< ಆದಿಕಾಂಡ 47 >

1 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್‌ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.
וַיָּבֹ֣א יוֹסֵף֮ וַיַּגֵּ֣ד לְפַרְעֹה֒ וַיֹּ֗אמֶר אָבִ֨י וְאַחַ֜י וְצֹאנָ֤ם וּבְקָרָם֙ וְכָל־אֲשֶׁ֣ר לָהֶ֔ם בָּ֖אוּ מֵאֶ֣רֶץ כְּנָ֑עַן וְהִנָּ֖ם בְּאֶ֥רֶץ גֹּֽשֶׁן׃
2 ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.
וּמִקְצֵ֣ה אֶחָ֔יו לָקַ֖ח חֲמִשָּׁ֣ה אֲנָשִׁ֑ים וַיַּצִּגֵ֖ם לִפְנֵ֥י פַרְעֹֽה׃
3 ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.
וַיֹּ֧אמֶר פַּרְעֹ֛ה אֶל־אֶחָ֖יו מַה־מַּעֲשֵׂיכֶ֑ם וַיֹּאמְר֣וּ אֶל־פַּרְעֹ֗ה רֹעֵ֥ה צֹאן֙ עֲבָדֶ֔יךָ גַּם־אֲנַ֖חְנוּ גַּם־אֲבוֹתֵֽינוּ׃
4 ಅದಲ್ಲದೆ ಅವರು ಫರೋಹನಿಗೆ, “ಕಾನಾನ್‌ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.
וַיֹּאמְר֣וּ אֶל־פַּרְעֹ֗ה לָג֣וּר בָּאָרֶץ֮ בָּאנוּ֒ כִּי־אֵ֣ין מִרְעֶ֗ה לַצֹּאן֙ אֲשֶׁ֣ר לַעֲבָדֶ֔יךָ כִּֽי־כָבֵ֥ד הָרָעָ֖ב בְּאֶ֣רֶץ כְּנָ֑עַן וְעַתָּ֛ה יֵֽשְׁבוּ־נָ֥א עֲבָדֶ֖יךָ בְּאֶ֥רֶץ גֹּֽשֶׁן׃
5 ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರೆ;
וַיֹּ֣אמֶר פַּרְעֹ֔ה אֶל־יוֹסֵ֖ף לֵאמֹ֑ר אָבִ֥יךָ וְאַחֶ֖יךָ בָּ֥אוּ אֵלֶֽיךָ׃
6 ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.
אֶ֤רֶץ מִצְרַ֙יִם֙ לְפָנֶ֣יךָ הִ֔וא בְּמֵיטַ֣ב הָאָ֔רֶץ הוֹשֵׁ֥ב אֶת־אָבִ֖יךָ וְאֶת־אַחֶ֑יךָ יֵשְׁבוּ֙ בְּאֶ֣רֶץ גֹּ֔שֶׁן וְאִם־יָדַ֗עְתָּ וְיֶשׁ־בָּם֙ אַנְשֵׁי־חַ֔יִל וְשַׂמְתָּ֛ם שָׂרֵ֥י מִקְנֶ֖ה עַל־אֲשֶׁר־לִֽי׃
7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.
וַיָּבֵ֤א יוֹסֵף֙ אֶת־יַֽעֲקֹ֣ב אָבִ֔יו וַיַּֽעֲמִדֵ֖הוּ לִפְנֵ֣י פַרְעֹ֑ה וַיְבָ֥רֶךְ יַעֲקֹ֖ב אֶת־פַּרְעֹֽה׃
8 ಫರೋಹನು, “ನಿನಗೆ ಈಗ ಎಷ್ಟು ವರ್ಷ?” ಎಂದು ಕೇಳಿದನು.
וַיֹּ֥אמֶר פַּרְעֹ֖ה אֶֽל־יַעֲקֹ֑ב כַּמָּ֕ה יְמֵ֖י שְׁנֵ֥י חַיֶּֽיךָ׃
9 ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.
וַיֹּ֤אמֶר יַעֲקֹב֙ אֶל־פַּרְעֹ֔ה יְמֵי֙ שְׁנֵ֣י מְגוּרַ֔י שְׁלֹשִׁ֥ים וּמְאַ֖ת שָׁנָ֑ה מְעַ֣ט וְרָעִ֗ים הָיוּ֙ יְמֵי֙ שְׁנֵ֣י חַיַּ֔י וְלֹ֣א הִשִּׂ֗יגוּ אֶת־יְמֵי֙ שְׁנֵי֙ חַיֵּ֣י אֲבֹתַ֔י בִּימֵ֖י מְגוּרֵיהֶֽם׃
10 ೧೦ ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
וַיְבָ֥רֶךְ יַעֲקֹ֖ב אֶת־פַּרְעֹ֑ה וַיֵּצֵ֖א מִלִּפְנֵ֥י פַרְעֹֽה׃
11 ೧೧ ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.
