< ಆದಿಕಾಂಡ 39 >

1 ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.
וְיוֹסֵ֖ף הוּרַ֣ד מִצְרָ֑יְמָה וַיִּקְנֵ֡הוּ פּוֹטִיפַר֩ סְרִ֨יס פַּרְעֹ֜ה שַׂ֤ר הַטַּבָּחִים֙ אִ֣ישׁ מִצְרִ֔י מִיַּד֙ הַיִּשְׁמְעֵאלִ֔ים אֲשֶׁ֥ר הוֹרִדֻ֖הוּ שָֽׁמָּה׃
2 ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.
וַיְהִ֤י יְהוָה֙ אֶת־יוֹסֵ֔ף וַיְהִ֖י אִ֣ישׁ מַצְלִ֑יחַ וַיְהִ֕י בְּבֵ֥ית אֲדֹנָ֖יו הַמִּצְרִֽי׃
3 ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.
וַיַּ֣רְא אֲדֹנָ֔יו כִּ֥י יְהוָ֖ה אִתּ֑וֹ וְכֹל֙ אֲשֶׁר־ה֣וּא עֹשֶׂ֔ה יְהוָ֖ה מַצְלִ֥יחַ בְּיָדֽוֹ׃
4 ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.
וַיִּמְצָ֨א יוֹסֵ֥ף חֵ֛ן בְּעֵינָ֖יו וַיְשָׁ֣רֶת אֹת֑וֹ וַיַּפְקִדֵ֙הוּ֙ עַל־בֵּית֔וֹ וְכָל־יֶשׁ־ל֖וֹ נָתַ֥ן בְּיָדֽוֹ׃
5 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.
וַיְהִ֡י מֵאָז֩ הִפְקִ֨יד אֹת֜וֹ בְּבֵית֗וֹ וְעַל֙ כָּל־אֲשֶׁ֣ר יֶשׁ־ל֔וֹ וַיְבָ֧רֶךְ יְהוָ֛ה אֶת־בֵּ֥ית הַמִּצְרִ֖י בִּגְלַ֣ל יוֹסֵ֑ף וַיְהִ֞י בִּרְכַּ֤ת יְהוָה֙ בְּכָל־אֲשֶׁ֣ר יֶשׁ־ל֔וֹ בַּבַּ֖יִת וּבַשָּׂדֶֽה׃
6 ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.
וַיַּעֲזֹ֣ב כָּל־אֲשֶׁר־לוֹ֮ בְּיַד־יוֹסֵף֒ וְלֹא־יָדַ֤ע אִתּוֹ֙ מְא֔וּמָה כִּ֥י אִם־הַלֶּ֖חֶם אֲשֶׁר־ה֣וּא אוֹכֵ֑ל וַיְהִ֣י יוֹסֵ֔ף יְפֵה־תֹ֖אַר וִיפֵ֥ה מַרְאֶֽה׃
7 ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.
וַיְהִ֗י אַחַר֙ הַדְּבָרִ֣ים הָאֵ֔לֶּה וַתִּשָּׂ֧א אֵֽשֶׁת־אֲדֹנָ֛יו אֶת־עֵינֶ֖יהָ אֶל־יוֹסֵ֑ף וַתֹּ֖אמֶר שִׁכְבָ֥ה עִמִּֽי׃
8 ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.
וַיְמָאֵ֓ן ׀ וַיֹּ֙אמֶר֙ אֶל־אֵ֣שֶׁת אֲדֹנָ֔יו הֵ֣ן אֲדֹנִ֔י לֹא־יָדַ֥ע אִתִּ֖י מַה־בַּבָּ֑יִת וְכֹ֥ל אֲשֶׁר־יֶשׁ־ל֖וֹ נָתַ֥ן בְּיָדִֽי׃
9 ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.
אֵינֶ֨נּוּ גָד֜וֹל בַּבַּ֣יִת הַזֶּה֮ מִמֶּנִּי֒ וְלֹֽא־חָשַׂ֤ךְ מִמֶּ֙נִּי֙ מְא֔וּמָה כִּ֥י אִם־אוֹתָ֖ךְ בַּאֲשֶׁ֣ר אַתְּ־אִשְׁתּ֑וֹ וְאֵ֨יךְ אֶֽעֱשֶׂ֜ה הָרָעָ֤ה הַגְּדֹלָה֙ הַזֹּ֔את וְחָטָ֖אתִי לֵֽאלֹהִֽים׃
10 ೧೦ ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.
וַיְהִ֕י כְּדַבְּרָ֥הּ אֶל־יוֹסֵ֖ף י֣וֹם ׀ י֑וֹם וְלֹא־שָׁמַ֥ע אֵלֶ֛יהָ לִשְׁכַּ֥ב אֶצְלָ֖הּ לִהְי֥וֹת עִמָּֽהּ׃
11 ೧೧ ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ.
וַיְהִי֙ כְּהַיּ֣וֹם הַזֶּ֔ה וַיָּבֹ֥א הַבַּ֖יְתָה לַעֲשׂ֣וֹת מְלַאכְתּ֑וֹ וְאֵ֨ין אִ֜ישׁ מֵאַנְשֵׁ֥י הַבַּ֛יִת שָׁ֖ם בַּבָּֽיִת׃
12 ೧೨ ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು.
