< ಆದಿಕಾಂಡ 42 >
1 ೧ ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”
Sa’ad da Yaƙub ya sami labari cewa akwai hatsi a Masar, sai ya ce wa’ya’yansa maza, “Don me kuke duban juna kawai?”
2 ೨ “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.
Ya ci gaba, “Na ji cewa akwai hatsi a Masar. Ku gangara can ku sayo mana, domin mu rayu kada mu mutu.”
3 ೩ ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.
Sai goma daga cikin’yan’uwan Yusuf suka gangara don su saya hatsi daga Masar.
4 ೪ ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.
Amma Yaƙub bai aiki Benyamin, ɗan’uwan Yusuf tare da sauran ba, gama yana tsoro kada wani abu yă faru da shi.
5 ೫ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
Sai’ya’yan Yaƙub suka isa Masar tare da sauran mutanen don sayen abinci, gama yunwar ta kai yankin Kan’ana ma.
6 ೬ ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
To, Yusuf ne gwamnar ƙasar wanda yake sayar da hatsi ga dukan mutanenta. Saboda haka sa’ad da’yan’uwan Yusuf suka isa, sai suka rusuna masa har ƙasa da fuskokinsu.
7 ೭ ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.
Nan da nan da Yusuf ya ga’yan’uwansa, sai ya gane su, amma ya yi kamar baƙo, ya kuma yi musu magana da tsawa. Ya tambaya, “Daga ina kuka fito?” Suka amsa, “Daga ƙasar Kan’ana, don mu saya abinci.”
8 ೮ ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.
Ko da yake Yusuf ya gane’yan’uwansa, su ba su gane shi ba.
9 ೯ ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.
Sa’an nan ya tuna da mafarkansa game da su, ya kuma ce musu, “Ku’yan leƙen asiri ne! Kun zo don ku leƙi asirin ƙasar ku ga inda ba ta da tsaro.”
10 ೧೦ ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.
Suka amsa suka ce, “A’a, ranka yă daɗe, bayinka sun zo don saya abinci ne.
11 ೧೧ ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.
Mu duka’ya’yan mutum ɗaya maza ne. Bayinka mutane ne masu gaskiya, ba’yan leƙen asiri ba ne.”
12 ೧೨ ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.
Ya ce musu “Sam! Kun zo ne ku ga inda ƙasarmu babu tsaro.”
13 ೧೩ ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.
Amma suka amsa suka ce, “Bayinka dā su goma sha biyu ne,’yan’uwa,’ya’yan mutum guda maza, wanda yake zama a ƙasar Kan’ana. Ƙaraminmu yanzu yana tare da mahaifinmu, ɗayan kuma ya rasu.”
14 ೧೪ ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ.
Yusuf ya ce musu, “Daidai ne yadda na faɗa muku. Ku’yan leƙen asiri ne!
15 ೧೫ ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.
Ga kuwa yadda za a gwada ku. Muddin Fir’auna yana a raye, ba za ku bar wannan wuri ba sai ƙaramin ɗan’uwanku ya zo nan.
16 ೧೬ ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.
Ku aiki ɗaya daga cikinku yă kawo ɗan’uwanku; za a sa sauranku a kurkuku, saboda a gwada maganarku a ga ko gaskiya ce kuke faɗi. In ba haka ba, to, da ran Fir’auna, ku’yan leƙen asiri ne!”
17 ೧೭ ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.
Ya kuwa sa su duka a kurkuku na kwana uku.
18 ೧೮ ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
A rana ta uku, Yusuf ya ce musu, “Ku yi wannan za ku kuwa rayu, gama ina tsoron Allah.
19 ೧೯ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.
In ku mutane masu gaskiya ne, ku bar ɗaya daga cikin’yan’uwanku yă zauna a kurkuku, yayinda sauranku su tafi, su kai hatsi don gidajenku da suke yunwa.
20 ೨೦ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.
Amma dole ku kawo ƙaramin ɗan’uwanku gare ni, saboda a tabbatar da maganarku har ba za ku mutu ba.” Suka kuwa yi haka.
21 ೨೧ ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
Sai suka ce wa juna, “Tabbatacce ana hukunta mu ne saboda ɗan’uwanmu. Mun ga yadda ya yi wahala sa’ad da ya roƙe mu saboda ransa, amma ba mu saurare shi ba, shi ya sa wannan wahala ta zo mana.”
