< ಆದಿಕಾಂಡ 38 >
1 ೧ ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.
W tym czasie Juda odszedł od swoich braci i wstąpił do [pewnego] mieszkańca Adullam, który miał na imię Chira.
2 ೨ ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು ಅವಳನ್ನು ಮದುವೆ ಮಾಡಿಕೊಂಡನು
I Juda zobaczył tam córkę Kananejczyka, który miał na imię Szua; pojął ją i obcował z nią.
3 ೩ ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು “ಏರ್” ಎಂದು ಹೆಸರಿಟ್ಟನು.
A [ona] poczęła i urodziła syna, i nadał mu imię Er.
4 ೪ ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ “ಓನಾನ್” ಎಂದು ಹೆಸರಿಟ್ಟಳು.
I znów poczęła i urodziła syna, i nadała mu imię Onan.
5 ೫ ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ “ಶೇಲಹ” ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು.
Potem znowu urodziła syna i nadała mu imię Szela. A [Juda] był w Kezib, gdy mu go urodziła.
6 ೬ ಯೆಹೂದನು ತನ್ನ ಚೊಚ್ಚಲು ಮಗನಾದ ಏರನಿಗೆ “ತಾಮಾರ್” ಎಂಬ ಹೆಣ್ಣನ್ನು ತಂದು ಮದುವೆ ಮಾಡಿಸಿದನು.
I Juda wziął dla swojego pierworodnego syna Era żonę imieniem Tamar.
7 ೭ ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.
A Er, pierworodny Judy, był zły w oczach PANA, więc PAN go zabił.
8 ೮ ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.
Wtedy Juda powiedział do Onana: Obcuj z żoną twego brata i ożeń się z nią, i wzbudź twemu bratu potomstwo.
9 ೯ ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.
Lecz Onan wiedział, że to potomstwo nie miało być jego; gdy obcował z żoną swego brata, wyrzucał swoje [nasienie] na ziemię, aby nie wzbudzić potomstwa swemu bratu.
10 ೧೦ ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.
I nie podobało się PANU to, co [Onan] robił, dlatego i jego PAN zabił.
11 ೧೧ ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.
Wtedy Juda powiedział do swojej synowej Tamar: Mieszkaj w domu twego ojca jako wdowa, aż dorośnie mój syn Szela. Powiedział bowiem: Oby on też nie umarł jak jego bracia. I Tamar odeszła, i mieszkała w domu swego ojca.
12 ೧೨ ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.
Po długim czasie umarła córka Szuy, żona Judy. Gdy Juda już pocieszył się, poszedł wraz ze swoim przyjacielem Chirą Adullamitą do Timny, do tych, co strzygli jego owce.
13 ೧೩ ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು
I powiedziano o tym Tamarze: Oto twój teść idzie do Timny, aby strzyc swoje owce.
14 ೧೪ ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.
Zdjęła więc z siebie wdowie szaty, okryła się welonem i tak zasłonięta usiadła na rozstaju drogi, która prowadziła do Timny. Widziała bowiem, że Szela dorósł, a ona nie została mu dana za żonę.
15 ೧೫ ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.
A gdy Juda zobaczył ją, pomyślał, że to nierządnica, bo zakryła swoją twarz.
16 ೧೬ ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು.
Zszedł więc do niej z drogi i powiedział: Proszę, pozwól mi obcować z tobą. Nie wiedział bowiem, że to była jego synowa. I powiedziała: Co mi dasz, abyś mógł ze mną obcować?
17 ೧೭ ಅವನು, “ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ” ಅಂದಾಗ ಆಕೆ, “ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದ್ದಕ್ಕೆ,
I odpowiedział: Poślę ci koźlątko ze stada. A ona rzekła: Dasz mi zastaw, dopóki nie przyślesz?
18 ೧೮ ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.
I powiedział: Cóż mam ci dać w zastaw? A ona odpowiedziała: Twój pierścień, twój sznur i twoją laskę, którą masz w ręce. Dał jej więc i obcował z nią; a ona poczęła z niego.
19 ೧೯ ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.
Potem wstała, odeszła, zdjęła z siebie welon i włożyła wdowie szaty.
20 ೨೦ ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ.
A Juda posłał koźlątko przez swego przyjaciela Adullamitę, aby odebrał zastaw z ręki tej kobiety, ale ten jej nie znalazł.
21 ೨೧ ಅವನು ಅವಳ ಊರಿನವರನ್ನು, “ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು” ಎಂದು ಕೇಳಿದ್ದಕ್ಕೆ ಅವರು, “ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ” ಎಂದರು.
I pytał ludzi w tym miejscu: Gdzie jest ta nierządnica, która [była] na rozstaju tej drogi? Oni odpowiedzieli: Nie było tu [żadnej] nierządnicy.
22 ೨೨ ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು” ಎಂದು ತಿಳಿಸಿದನು.
Wrócił więc do Judy i powiedział: Nie znalazłem jej. I ludzie w tym miejscu powiedzieli: Nie było tu [żadnej] nierządnicy.
23 ೨೩ ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು.
Wtedy Juda powiedział: Niech sobie zatrzyma ten [zastaw], abyśmy nie stali się pośmiewiskiem. Oto posyłałem to koźlątko, a ty jej nie znalazłeś.
24 ೨೪ ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.
Po upływie około trzech miesięcy powiedziano Judzie: Twoja synowa Tamar stała się nierządnicą i oto jest brzemienna z nierządu. Wtedy Juda powiedział: Wyprowadźcie ją i niech będzie spalona.
25 ೨೫ ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು.
A gdy została wyprowadzona, posłała do swego teścia [wiadomość]: Jestem brzemienna z mężczyzny, do którego należą te rzeczy. Powiedziała przy tym: Rozpoznaj, proszę, czyj to pierścień, sznur i laska.
26 ೨೬ ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.
Wtedy Juda rozpoznał [je] i powiedział: Ona jest sprawiedliwsza ode mnie, ponieważ nie dałem jej memu synowi Szeli. I więcej z nią nie obcował.
27 ೨೭ ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು.
Gdy nadszedł czas jej porodu, okazało się, że w jej łonie [są] bliźnięta.
28 ೨೮ ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.
A gdy rodziła, [jedno dziecko] wytknęło rękę, a położna ujęła ją i zawiązała na ręce czerwoną nić, mówiąc: Ten wyszedł pierwszy.
29 ೨೯ ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ಪೆರೆಚ್” ಎಂದು ಹೆಸರಾಯಿತು.
Gdy [on] cofnął swoją rękę, oto wyszedł jego brat i powiedziała: Jak się przedarłeś? Na tobie [niech będzie] rozerwanie. I nadała mu imię Peres.
30 ೩೦ ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ಜೆರಹ” ಎಂದು ಹೆಸರಾಯಿತು.
A potem wyszedł jego brat, na którego ręce była czerwona nić. I nadała mu imię Zerach.