< ಆದಿಕಾಂಡ 44 >
1 ೧ ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.
Binilin ni Jose ti mangay-aywan iti balayna, a kunana, “Kargaam dagiti sako dagiti lallaki iti taraon, segun iti kabaelanda nga awiten, ken ikabilmo ti kuarta ti tunggal maysa a lalaki iti ngarab dagiti sakoda.
2 ೨ ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು.
Ikabilmo ti kopak, ti pirak a kopa, iti ngarab ti sako ti inaudi, ken kasta met ti kuartana a bayad ti bukel.” Inaramid ngarud ti mangay-aywan ti imbaga ni Jose.
3 ೩ ಅವರೆಲ್ಲರೂ ಬೆಳಿಗ್ಗೆ ಹೊತ್ತು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು.
Lumawlawagen iti bigat, ket napalubosan a pumanaw dagiti lallaki, isuda ken dagiti asnoda.
4 ೪ ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?
Idi nakaruardan iti siudad ngem saanda pay a nakaadayo, imbaga ni Jose iti mangay-aywan, “Tumakderka, kamatem dagiti lallaki, ket no makamatam ida, ibagam kadakuada, “Apay a sinubadanyo iti dakes ti naimbag?
5 ೫ ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು.
Apay a tinakawyo ti kopa a pagin-inuman ti apok, nga ar-aramatenna metlaeng nga agbuyon? Nakaaramidkayo iti dakes, gapu iti daytoy a banag a naaramidanyo.”
6 ೬ ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ, ಅವರಿಗೆ ಈ ಮಾತುಗಳನ್ನು ಹೇಳಿದನು.
Nakamatan ida ti mangay-aywan ket insaona dagitoy a sasao kadakuada.
7 ೭ ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.
Kinunada kenkuana, “Apay ta agsasao ti apok iti nalabes a sasao a kas kadagitoy? Adayo nga aramiden dagiti adipenmo daytoy a banag.
8 ೮ ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
Kitaem, ti kuarta a nasarakanmi kadagiti ngarab ti saksakomi, inyegmi manen kadakayo manipud iti daga ti Canaan. Kasano ngarud nga agtakawkami ti pirak ken balitok iti balay ni amom?
9 ೯ ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು.
No siasino kadagiti adipenmo iti pakasarakanna, uray matay isuna, ken dakami met ket agbalin a tagabu iti apok.”
10 ೧೦ ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ,
Imbaga ti mangay-aywan, “Ita ngarud, mapasamak koma a kas kadagiti imbagam. No siasino iti pakasarakan ti kopa, agbalin isuna a tagabuk, ket dakayo a dadduma, saankayo a mairaman.”
11 ೧೧ ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಅವುಗಳನ್ನು ಬಿಚ್ಚಿದರು.
Kalpasanna, pinartakan ti tunggal maysa nga imbaba dagiti sakoda, ket linukatan ti tunggal maysa dagiti sakoda.
12 ೧೨ ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.
Nagbiruk ti mangay-aywan. Rinuggianna iti kalakayan ket lineppasna iti kaubingan, ket nasarakanna ti kopa iti sako ni Benjamin.
13 ೧೩ ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು.
Rinay-abda dagiti kawesda. Nagsakay ti tunggal lalaki iti asnona ket nagsublida iti siudad.
14 ೧೪ ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.
Immay ni Juda ken dagiti kakabsatna iti balay ni Jose, adda pay laeng isuna sadiay, ket nagpaklebda iti sangoananna.
15 ೧೫ ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು,
Kinuna ni Jose kadakuada, “Ania daytoy a naaramidyo? Saanyo kadi nga ammo nga iti lalaki a kas kaniak ket agbuybuyon?”
16 ೧೬ ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.
Kinuna ni Juda, “Ania iti maibagami kenka apo? Ania iti isaomi? Wenno kasanomi nga ikalintegan dagiti bagbagimi? Naduktalan ti Dios ti basol dagiti adipenmo. Kitaenyo, dakami ket tagabum apo, dakami amin agraman ti nakasarakan iti kopa.”
17 ೧೭ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.