22 ೨೨ ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.
Ruben ya amsa, “Ban faɗa muku cewa kada ku ɗauki alhakin yaron nan ba, sai kuka ƙi ji, to, yau ga alhakin jininsa muke biya.”
23 ೨೩ ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.
Ba su san cewa Yusuf yana jin su ba, da yake yana amfani da mai fassara ne.
24 ೨೪ ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.
Sai ya juya daga gare su ya yi kuka, sa’an nan ya dawo ya yi musu magana kuma. Ya sa aka ɗauke Simeyon daga gare su, aka daure shi a idanunsu.
25 ೨೫ ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.
Yusuf ya yi umarni a cika buhunansu da hatsi, a kuma sa azurfan kowane mutum a cikin buhunsa, a kuma ba su kalaci don tafiyarsu. Bayan aka yi musu wannan,
26 ೨೬ ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.
suka jibga hatsinsu a kan jakuna, sai suka kama hanya.
27 ೨೭ ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
A wurin da suka tsaya don su kwana, ɗaya daga cikinsu ya buɗe buhunsa don yă ciyar da jakinsa, sai ya ga azurfansa a bakin buhunsa.
28 ೨೮ ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.
Sai ya ce wa’yan’uwansa, “An mayar mini da azurfata. Ga shi a cikin buhuna.” Zuciyarsu ta karai, suka dubi juna suna rawan jiki, suka ce, “Mene ne wannan da Allah ya yi mana?”
29 ೨೯ ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.
Sa’ad da suka zo wurin mahaifinsu Yaƙub a ƙasar Kan’ana, suka faɗa masa dukan abin da ya faru da su. Suka ce,
30 ೩೦ ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.
“Mutumin da yake shugaba a ƙasar ya yi mana matsananciyar magana, ya kuma ɗauke mu tamƙar’yan leƙen asirin ƙasa.
31 ೩೧ ನಾವು ಅವನಿಗೆ, “ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ.
Amma muka ce masa, ‘Mu masu gaskiya ne; mu ba’yan leƙen asiri ba ne.
32 ೩೨ ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.
Dā mu’yan’uwa ne goma sha biyu,’ya’yan mahaifi guda maza. Ɗayanmu ya rasu, kuma ƙaramin yanzu yana tare da mahaifinmu a Kan’ana.’
33 ೩೩ ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
“Sai mutumin wanda yake shugaba a kan ƙasar ya ce mana, ‘Ga yadda zan san ko ku mutane masu gaskiya ne. Ku bar ɗaya daga cikin’yan’uwanku a nan tare da ni, ku ɗauki abinci domin gidajenku masu yunwa, ku tafi.
34 ೩೪ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.
Amma ku kawo mini ƙaramin ɗan’uwanku domin in san cewa ku ba’yan leƙen asiri ba ne, amma mutane ne masu gaskiya. Sa’an nan zan mayar muku da ɗan’uwanku, ku kuma iya yin sana’a a ƙasar.’”
35 ೩೫ ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
Yayinda suke juyewa hatsi daga buhunansu, sai ga ƙunshin azurfan kowane mutum a buhunsa! Sa’ad da su da mahaifinsu suka ga ƙunshe-ƙunshen kuɗi, suka firgita.
36 ೩೬ ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.
Yaƙub mahaifinsu, ya ce musu, “Kun sa ni rashin’ya’yana. Yusuf ya rasu, Simeyon kuma ba ya nan, yanzu kuma kuna so ku ɗauki Benyamin. Kome yana gāba da ni!”
37 ೩೭ ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.
Sai Ruben ya ce wa mahaifinsa, “Ka kashe dukan’ya’yana maza, in ban dawo da shi gare ka ba. Ka sa shi ga kulawata, zan kuwa dawo da shi.”
38 ೩೮ ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. (Sheol )
Amma Yaƙub ya ce, “Ɗana ba zai gangara zuwa can tare da ku ba, ɗan’uwansa ya rasu, shi ne kaɗai ya rage. In wani abu ya faru da shi a tafiyar da za ku yi, za ku sa furfurata ta gangara zuwa kabari cikin baƙin ciki.” (Sheol )