< ಆದಿಕಾಂಡ 46 >
1 ೧ ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.
১পরে ইস্রায়েল নিজের সর্বস্বের সঙ্গে যাত্রা করে বের-শেবাতে আসলেন এবং নিজের বাবা ইসহাকের ঈশ্বরের উদ্দেশ্যে বলিদান করলেন।
2 ೨ ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.
২পরে ঈশ্বর রাতে ইস্রায়েলকে দর্শন দিয়ে বললেন, “হে যাকোব, হে যাকোব।” তিনি উত্তর করলেন, “দেখ, এই আমি।”
3 ೩ ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.
৩তখন তিনি বললেন, “আমি ঈশ্বর, তোমার বাবার ঈশ্বর; তুমি মিশরে যেতে ভয় কোরো না, কারণ আমি সেই জায়গায় তোমাকে বড় জাতি করব।”
4 ೪ ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು.
৪আমিই তোমার সঙ্গে মিশরে যাব এবং আমিই সেখান থেকে তোমাকে ফিরিয়েও আনব, আর যোষেফ তোমার চোখে হাত দেবে।
5 ೫ ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.
৫পরে যাকোব বের-শেবা থেকে যাত্রা করলেন। ইস্রায়েলের ছেলেরা নিজেদের বাবা যাকোবকে এবং নিজের নিজের ছেলেমেয়ে ও স্ত্রীদেরকে সেই সব মালবাহী গাড়িতে করে নিয়ে গেলেন, যা ফরৌণ তাদের বহনের জন্য পাঠিয়েছিলেন।
6 ೬ ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು.
৬পরে তাঁরা, যাকোব ও তাঁর সমস্ত বংশ, নিজেদের পশুরা ও কনান দেশে উপার্জিত সব সম্পত্তি নিয়ে মিশর দেশে পৌঁছালেন।
7 ೭ ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.
৭এই ভাবে যাকোব নিজের ছেলে নাতি, মেয়ে নাতনি প্রভৃতি সমস্ত বংশকে সঙ্গে করে মিশরে নিয়ে গেলেন।
8 ೮ ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.
৮ইস্রায়েলীয়রা, যাকোব ও তাঁর ছেলেমেয়েরা, যাঁরা মিশরে গেলেন, তাঁদের নাম। যাকোবের বড় ছেলে রুবেণ।
9 ೯ ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ.
৯রুবেণের ছেলে হনোক, পললু, হিষ্রোণ ও কর্মি।
10 ೧೦ ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.
১০শিমিয়োনের ছেলে যিমূয়েল, যামীন, ওহদ, যাখীন, সোহর ও তার কনানীয়া স্ত্রীজাত ছেলে শৌল।
11 ೧೧ ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.
১১লেবির ছেলে গের্শোন, কহাৎ ও মরারি।
12 ೧೨ ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.
১২যিহূদার ছেলে এর, ওনন, শেলা, পেরস ও সেরহ। কিন্তু এর ও ওনন কনান দেশে মারা গিয়েছিল এবং পেরসের ছেলে হিষ্রোণ ও হামূল।
13 ೧೩ ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಶಿಮ್ರೋನ್.
১৩ইষাখরের ছেলে তোলয়, পূয়, যোব ও শিম্রোণ।
14 ೧೪ ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್
১৪আর সবূলূনের ছেলে সেরদ, এলোন ও যহলেল।
15 ೧೫ ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.
১৫তারা লেয়ার সন্তান; তিনি পদ্দন-অরামে যাকোবের জন্য এদেরকে ও তার মেয়ে দীণাকে প্রসব করেন। যাকোবের এই ছেলে মেয়েরা সবশুদ্ধ তেত্রিশ জন।
16 ೧೬ ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;
১৬আর গাদের ছেলে সিফিয়োন, হগি, শুনী, ইষবোন, এরি, অরোদী ও অরেলী।
17 ೧೭ ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ, ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್, ಮಲ್ಕೀಯೇಲ್.
১৭আশেরের ছেলে যিম্না, যিশবা, যিশবি, বরিয় ও তাদের বোন সেরহ। বরিয়ের ছেলে হেবর ও মল্কীয়েল।
18 ೧೮ ಇವರೆಲ್ಲರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ.
১৮এরা সেই সিল্পার সন্তান, যাকে লাবন নিজের মেয়ে লেয়াকে দিয়েছিলেন; সে যাকোবের জন্য এদেরকে প্রসব করেছিলেন। এরা ষোল জন
19 ೧೯ ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್, ಬೆನ್ಯಾಮೀನ್.