Kinuna ni Jose, “Adayo a maaramidko ti kasta. Ti laeng lalaki a nakasarakan ti kopa ti agbalin a tagabuk, ngem dakayo a dadduma, sumang-atkayo a sitatalna iti ayan ti amayo.”
18 ೧೮ ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.
Ket immasideg ni Juda kenkuana ket kinunana, “Apo, pangngaasim, bay-am koma nga agsao daytoy adipenmo ket denggem koma, ken saanka koma a makaunget iti adipenmo, ta sika ket kas iti Faraon.
19 ೧೯ ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು,
Nagsaludsod ti apok kadagiti adipenna, kunana, 'Adda kadi amayo wenno kabsatyo a lalaki?'
20 ೨೦ ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.
Ket kinunami kenka apo, “Addaan pay iti amami, lakayen isuna, ken adda maysa a putotna iti kinalakayna, maysa nga ubing. Ket natayen ti kabsatna a lalaki, ken is-isuna laengen iti nabati nga anak ti inana, ket ay-ayaten unay isuna iti amana.'
21 ೨೧ “ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು,
Ket imbagam kadagiti adipenmo, 'Iyegyo isuna kaniak tapno makitak isuna.'
22 ೨೨ ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು.
Ket kinunami kenka apo, 'Saan a mabalin a panawan ti ubing ti amana. Ta no panawanna ti amana, matay ti amana.'
23 ೨೩ ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ.
Ket kinunam kadagiti adipenmo, 'Malaksid a kaduayo a sumalog ti kabsatyo a lalaki, saanyonto a makita manen ti rupak.'
24 ೨೪ ನಾವು ನಿಮ್ಮ ಸೇವಕನಾದ ನಮ್ಮ ತಂದೆಯ ಬಳಿಗೆ ಹೋಗಿ ಸ್ವಾಮಿಯ ಮಾತುಗಳನ್ನು ತಿಳಿಸಿದೆವು.
Ket napasamak nga idi napankami iti adipenmo nga amak, imbagami kenkuana ti insaom apo.
25 ೨೫ “ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ,
Ket kinuna ti amami, 'Mapankayo manen gumatang iti taraontayo.'
26 ೨೬ ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು.
Ket kinunami, 'Saankami a makapan. Mapankami no kaduami ti inaudi a kabsatmi, ta saankami a mabalin a sumango iti lalaki malaksid no kaduami ti inaudi a kabsatmi.'
27 ೨೭ ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ.
Kinuna kadakami ti adipenmo nga amak, 'Ammoyo met nga inikkannak laeng iti dua nga annak a lallaki ti asawak.
28 ೨೮ ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.
Ket napukaw ti maysa kaniak ket kinunak, “Sigurado a narangkarangkayen isuna, ket saankon a nakita pay isuna manipud idi.”
29 ೨೯ ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. (Sheol )
Ket no alaenyo pay daytoy maysa kaniak ket adda iti saan a nasayaat a mapasamak kenkuana, ipandakto, siak a purawen ti buokna, iti sheol gapu iti ladingit. (Sheol )
30 ೩೦ “ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ,
Ita, ngarud, no mapanak iti adipenmo nga amak, ket saanmi a kadua ti barito, agsipud ta ti biagna ket naisinggalut iti biag ti ubing,
31 ೩೧ ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು. (Sheol )
mapasamakto nga inton makitana a saanmi a kadua ti ubing, ket matayto isuna. Ket dakaminto nga adipenmo ti pakaigapuan iti panagladingitna a mangipan kenkuana iti sheol.' (Sheol )
32 ೩೨ ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ.
Ta nagkari daytoy adipenmo iti amami maipapan iti ubing, a kinunana, 'No saanko a maisubli isuna kenka, uray siakton ti mangawit iti pammabasol ti amak iti agnanayon.'
33 ೩೩ “ಆದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Isu nga ita, pangngaasim ta ipalubosmo koma a daytoy nga adipenmo ti mabati a kas tagabu kenka apo, a saan ket a ti ubing, ket ipalubosmo koma a sumang-at ti ubing a kaduana dagiti kakabsatna a lallaki.
34 ೩೪ ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು.
Ta ania ngay ti rupak a mapan iti amak no saanko a kadua ti ubing? Mabutengak a makita ti dakes a mabalin a mapasamak iti amak.”