וַתִּתְפְּשֵׂ֧הוּ בְּבִגְד֛וֹ לֵאמֹ֖ר שִׁכְבָ֣ה עִמִּ֑י וַיַּעֲזֹ֤ב בִּגְדוֹ֙ בְּיָדָ֔הּ וַיָּ֖נָס וַיֵּצֵ֥א הַחֽוּצָה׃
13 ೧೩ ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದದ್ದನ್ನು ಆಕೆಯು ನೋಡಿ,
וַיְהִי֙ כִּרְאוֹתָ֔הּ כִּֽי־עָזַ֥ב בִּגְד֖וֹ בְּיָדָ֑הּ וַיָּ֖נָס הַחֽוּצָה׃
14 ೧೪ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.
וַתִּקְרָ֞א לְאַנְשֵׁ֣י בֵיתָ֗הּ וַתֹּ֤אמֶר לָהֶם֙ לֵאמֹ֔ר רְא֗וּ הֵ֥בִיא לָ֛נוּ אִ֥ישׁ עִבְרִ֖י לְצַ֣חֶק בָּ֑נוּ בָּ֤א אֵלַי֙ לִשְׁכַּ֣ב עִמִּ֔י וָאֶקְרָ֖א בְּק֥וֹל גָּדֽוֹל׃
15 ೧೫ ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದಳು.
וַיְהִ֣י כְשָׁמְע֔וֹ כִּֽי־הֲרִימֹ֥תִי קוֹלִ֖י וָאֶקְרָ֑א וַיַּעֲזֹ֤ב בִּגְדוֹ֙ אֶצְלִ֔י וַיָּ֖נָס וַיֵּצֵ֥א הַחֽוּצָה׃
16 ೧೬ ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು.
וַתַּנַּ֥ח בִּגְד֖וֹ אֶצְלָ֑הּ עַד־בּ֥וֹא אֲדֹנָ֖יו אֶל־בֵּיתֽוֹ׃
17 ೧೭ ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, “ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು.
וַתְּדַבֵּ֣ר אֵלָ֔יו כַּדְּבָרִ֥ים הָאֵ֖לֶּה לֵאמֹ֑ר בָּֽא־אֵלַ֞י הָעֶ֧בֶד הָֽעִבְרִ֛י אֲשֶׁר־הֵבֵ֥אתָ לָּ֖נוּ לְצַ֥חֶק בִּֽי׃
18 ೧೮ ನಾನು ಜೋರಾಗಿ ಕೂಗಿಕೊಂಡಾಗ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದು ಹೇಳಿದಳು.
וַיְהִ֕י כַּהֲרִימִ֥י קוֹלִ֖י וָאֶקְרָ֑א וַיַּעֲזֹ֥ב בִּגְד֛וֹ אֶצְלִ֖י וַיָּ֥נָס הַחֽוּצָה׃
19 ೧೯ ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.
וַיְהִי֩ כִשְׁמֹ֨עַ אֲדֹנָ֜יו אֶת־דִּבְרֵ֣י אִשְׁתּ֗וֹ אֲשֶׁ֨ר דִּבְּרָ֤ה אֵלָיו֙ לֵאמֹ֔ר כַּדְּבָרִ֣ים הָאֵ֔לֶּה עָ֥שָׂהּ לִ֖י עַבְדֶּ֑ךָ וַיִּ֖חַר אַפּֽוֹ׃
20 ೨೦ ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.
וַיִּקַּח֩ אֲדֹנֵ֨י יוֹסֵ֜ף אֹת֗וֹ וַֽיִּתְּנֵ֙הוּ֙ אֶל־בֵּ֣ית הַסֹּ֔הַר מְק֕וֹם אֲשֶׁר־אֲסִירֵ֥י הַמֶּ֖לֶךְ אֲסוּרִ֑ים וַֽיְהִי־שָׁ֖ם בְּבֵ֥ית הַסֹּֽהַר׃
21 ೨೧ ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.
וַיְהִ֤י יְהוָה֙ אֶת־יוֹסֵ֔ף וַיֵּ֥ט אֵלָ֖יו חָ֑סֶד וַיִּתֵּ֣ן חִנּ֔וֹ בְּעֵינֵ֖י שַׂ֥ר בֵּית־הַסֹּֽהַר׃
22 ೨೨ ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.
וַיִּתֵּ֞ן שַׂ֤ר בֵּית־הַסֹּ֙הַר֙ בְּיַד־יוֹסֵ֔ף אֵ֚ת כָּל־הָ֣אֲסִירִ֔ם אֲשֶׁ֖ר בְּבֵ֣ית הַסֹּ֑הַר וְאֵ֨ת כָּל־אֲשֶׁ֤ר עֹשִׂים֙ שָׁ֔ם ה֖וּא הָיָ֥ה עֹשֶֽׂה׃
23 ೨೩ ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.
אֵ֣ין ׀ שַׂ֣ר בֵּית־הַסֹּ֗הַר רֹאֶ֤ה אֶֽת־כָּל־מְא֙וּמָה֙ בְּיָד֔וֹ בַּאֲשֶׁ֥ר יְהוָ֖ה אִתּ֑וֹ וַֽאֲשֶׁר־ה֥וּא עֹשֶׂ֖ה יְהוָ֥ה מַצְלִֽיחַ׃ ס

< ಆದಿಕಾಂಡ 39 >