< ಆದಿಕಾಂಡ 45 >
1 ೧ ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
A LAILA aole e hiki ia Iosepa ke uumi iho i ke aloha iloko ona imua o lakou a pau, o ka poe i ku pu mai la me ia: a hea aku la ia, E hele aku na kanaka a pau iwaho, mai o'u aku nei. Aole i noho mai kekahi kanaka me ia, i ka manawa a Iosepa i hoike ai ia ia iho i kona poe hoahanau.
2 ೨ ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.
Hooho ae la ia i kona leo me ka uwe nui ana: a lohe ae la na kanaka o Aigupita a lohe pu no ko ka hale o Parao.
3 ೩ ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.
Olelo aku la o Iosepa i kona poe hoahanau, Owau no o Iosepa; ke ola la no anei ko'u makuakane? Aole i hiki ke ekemu iki mai kona poe hoahanau ia ia: no ka mea, makau nui iho lakou imua ona.
4 ೪ ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.
A olelo aku la o Iosepa i kona poe hoahanau, E neenee mai oukou io'u nei. A neenee mai la lakou. Olelo aku la ia, Owau no o Iosepa, ko oukou kaikaina a oukou i kuai ai iloko o Aigupita.
5 ೫ ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.
Eia hoi, mai hookaumaha oukou, aole hoi e huhu oukou ia oukou iho i ka oukou kuai ana ia'u ia nei. No ka mea, na ke Akua au i hoouna mai mamua o oukou e hoola aku.
6 ೬ ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
No ka mea, ua wi ae nei ka aina i keia mau makahiki elua; a elima hoi makahiki e koe, aole e mahi, aole hoi e ohi mai.
7 ೭ ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.
A ua hoouna mai ke Akua ia'u mamua o oukou, e hookoe aku ia oukou ma ka honua, a e hoola ia oukou i ke ola nui.
8 ೮ “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.
Aia hoi, aole na oukou i hoouna mai au ia nei, na ke Akua no, a ua hoolilo ae ia ia'u i makuakane no Parao, a i haku no kona hale a pau, a i kiaaina no Aigupita a pau.
9 ೯ ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
E wikiwiki oukou, e hoi aku i ko'u makuakane, a e i aku ia ia, Penei i olelo mai ai kau keiki o Iosepa, Ua hoolilo mai ke Akua ia'u, i haku no ka aina o Aigupita a pau; e hele mai oe ilalo io'u nei, mai hookaulua aku oe.
10 ೧೦ ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.
A e noho oe ma ka aina o Gosena, a e kokoke mai oe me au, o oe, a me kau poe keiki, a me kau poe moopuna, a o kau poe hipa a me kau poe holoholona a me kou mea a pau loa.
11 ೧೧ ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.
Ilaila au e malama'i ia oe: no ka mea, elima makahiki wi a koe; o ilihune oe, a me ko ka hale ou, a me kau mau mea a pau.
12 ೧೨ “ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
Aia hoi, ua ike ko oukou mau maka, a me ka maka o ko'u kaikaina, o Beniamina, o ko'u waha no ka i olelo aku ia oukou.
13 ೧೩ ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ,
A e hai aku oukou i ko'u makuakane i kuu hanohano a pau ma Aigupita nei, a i na mea a pau a oukou i ike ai: a e wikiwiki oukou e lawe mai i ko'u makuakane ilalo.
14 ೧೪ ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
Kau iho la ia ma ka a-i o kona kaikaina, o Beniamina, a uwe iho la; a uwe iho la hoi o Beniamina ma kona a-i.
15 ೧೫ ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.
Honi aku la o Iosepa i kona poe hoahanau a pau, a uwe iho la iluna o lakou. A mahope iho o ia mea, kamailio pu kona poe hoahanau me ia.
16 ೧೬ ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.
Lohea iho la keia mea ma ka hale o Parao, oleloia iho la, Ua hiki mai na hoahanau o Iosepa. Ua pono hoi ia i na maka o Parao, a i na maka o kana poe kauwa.
17 ೧೭ ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,
Olelo mai la o Parao ia Iosepa, E i aku oe i kou poe hoahanau, E hana peneia, e kau i ko oukou mea ma na hoki a hoi aku a hiki i ka aina o Kanaana.
18 ೧೮ ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.
E kii i ko oukou makuakane, a me na mea o ko oukou hale, a e hele mai io'u nei, a na'u no e haawi aku na oukou i ka maikai o ka aina o Aigupita, a e ai hoi oukou i ka momona o ka aina.
19 ೧೯ ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
Ua kauohaia oe, e hana hoi i keia, E lawe i mau kaa no oukou, mai ka aina o Aigupita aku, no ka oukou kamalii a no ka oukou wahine, a e kii i ko oukou makuakane, a e hele mai.
20 ೨೦ ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.
Mai aua ko oukou mau maka ma ko oukou mea a pau; no ka mea, no oukou ka maikai o ka aina a pau ma Aigupita.
21 ೨೧ ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
A hana iho la na keiki a Iseraela pela; a haawi aku la o Iosepa ia lakou i mau kaa e like me ka olelo a Parao, a haawi no hoi i o na lakou ma ke ala.
22 ೨೨ ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.
Haawi aku la hoi ia i kapa komo no lakou a pau; a ia Beniamina, haawi aku la oia ia ia, i ekolu haneri moni, a me na kapa komo elima.
23 ೨೩ ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.
A hoouna aku la ia no kona makuakane, he umi na hoki e lawe ana i na mea maikai o Aigupita, a he umi na hoki wahine, e lawe ana i ka palaoa a me ka ai i o na kona makuakane ma ke alanui.
24 ೨೪ ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.
Pela hoi i hoouna aku ai oia i kona poe hoahanau, a hoi aku la lakou. Olelo aku ia ia lakou, Mai paio oukou ma ke alanui.
25 ೨೫ ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು.
A hoi aku la lakou, mai waho mai o Aigupita, a hiki aku la i ka aina o Kanaana, ia Iakoba, i ko lakou makuakane.
26 ೨೬ ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
A hai aku la lakou ia ia, i aku la, E, ke ola la no o Iosepa, oia ke kiaaina o ka aina o Aigupita a pau. A maule iho la ko Iakoba naau, no ka mea, aole kela i manaoio i ka.
27 ೨೭ ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
Alaila, hai aku la lakou ia ia i ka olelo a pau a Iosepa i olelo mai ai ia lakou. A ike aku la ia i na kaa a Iosepa i hoouna mai ai e lawe ia ia, pohala iho la ka naau o ko lakou makuakane.
28 ೨೮ ಆಗ ಇಸ್ರಾಯೇಲನು, “ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು” ಎಂದನು.
A olelo aku la Iseraela, Ua nui ia, na ola o Iosepa kuu keiki; e hele aku au e ike ia ia mamua o kuu make ana.