замість нього Хушам із землі теманіянина.
35 ೩೫ ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
I вмер Хушам, і зацарював замість нього Гадад, син Бедада, що побив мідіян на полі Моава, а ймення його міста Авіт.
36 ೩೬ ಹದದನು ಸತ್ತ ನಂತರ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.
І вмер Гадад, і зацарював замість нього Самла з Машеку.
37 ೩೭ ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.
І вмер Самла, і зацарював замість нього Саул з Реховоту надрічного.
38 ೩೮ ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.
І вмер Саул, і зацарював замість нього Баал-Ханан, син Ахборів.
39 ೩೯ ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
І вмер Баал-Ханан, син Ахборів, і зацарював замість нього Гадад, а ім'я́ його міста Пау, а ім'я його жінки Мегетав'іл, дочка Матреди, дочки Ме-Загава.
40 ೪೦ ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,
А оце імена провідників Ісавових за їхніми родами, за місцями їх, їхніми іменами: провідник Тимна, провідник Алва, провідник Етет,
41 ೪೧ ಒಹೋಲಿಬಾಮ, ಏಲಾ, ಪೀನೋನ್,
провідник Оголівама, провідник Ела, провідник Пінон,
42 ೪೨ ಕೆನೆಜ್, ತೇಮಾನ್, ಮಿಪ್ಚಾರ್
провідник Кеназ, провідник Теман, провідник Мівцар,
43 ೪೩ ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.
провідник Маґдіїл, провідник Ірам. Оце провідники Едома — він же Ісав, батько Едому за їхніми осе́лями в кра́ї їхнього володіння.

< ಆದಿಕಾಂಡ 36 >