< ಆದಿಕಾಂಡ 4 >

1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.
পরে আদম নিজের স্ত্রী হবার সঙ্গে শারীরিক সম্পর্ক করলে তিনি গর্ভবতী হয়ে কয়িনকে প্রসব করে বললেন, “সদাপ্রভুর সাহায্যতে আমি একটা মানুষকে জন্ম দিতে পেরেছি।”
2 ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.
পরে তিনি হেবল নামে তার ভাইকে প্রসব করলেন। হেবল মেষপালক ছিল, ও কয়িন চাষী ছিল।
3 ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
পরে নির্ধারিত দিনের কয়িন উপহাররূপে সদাপ্রভুর উদ্দেশ্যে ভূমির ফল উৎসর্গ করল।
4 ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
আর হেবলও নিজের পালের প্রথমজাত কয়েকটি পশু ও তাদের মেদ উৎসর্গ করল। তখন সদাপ্রভু হেবলকে ও তার উপহার গ্রহণ করলেন;
5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
কিন্তু কয়িনকে ও তার উপহার গ্রহণ করলেন না; এই জন্য কয়িন খুবই রেগে গেল, তার মুখ বিষণ্ণ হল।
6 ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ?
তাতে সদাপ্রভু কয়িনকে বললেন, “তুমি কেন রাগ করেছ? তোমার মুখ কেন বিষণ্ণ হয়েছে?
7 ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
যদি ভালো আচরণ কর, তবে কি গ্রহণ করা হবে না? আর যদি ভালো আচরণ না কর, তবে পাপ দরজায় গুঁড়ি মেরে বসে আছে। তোমার প্রতি তার বাসনা থাকবে কিন্তু তোমার তার উপরে কর্তৃত্ব করা উচিত।”
8 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
আর কয়িন নিজের ভাই হেবলের সঙ্গে কথোপকথন করল; পরে তারা ক্ষেতে গেলে কয়িন নিজের ভাই হেবলের বিরুদ্ধে উঠে তাকে মেরে ফেলল।
9 ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
পরে সদাপ্রভু কয়িনকে বললেন, তোমার ভাই হেবল কোথায়? সে উত্তর করল, “আমি জানি না, আমি কি আমার ভাইয়ের রক্ষক?”
10 ೧೦ ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
১০তিনি বললেন, “তুমি কি করেছ? তোমার ভাইয়ের রক্ত ভূমি থেকে আমার কাছে প্রতিফলের জন্য কাঁদছে।
11 ೧೧ ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.
১১আর এখন, যে ভূমি তোমার হাত থেকে তোমার ভাইয়ের রক্ত গ্রহণ করার জন্য নিজের মুখ খুলেছে, সেই ভূমিতে তুমি শাপগ্রস্ত হলে।
12 ೧೨ ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
১২যখন তুমি ভূমিতে কৃষিকাজ করবে তা নিজের শক্তি দিয়ে তোমার সেবা আর করবে না; তুমি পৃথিবীতে পলাতক ও ভ্রমণকারী হবে।”
13 ೧೩ ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.
১৩তাতে কয়িন সদাপ্রভুকে বলল, “আমার অপরাধের ভার অসহ্য।
14 ೧೪ ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
১৪দেখ, আজ তুমি পৃথিবী থেকে আমাকে তাড়িয়ে দিলে, আর তোমার সামনে থেকে আমি লুকিয়ে থাকব। আমি পৃথিবীতে পলাতক ও ভ্রমণকারী হব, আর আমাকে যে পাবে, সে হত্যা করবে।”
15 ೧೫ ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
১৫তাতে সদাপ্রভু তাকে বললেন, “এই জন্য কয়িনকে যে মারবে, সে সাত গুন প্রতিফল পাবে।” আর সদাপ্রভু কয়িনের জন্য এক চিহ্ন রাখলেন, যদি কেউ তাকে পেলে আক্রমণ করে।
16 ೧೬ ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.
১৬পরে কয়িন সদাপ্রভুর সামনে থেকে চলে গিয়ে এদনের পূর্ব দিকে নোদ দেশে বাস করল।
17 ೧೭ ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
১৭আর কয়িন নিজের স্ত্রীর সঙ্গে শারীরিক সম্পর্ক করলে সে গর্ভবতী হয়ে হনোককে প্রসব করল। আর কয়িন এক নগর তৈরী করে নিজের ছেলের নামানুসারে তার নাম হনোক রাখল।
18 ೧೮ ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.
১৮হনোকের ছেলে ঈরদ, ঈরদের ছেলে মহুয়ায়েল, মহুয়ায়েলের ছেলে মথূশায়েল ও
19 ೧೯ ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.
১৯মথূশায়েলের ছেলে লেমক। লেমক দুই স্ত্রী গ্রহণ করল, একজন স্ত্রীর নাম আদা, অন্যের নাম সিল্লা।
20 ೨೦ ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
২০আদার গর্ভে যাবল জন্মাল, সে তাঁবুনিবাসী পশুপালকদের আদিপুরুষ ছিল। তার ভাইয়ের নাম যুবল;
21 ೨೧ ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
২১সে বীণা ও বংশীধারী সকলের আদিপুরুষ ছিল।
22 ೨೨ ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
২২আর সিল্লার গর্ভে তুবল-কয়িন জন্মাল, সে পিতলের ও লোহার নানা প্রকার অস্ত্র তৈরী করত। তুবল-কয়িনের বোনের নাম নয়মা।
23 ೨೩ ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
২৩আর লেমক নিজের দুই স্ত্রীকে বলল, “আদা, সিল্লা, তোমরা আমার কথা শোন, লেমকের স্ত্রীরা আমার কথা শোন; কারণ আমি আঘাতের পরিশোধে পুরুষকে, প্রহারের পরিশোধে যুবাকে মেরে ফেলেছি।
24 ೨೪ ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
২৪যদি কয়িনের হত্যার প্রতিফল সাত গুন হয়, তবে লেমকের হত্যার প্রতিফল সাতাত্তর গুন হবে।”
25 ೨೫ ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.
২৫আর আদম আবার নিজের স্ত্রীর পরিচয় নিলে তিনি ছেলে প্রসব করলেন ও তার নাম শেথ রাখলেন। কারণ [তিনি বললেন] কয়িনের মাধ্যমে হত হেবলের পরিবর্তে ঈশ্বর আমাকে আর এক ছেলে দিলেন। পরে
26 ೨೬ ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
২৬শেথেরও ছেলে হল, আর তিনি তার নাম ইনোশ রাখলেন। তখন লোকেরা সদাপ্রভুর নামে আরাধনা করতে আরম্ভ করল।

< ಆದಿಕಾಂಡ 4 >