< ಆದಿಕಾಂಡ 41 >

1 ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
రెండు సంవత్సరాల తరువాత ఫరోకు ఒక కల వచ్చింది. అందులో అతడు నైలు నది దగ్గర నిలబడ్డాడు.
2 ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
పుష్టిగా ఉన్న అందమైన ఏడు ఆవులు నైలు నదిలో నుండి పైకి వచ్చి జమ్ముగడ్డిలో మేస్తున్నాయి.
3 ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.
వాటి తరువాత వికారంగా, బక్కచిక్కిన ఏడు ఆవులు నైలు నదిలో నుండి పైకి వచ్చి ఆ ఆవుల దగ్గర నది ఒడ్డున నిలబడ్డాయి.
4 ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
అప్పుడు అందవిహీనమైనవీ చిక్కిపోయినవీ అయిన ఆవులు అందమైన బలిసిన ఆవులను తినేశాయి. దాంతో ఫరో నిద్రలేచాడు.
5 ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.
అతడు నిద్రపోయి రెండవసారి కల కన్నాడు. అందులో మంచి పుష్టిగల ఏడు కంకులతో ఉన్న కాడ పైకి వచ్చింది.
6 ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
తూర్పుగాలి వల్ల పాడైపోయిన ఏడు తాలు కంకులు వాటి తరువాత మొలిచాయి.
7 ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.
అప్పుడు నిండైన పుష్టిగల ఆ ఏడు కంకులను ఆ తాలుకంకులు మింగివేశాయి. అంతలో ఫరో మేలుకుని అది కల అని గ్రహించాడు.
8 ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.
ఉదయాన్నే అతని మనస్సు కలవరపడింది కాబట్టి అతడు ఐగుప్తు శకునగాళ్ళందరినీ అక్కడి పండితులందరిని పిలిపించి తన కలలను వివరించి వారితో చెప్పాడు గాని ఫరోకు వాటి అర్థం చెప్పే వాడెవడూ లేడు.
9 ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.
అప్పుడు గిన్నె అందించేవారి నాయకుడు “ఈ రోజు నా తప్పు గుర్తుకు వచ్చింది.
10 ೧೦ ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,
౧౦ఫరో తన సేవకుల మీద కోపపడి నన్నూ రొట్టెలు చేసేవారి నాయకుడినీ రాజు అంగరక్షకుల అధిపతి ఇంట్లో కావలిలో ఉంచాడు.
11 ೧೧ ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
౧౧ఒకే రాత్రి నేనూ అతడు కలలు కన్నాము. ఒక్కొక్కడు వేర్వేరు అర్థాలతో కలలు కన్నాము.
12 ೧೨ ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
౧౨అక్కడ రాజ అంగ రక్షకుల అధిపతికి సేవకుడిగా ఉన్న ఒక హెబ్రీ యువకుడు మాతో కూడ ఉన్నాడు. అతనితో మా కలలను మేము వివరించి చెబితే అతడు వాటి అర్థాన్ని మాకు తెలియచేశాడు.
13 ೧೩ ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು.
౧౩అతడు మాకు ఏమి చెప్పాడో దాని ప్రకారమే జరిగింది. నా ఉద్యోగం నాకు మళ్ళీ ఇప్పించి వేరేవాడిని ఉరి తీయించారు” అని ఫరోతో చెప్పాడు.
14 ೧೪ ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
౧౪ఫరో యోసేపును పిలిపించాడు. చెరసాలలో నుండి అతన్ని త్వరగా రప్పించారు. అతడు క్షవరం చేసుకుని బట్టలు మార్చుకుని ఫరో దగ్గరికి వచ్చాడు.
15 ೧೫ ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
౧౫ఫరో యోసేపుతో “నేనొక కల కన్నాను. దాని అర్థం చెప్పేవారు ఎవరూ లేరు. నువ్వు కలను వింటే దాని అర్థాన్ని తెలియచేయగలవని నిన్నుగూర్చి విన్నాను” అన్నాడు.
16 ೧೬ ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.
౧౬యోసేపు “అది నావలన కాదు, దేవుడే ఫరోకు అనుకూలమైన సమాధానం ఇస్తాడు” అని ఫరోతో చెప్పాడు.
17 ೧೭ ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.”
౧౭అందుకు ఫరో “నా కలలో నేను ఏటి ఒడ్డున నిలబడ్డాను.
18 ೧೮ ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
౧౮బలిసిన, అందమైన ఏడు ఆవులు ఏటిలోనుండి పైకివచ్చి జమ్ముగడ్డిలో మేస్తున్నాయి.
19 ೧೯ ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.
౧౯నీరసంగా చాలా వికారంగా చిక్కిపోయిన మరి ఏడు ఆవులు వాటి తరువాత పైకి వచ్చాయి. వీటి అంత వికారమైనవి ఐగుప్తు దేశంలో ఎక్కడా నాకు కనబడలేదు.
20 ೨೦ ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.
౨౦చిక్కిపోయి వికారంగా ఉన్న ఆవులు బలిసిన మొదటి ఏడు ఆవులను తినేశాయి.
21 ೨೧ ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು.
