< ಆದಿಕಾಂಡ 40 >

1 ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.
ఆ తరువాత ఐగుప్తు రాజుకు గిన్నె అందించేవాడూ, రొట్టెలు చేసేవాడూ తమ యజమాని పట్ల నేరం చేశారు.
2 ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,
తన ఇద్దరు ఉద్యోగస్థులు, అంటే గిన్నె అందించే వాడి మీదా రొట్టెలు చేసే వాడి మీదా ఫరో కోపగించుకున్నాడు.
3 ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸೆರೆಮನೆಯಾಗಿತ್ತು
వారిని చెరసాలలో ఉంచడానికి రాజు అంగరక్షకుల అధిపతికి అప్పగించాడు. ఆ చెరసాలలోనే యోసేపును కూడా బంధించారు.
4 ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.
ఆ అధిపతి వారందరినీ యోసేపు ఆధీనంలో ఉంచాడు. అతడు వారి బాగోగులు చూసేవాడు. వారు కొన్నిరోజులు బందీలుగా ఉన్న తరువాత
5 ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
వారిద్దరూ, అంటే ఐగుప్తు రాజుకు గిన్నె అందించేవాడు, రొట్టెలు చేసేవాడు ఒకే రాత్రి కలలు కన్నారు. ఒక్కొక్కడు వేరు వేరు భావాలతో కల కన్నారు.
6 ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಬಹು ಚಿಂತೆಯುಳ್ಳವರಾಗಿ ಕಾಣಿಸಿದರು.
ఉదయాన యోసేపు వారి దగ్గరికి వచ్చి చూసినపుడు వారు విచారంగా ఉన్నారు.
7 ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.
అతడు “మీరెందుకు విచారంగా ఉన్నారు?” అని వారిని అడిగాడు.
8 ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
అందుకు వారు “మా ఇద్దరికీ ఒక్కో కల వచ్చింది. వాటి అర్థం చెప్పేవాళ్ళు ఎవరూ లేరు” అన్నారు. యోసేపు వారితో “అర్థాలు తెలియచేయడం దేవుని అధీనమే గదా! దయచేసి నాకు చెప్పండి” అన్నాడు.
9 ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು.
అప్పుడు గిన్నె అందించేవారి నాయకుడు యోసేపుతో “నా కలలో ఒక ద్రాక్షతీగ నా ఎదుట ఉంది.
10 ೧೦ ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು.
౧౦ఆ ద్రాక్షతీగకు మూడు కొమ్మలున్నాయి. దానికి మొగ్గలొచ్చి పూలు పూసి గెలలు పండి ద్రాక్షపళ్ళు వచ్చాయి.
11 ೧೧ ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು” ಎಂದು ಹೇಳಿದನು.
౧౧ఫరో గిన్నె నా చేతిలో ఉంది. నేను ద్రాక్షపళ్ళు తీసుకుని ఫరో గిన్నెలో వాటిని పిండి ఆ గిన్నె ఫరో చేతికి ఇచ్చాను” అని చెప్పాడు.
12 ೧೨ ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.
౧౨అప్పుడు యోసేపు “దాని అర్థం ఇదే. ఆ మూడు కొమ్మలు, మూడు రోజులు.
13 ೧೩ ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
౧౩ఇంక మూడు రోజుల్లో ఫరో నిన్ను హెచ్చించి, నువ్వు అతనికి గిన్నె అందించే నీ ఉద్యోగం నీకు మళ్ళీ ఇప్పిస్తాడు.
14 ೧೪ ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.
౧౪అయితే నీకంతా సరి అయినప్పుడు నన్ను గుర్తు చేసుకుని నామీద దయ చూపించు. ఫరో దగ్గర నా గురించి మాట్లాడి ఈ చెరసాల నుండి నేను బయటికి వచ్చేలా చూడు.
15 ೧೫ ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.
౧౫ఎందుకంటే నన్ను హెబ్రీయుల దేశం నుండి దొంగిలించి తీసుకొచ్చారు. ఈ చెరసాలలో నన్ను వేయడానికి ఇక్కడ కూడా నేనేమీ నేరం చేయలేదు” అన్నాడు.
16 ೧೬ ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.
౧౬రొట్టెలు చేసే వాడు యోసేపు మంచి అర్థం చెప్పడం చూసి అతనితో “నాకూ ఒక కల వచ్చింది. మూడు రొట్టెల బుట్టలు నా తల మీద ఉన్నాయి.
17 ೧೭ ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು.
౧౭పై బుట్టలో ఫరో కోసం అన్ని రకాల పిండివంటలు ఉన్నాయి. పక్షులు వచ్చి నా తల మీద ఉన్న ఆ బుట్టలో నుండి వాటిని తిన్నాయి” అన్నాడు.
18 ೧೮ ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು.
౧౮యోసేపు “దాని అర్థం ఇదే. ఆ మూడు బుట్టలు మూడు రోజులు.
19 ೧೯ ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.
౧౯ఇంక మూడు రోజుల్లో ఫరో నీ తల తీసి చెట్టుకు వేలాడదీస్తాడు. పక్షులు నీ మాంసం తింటాయి” అని జవాబిచ్చాడు.
20 ೨೦ ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.
౨౦మూడవ రోజు ఫరో పుట్టినరోజు. అతడు తన సేవకులందరికీ విందు చేయించాడు. వారందరిలో గిన్నె అందించేవారి నాయకుడిపైనా రొట్టెలు చేసే వారి నాయకుడిపైనా మిగతా సేవకులందరికంటే ధ్యాస పెట్టాడు.
21 ೨೧ ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.
౨౧గిన్నె అందించేవారి నాయకుని ఉద్యోగం అతనికి తిరిగి ఇచ్చాడు, కాబట్టి అతడు ఫరో చేతికి మళ్ళీ గిన్నె అందించాడు.
22 ೨೨ ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.
౨౨యోసేపు చెప్పినట్టుగా రొట్టెలు చేసేవారి నాయకుణ్ణి ఉరి తీయించాడు.
23 ೨೩ ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
౨౩అయితే గిన్నె అందించేవారి నాయకుడు యోసేపుకు చేస్తానన్న సాయం గురించి పట్టించుకోలేదు. అసలు అతని గురించి మరచిపోయాడు.

< ಆದಿಕಾಂಡ 40 >