< ಆದಿಕಾಂಡ 39 >
1 ೧ ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.
Wɔde Yosef kɔɔ Misraim. Misraimni Potifar a na ɔyɛ Misraimhene Farao dabehene a na otua asraafodɔm ano no na ɔtɔɔ Yosef fii Ismaelfo aguadifo no nsam.
2 ೨ ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.
Na Awurade ka Yosef ho nti, nʼabrabɔ sii no yiye. Ɔtenaa ne wura Misraimni no fi.
3 ೩ ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.
Yosef wura no huu sɛ Awurade ka ne ho, na nea na ɔyɛ biara no, Awurade hyiraa so maa no, na
4 ೪ ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.
Yosef nyaa nʼanim adom ma ɔde no yɛɛ ne boafo. Ankyɛ koraa na Potifar de Yosef sii ne fifo so panyin, de nea ɔwɔ nyinaa hyɛɛ ne nsa.
5 ೫ ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.
Bere a Potifar de Yosef sii ne fifo so panyin, de nea ɔwɔ nyinaa hyɛɛ ne nsa no, Awurade hyiraa Misraimni Potifar fie so, esiane Yosef nti. Awurade hyiraa nʼagyapade a ɛwɔ fi ne ne mfuw nyinaa so.
6 ೬ ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.
Enti ɔde nʼagyapade nyinaa hyɛɛ Yosef nsa. Esiane sɛ Potifar de nʼagyapade ne nʼadwumade nyinaa hyɛɛ Yosef nsa nti, wannwene biribiara ho sɛ aduan a obedi nko ara. Na Yosef yɛ aberante a ɔwɔ nnyinaso, na ne ho nso yɛ fɛ yiye.
7 ೭ ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.
Ankyɛ ahe biara na Yosef wura Potifar yere tuu nʼani sii ne so, ka kyerɛɛ Yosef se, “Bra, na wo ne me mmɛda!”
8 ೮ ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.
Nanso Yosef ampene so, ka kyerɛɛ ne wura yere no se, “Esiane sɛ fie ha biribiara hyɛ me nsa nti, me wura nnwen fie ha biribiara ho. Ɔde nʼagyapade nyinaa ahyɛ me nsa.
9 ೯ ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.
Obiara nni tumi nsen me wɔ fie ha. Me wura mfa biribiara nkame me wɔ fie ha sɛ wo nko ara, efisɛ woyɛ ne yere. Onyame mpa ngu sɛ mɛyɛ ade a ɛte saa. Ɛbɛyɛ dɛn na matumi ayɛ amumɔyɛde a ɛte sɛɛ! Ɛbɛyɛ bɔne kɛse atia Onyankopɔn.”
10 ೧೦ ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.
Ɛwɔ mu sɛ da biara na Potifar yere no de saa asɛm yi hiahia Yosef ho de, nanso Yosef antwiw ammɛn no mpo, na akowie sɛ ɔne no bɛda.
11 ೧೧ ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ.
Da koro bi, Yosef kɔɔ fie hɔ sɛ ɔrekɔyɛ nʼadwuma. Oduu hɔ no, na asomfo no mu biara nni hɔ.
12 ೧೨ ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು.
Potifar yere no soo Yosef atade mu kyeree no, ka kyerɛɛ no se, “Bra na wo ne me mmɛda!” Nanso Yosef yii nʼatade no guu ne so, guan fii fie hɔ.
13 ೧೩ ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದದ್ದನ್ನು ಆಕೆಯು ನೋಡಿ,
Potifar yere no huu sɛ Yosef agyaw nʼatade wɔ ne nsam aguan afi fie hɔ no,
14 ೧೪ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.
ɔfrɛɛ ne fifo, de nteɛteɛmu ka kyerɛɛ wɔn se, “Monhwɛ! Me kunu akɔfa Hebrini bi aba fie ha sɛ ommegu yɛn anim ase. Ɔbaa ha sɛ ɔrebɛto me mmonnaa na meteɛteɛɛ mu.
15 ೧೫ ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದಳು.
Ɔtee sɛ mereteɛteɛ mu no, oyii nʼatade guu me so, guan fii fie ha.”
16 ೧೬ ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು.
Potifar yere no de Yosef atade a oyi guu ne so no siei, kosii sɛ ne kunu bae.
17 ೧೭ ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, “ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು.
Ɔbea no bɔɔ ne kunu amanneɛ se, “Hebrini akoa no a wokɔtɔɔ no brɛɛ yɛn no baa me nkyɛn sɛ anka ɔrebɛto me mmonnaa.
18 ೧೮ ನಾನು ಜೋರಾಗಿ ಕೂಗಿಕೊಂಡಾಗ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದು ಹೇಳಿದಳು.
Meteɛteɛ mu no na oguan fii fie ha, gyaw nʼatade.”
19 ೧೯ ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.
Bere a Yosef wura Potifar tee asɛm a ne yere ka kyerɛɛ no se, “Ɔkwan a wʼakoa no de me faa so ni” no, ne bo fuw yiye.
20 ೨೦ ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.
Yosef wura Potifar tee asɛm no no, ɔkyeree Yosef kɔtoo afiase, faako a ɔhene nneduafo gu no. Bere a Yosef da afiase hɔ no,
21 ೨೧ ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.
na Awurade ka ne ho. Awurade yɛɛ no adɔe ma ɛno nti, afiase sohwɛfo panyin no pɛɛ nʼasɛm yiye.
22 ೨೨ ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.
Ɛyɛɛ saa maa afiase sohwɛfo panyin no de Yosef sii nneduafo no nyinaa so panyin, a na biribiara a wɔyɛ wɔ afiase hɔ no hyɛ ne nsa.
23 ೨೩ ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.
Esiane sɛ na Awurade ka Yosef ho no nti, na afiase sohwɛfo panyin no nhaw ne ho nyɛ adwuma. Efisɛ biribiara a Yosef bɛyɛ no, Awurade hyira so ma esi yiye.