౨౧అవి వాటి కడుపులో పడ్డాయి గాని అవి కడుపులో పడినట్టు కనబడలేదు, మొదట ఉన్నట్లే అవి చూడ్డానికి వికారంగా ఉన్నాయి. అంతలో నేను మేలుకున్నాను.
22 ೨೨ “ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು.
౨౨నా కలలో నేను చూస్తే, పుష్టిగల ఏడు మంచి వెన్నులు ఒక్క కంకికి పుట్టాయి.
23 ೨೩ ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
౨౩తూర్పు గాలిచేత చెడిపోయి, ఎండిన ఏడు పీలవెన్నులు వాటి తరువాత మొలిచాయి.
24 ೨೪ ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.
౨౪ఈ పీలవెన్నులు ఆ మంచి వెన్నులను మింగివేశాయి. ఈ కలను పండితులకు తెలియచేశాను గాని దాని అర్థాన్ని తెలియచేసే వారెవరూ లేరు” అని అతనితో చెప్పాడు.
25 ೨೫ ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.
౨౫అందుకు యోసేపు “ఫరో కనిన కల ఒక్కటే. దేవుడు తాను చేయబోయేది ఫరోకు తెలియచేశాడు. ఆ ఏడు మంచి ఆవులు, ఏడేళ్ళు.
26 ೨೬ ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.
౨౬ఆ ఏడు మంచికంకులు ఏడేళ్ళు.
27 ೨೭ ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
౨౭కల ఒక్కటే. వాటి తరువాత చిక్కిపోయి వికారంగా పైకి వచ్చిన ఏడు ఆవులూ ఏడేళ్ళు. తూర్పు గాలి చేత చెడిపోయిన ఏడు తాలువెన్నులు, ఏడేళ్ళ కరువు.
28 ೨೮ ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.
౨౮నేను ఫరోతో చెప్పే మాట ఇదే. దేవుడు తాను చేయబోయేది ఫరోకు చూపించాడు.
29 ೨೯ ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು.
౨౯ఇదిగో ఐగుప్తు దేశమంతటా చాలా సమృద్ధిగా పంట పండే ఏడేళ్ళు రాబోతున్నాయి.
30 ೩೦ ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
౩౦వాటి తరువాత ఏడేళ్ళ కరువు వస్తుంది. అప్పుడు ఆ పంట సమృద్ధినంతా ఐగుప్తు దేశం మరచిపోతుంది. ఆ కరువు దేశాన్ని నాశనం చేస్తుంది.
31 ೩೧ ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.
౩౧దాని తరువాత వచ్చే కరువుచేత దేశంలో ఆ పంట సమృద్ధి జ్ఞాపకంలో లేకుండా పోతుంది. ఆ కరువు చాలా భారంగా ఉంటుంది.
32 ೩೨ ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
౩౨ఈ పని దేవుడే నిర్ణయించాడు. దీన్ని దేవుడు చాలా త్వరగా జరిగిస్తాడు. అందుకే ఆ కల ఫరోకు రెండుసార్లు వచ్చింది.
33 ೩೩ “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
౩౩కాబట్టి ఫరో వివేకమూ జ్ఞానమూ ఉన్నమనిషిని వెతికి ఐగుప్తు దేశం మీద అతన్ని నియమించాలి.
34 ೩೪ ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.
౩౪ఫరో అలా చేసి ఈ దేశం మీద పర్యవేక్షకులను నియమించి, సమృద్ధిగా పంట పండే ఏడేళ్ళలో ఐగుప్తు దేశమంతటా అయిదో భాగం తీసుకోవాలి.
35 ೩೫ ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
౩౫వారు రాబోయే ఈ మంచి సంవత్సరాల్లో దొరికే ఆహారమంతా సమకూర్చాలి. ఆ ధాన్యాన్ని ఫరో ఆధీనంలో ఉంచి, పట్టణాల్లో భద్రం చేయాలి.
36 ೩೬ ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು.
౩౬కరువు వలన ఈ దేశం నశించి పోకుండా ఆ ధాన్యం ఐగుప్తు దేశంలో రాబోయే ఏడేళ్ళ కరువు కాలంలో సిద్ధంగా ఉంటుంది” అని ఫరోతో చెప్పాడు.
37 ೩೭ ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.
౩౭ఈ సలహా ఫరోకూ అతని పరివారమందరి దృష్టికీ నచ్చింది.
38 ೩೮ ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.
౩౮ఫరో తన పరివారంతో “ఇతనిలాగా దేవుని ఆత్మ ఉన్నవాడు మనకు దొరుకుతాడా?” అన్నాడు.
39 ೩೯ ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.
౩౯ఫరో, యోసేపుతో “దేవుడు ఇదంతా నీకు తెలియచేశాడు కాబట్టి నీలాగా వివేకమూ జ్ఞానమూ ఉన్న వారెవరూ లేరు.
40 ೪೦ ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
౪౦నువ్వు నా భవనంలో అధికారిగా ఉండాలి. నా ప్రజలంతా నీకు లోబడతారు. సింహాసనం విషయంలోనే నేను నీకంటే పైవాడిగా ఉంటాను” అన్నాడు.