১৯আর যাকোবের স্ত্রী রাহেলের ছেলে যোষেফ ও বিন্যামীন।
20 ೨೦ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.
২০যোষেফের ছেলে মনঃশি ও ইফ্রয়িম মিশর দেশে জন্মেছিল; ওন নগরের পোটীফেরঃ যাজকের মেয়ে আসনৎ তাঁর জন্য তাদেরকে প্রসব করেছিলেন।
21 ೨೧ ಬೆನ್ಯಾಮೀನನ ಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್, ಆರ್ದ್.
২১বিন্যামীনের ছেলে বেলা, বেখর, অসবেল, গেরা, নামন, এহী, রোশ, মুপপীম, হুপপীম ও অর্দ।
22 ೨೨ ಈ ಹದಿನಾಲ್ಕು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು.
২২এই চৌদ্দ জন যাকোবের থেকে জন্মানো রাহেলের ছেলে।
24 ೨೪ ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಚೆರ್, ಶಿಲ್ಲೇಮ್.
২৪নপ্তালির ছেলে যহসিয়েল, গূনি, যেৎসর ও শিল্লেম।
25 ೨೫ ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.
২৫এরা সেই বিলহার ছেলে, যাকে লাবন নিজের মেয়ে রাহেলকে দিয়েছিলেন। সে যাকোবের জন্য এদেরকে প্রসব করেছিল; এরা সবশুদ্ধ সাত জন।
26 ೨೬ ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.
২৬যাকোবের দেহ থেকে সৃষ্টি যে লোকেরা তাঁর সঙ্গে মিশরে উপস্থিত হল, যাকোবের ছেলের স্ত্রীরা ছাড়া তারা সবশুদ্ধ ছেষট্টি জন।
27 ೨೭ ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.
২৭মিশরে যোষেফের যে ছেলেরা জন্মেছিল, তারা দুই জন। যাকোবের আত্মীয়েরা, যারা মিশরে গেল, তারা সবশুদ্ধ সত্তর জন।
28 ೨೮ ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,
২৮পরে আগে আগে গোশনের পথ দেখবার জন্যে যাকোব নিজের আগে যিহূদাকে যোষেফের কাছে পাঠালেন; আর তাঁরা গোশন প্রদেশে পৌঁছালেন।
29 ೨೯ ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.
২৯তখন যোষেফ নিজের রথ সাজিয়ে গোশনে তাঁর বাবা ইস্রায়েলের সঙ্গে দেখা করতে গেলেন; আর তাকে দেখা দিয়ে তাঁর গলা ধরে অনেকক্ষণ কাঁদলেন।
30 ೩೦ ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು.
৩০তখন ইস্রায়েল যোষেফকে বললেন, “এখন স্বচ্ছন্দে মরব, কারণ তোমার মুখ দেখতে পেলাম, তুমি এখনও জীবিত আছ।”
31 ೩೧ ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;
৩১পরে যোষেফ নিজের ভাইদেরকে ও বাবার আত্মীয়দেরকে বললেন, “আমি গিয়ে ফরৌণকে সংবাদ দেব, তাঁকে বলব, আমার ভাইরা ও বাবার সমস্ত আত্মীয় কনান দেশ থেকে আমার কাছে এসেছেন;
32 ೩೨ ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ.
৩২তাঁরা ভেড়াপালক, তাঁরা পশুপাল রাখেন; আর তাঁদের গরু ও ভেড়ার পাল এবং সব কিছু এনেছেন।”
33 ೩೩ ಫರೋಹನು ನಿಮ್ಮನ್ನು ಕರೆಯಿಸಿ, “ನಿಮ್ಮ ಕಸುಬು ಏನು?” ಎಂದು ಕೇಳಿದರೆ,
৩৩তাতে ফরৌণ তোমাদেরকে ডেকে যখন জিজ্ঞাসা করবেন, “তোমাদের ব্যবসা কি?”
34 ೩೪ “ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.
৩৪তখন তোমরা বলবে, “আপনার এই দাসরা পূর্বপুরুষদের ছেলেবেলা থেকে আজ পর্যন্ত পশুপাল রেখে আসছে;” তাতে তোমরা গোশন প্রদেশে বাস করতে পারবে; কারণ পশুপালক মাত্রেই মিশরীয়দের ঘৃণার জিনিস।