41 ೪೧ ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,
౪౧ఫరో “చూడు, ఐగుప్తు దేశమంతటి మీద నేను నిన్ను నియమించాను” అని యోసేపుతో చెప్పాడు.
42 ೪೨ ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
౪౨ఫరో తన చేతికి ఉన్న తన రాజముద్ర ఉంగరాన్ని తీసి యోసేపు చేతికి పెట్టాడు. శ్రేష్ఠమైన బట్టలు అతనికి తొడిగించి, అతని మెడలో బంగారు గొలుసు వేశాడు.
43 ೪೩ ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
౪౩తన రెండవ రథంలో అతన్ని ఎక్కించాడు. కొందరు అతని ముందు నడుస్తూ “నమస్కారం చేయండి” అని కేకలు వేశారు. ఐగుప్తు దేశమంతటి మీదా ఫరో అతన్ని నియమించాడు.
44 ೪೪ ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.
౪౪ఫరో యోసేపుతో “నేను ఫరోని. నీ సెలవు లేకుండా ఐగుప్తు దేశమంతటా ఎవరూ తన చేతిని కానీ కాలిని కానీ ఎత్తకూడదు” అన్నాడు.
45 ೪೫ ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
౪౫ఫరో, యోసేపుకు “జఫనత్ పనేహు” అని పేరు పెట్టాడు. అతనికి ఓను అనే పట్టణ యాజకుడైన పోతీఫెర కూతురు ఆసెనతుతో పెళ్ళిచేశాడు.
46 ೪೬ ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
౪౬యోసేపు ఐగుప్తు రాజైన ఫరో ఎదుటికి వచ్చినప్పుడు ముప్ఫై ఏళ్లవాడు. యోసేపు ఫరో దగ్గరనుండి బయలుదేరి ఐగుప్తు దేశమంతటా తిరిగాడు.
47 ೪೭ ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.
౪౭సమృద్ధిగల ఏడేళ్ళలో భూమి చాలా విరివిగా పండింది.
48 ೪೮ ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.
౪౮ఐగుప్తు దేశంలోని ఏడేళ్ళ ధాన్యమంతా అతడు సమకూర్చి, పట్టణాల్లో దాన్ని నిల్వ చేశాడు. ఏ పట్టణం చుట్టూ ఉన్న పొలాల ధాన్యం ఆ పట్టణంలోనే నిల్వచేశాడు.
49 ೪೯ ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.
౪౯యోసేపు సముద్రపు ఇసుకంత విస్తారంగా ధాన్యాన్ని నిలవ చేశాడు. అది కొలతకు మించిపోయింది కాబట్టి దాన్నిక కొలవడం మానుకున్నారు.
50 ೫೦ ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.
౫౦కరువు కాలం ముందే యోసేపుకు ఇద్దరు కొడుకులు పుట్టారు. ఓను పట్టణ యాజకుడైన పోతీఫెర కూతురు ఆసెనతు వారికి తల్లి.
51 ೫೧ ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.
౫౧అప్పుడు యోసేపు “దేవుడు నా కష్టాన్నంతా మా నాన్న ఇంట్లో వారందరినీ నేను మరచిపోయేలా చేశాడు” అని తన పెద్దకొడుక్కి “మనష్షే” అనే పేరు పెట్టాడు.
52 ೫೨ ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು.
౫౨“నేను బాధ అనుభవించిన దేశంలో దేవుడు నన్ను ఫలవంతం చేశాడు” అని రెండో కొడుక్కి “ఎఫ్రాయిము” అనే పేరు పెట్టాడు.
53 ೫೩ ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ
౫౩ఐగుప్తు దేశంలో సమృద్ధిగా పంట పండిన ఏడేళ్ళు గడిచిపోయాయి.
54 ೫೪ ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
౫౪యోసేపు చెప్పిన ప్రకారం ఏడేళ్ళ కరువు మొదలయింది గాని ఐగుప్తు దేశమంతటా ఆహారముంది.
55 ೫೫ ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
౫౫ఐగుప్తు దేశమంతటా కరువు వచ్చినప్పుడు ఆ దేశప్రజలు ఆహారం కోసం ఫరోకు మొరపెట్టుకున్నారు. అప్పుడు ఫరో “మీరు యోసేపు దగ్గరికి వెళ్ళి అతడు మీతో చెప్పినట్లు చేయండి” అని ఐగుప్తీయులందరితో చెప్పాడు.
56 ೫೬ ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
౫౬ఆ ప్రదేశమంతా కరువు వ్యాపించింది. యోసేపు గిడ్డంగులన్నీ విప్పించి ఐగుప్తీయులకు ధాన్యం అమ్మాడు. ఐగుప్తు దేశంలో ఆ కరువు తీవ్రంగా ఉంది.
57 ೫೭ ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.
౫౭ఆ కరువు లోకమంతా తీవ్రంగా ఉండడం వల్ల లోకమంతా యోసేపు దగ్గర ధాన్యం కొనడానికి ఐగుప్తుకు వచ్చింది.

< ಆದಿಕಾಂಡ 41 >