וַיּוֹשֵׁ֣ב יוֹסֵף֮ אֶת־אָבִ֣יו וְאֶת־אֶחָיו֒ וַיִּתֵּ֨ן לָהֶ֤ם אֲחֻזָּה֙ בְּאֶ֣רֶץ מִצְרַ֔יִם בְּמֵיטַ֥ב הָאָ֖רֶץ בְּאֶ֣רֶץ רַעְמְסֵ֑ס כַּאֲשֶׁ֖ר צִוָּ֥ה פַרְעֹֽה׃
12 ೧೨ ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
וַיְכַלְכֵּ֤ל יוֹסֵף֙ אֶת־אָבִ֣יו וְאֶת־אֶחָ֔יו וְאֵ֖ת כָּל־בֵּ֣ית אָבִ֑יו לֶ֖חֶם לְפִ֥י הַטָּֽף׃
13 ೧೩ ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.
וְלֶ֤חֶם אֵין֙ בְּכָל־הָאָ֔רֶץ כִּֽי־כָבֵ֥ד הָרָעָ֖ב מְאֹ֑ד וַתֵּ֜לַהּ אֶ֤רֶץ מִצְרַ֙יִם֙ וְאֶ֣רֶץ כְּנַ֔עַן מִפְּנֵ֖י הָרָעָֽב׃
14 ೧೪ ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
וַיְלַקֵּ֣ט יוֹסֵ֗ף אֶת־כָּל־הַכֶּ֙סֶף֙ הַנִּמְצָ֤א בְאֶֽרֶץ־מִצְרַ֙יִם֙ וּבְאֶ֣רֶץ כְּנַ֔עַן בַּשֶּׁ֖בֶר אֲשֶׁר־הֵ֣ם שֹׁבְרִ֑ים וַיָּבֵ֥א יוֹסֵ֛ף אֶת־הַכֶּ֖סֶף בֵּ֥יתָה פַרְעֹֽה׃
15 ೧೫ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.
וַיִּתֹּ֣ם הַכֶּ֗סֶף מֵאֶ֣רֶץ מִצְרַיִם֮ וּמֵאֶ֣רֶץ כְּנַעַן֒ וַיָּבֹאוּ֩ כָל־מִצְרַ֨יִם אֶל־יוֹסֵ֤ף לֵאמֹר֙ הָֽבָה־לָּ֣נוּ לֶ֔חֶם וְלָ֥מָּה נָמ֖וּת נֶגְדֶּ֑ךָ כִּ֥י אָפֵ֖ס כָּֽסֶף׃
16 ೧೬ ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು.
וַיֹּ֤אמֶר יוֹסֵף֙ הָב֣וּ מִקְנֵיכֶ֔ם וְאֶתְּנָ֥ה לָכֶ֖ם בְּמִקְנֵיכֶ֑ם אִם־אָפֵ֖ס כָּֽסֶף׃
17 ೧೭ ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
וַיָּבִ֣יאוּ אֶת־מִקְנֵיהֶם֮ אֶל־יוֹסֵף֒ וַיִּתֵּ֣ן לָהֶם֩ יוֹסֵ֨ף לֶ֜חֶם בַּסּוּסִ֗ים וּבְמִקְנֵ֥ה הַצֹּ֛אן וּבְמִקְנֵ֥ה הַבָּקָ֖ר וּבַחֲמֹרִ֑ים וַיְנַהֲלֵ֤ם בַּלֶּ֙חֶם֙ בְּכָל־מִקְנֵהֶ֔ם בַּשָּׁנָ֖ה הַהִֽוא׃
18 ೧೮ ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.
וַתִּתֹּם֮ הַשָּׁנָ֣ה הַהִוא֒ וַיָּבֹ֨אוּ אֵלָ֜יו בַּשָּׁנָ֣ה הַשֵּׁנִ֗ית וַיֹּ֤אמְרוּ לוֹ֙ לֹֽא־נְכַחֵ֣ד מֵֽאֲדֹנִ֔י כִּ֚י אִם־תַּ֣ם הַכֶּ֔סֶף וּמִקְנֵ֥ה הַבְּהֵמָ֖ה אֶל־אֲדֹנִ֑י לֹ֤א נִשְׁאַר֙ לִפְנֵ֣י אֲדֹנִ֔י בִּלְתִּ֥י אִם־גְּוִיָּתֵ֖נוּ וְאַדְמָתֵֽנוּ׃
19 ೧೯ “ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.
לָ֧מָּה נָמ֣וּת לְעֵינֶ֗יךָ גַּם־אֲנַ֙חְנוּ֙ גַּ֣ם אַדְמָתֵ֔נוּ קְנֵֽה־אֹתָ֥נוּ וְאֶת־אַדְמָתֵ֖נוּ בַּלָּ֑חֶם וְנִֽהְיֶ֞ה אֲנַ֤חְנוּ וְאַדְמָתֵ֙נוּ֙ עֲבָדִ֣ים לְפַרְעֹ֔ה וְתֶן־זֶ֗רַע וְנִֽחְיֶה֙ וְלֹ֣א נָמ֔וּת וְהָאֲדָמָ֖ה לֹ֥א תֵשָֽׁם׃
20 ೨೦ ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.
וַיִּ֨קֶן יוֹסֵ֜ף אֶת־כָּל־אַדְמַ֤ת מִצְרַ֙יִם֙ לְפַרְעֹ֔ה כִּֽי־מָכְר֤וּ מִצְרַ֙יִם֙ אִ֣ישׁ שָׂדֵ֔הוּ כִּֽי־חָזַ֥ק עֲלֵהֶ֖ם הָרָעָ֑ב וַתְּהִ֥י הָאָ֖רֶץ לְפַרְעֹֽה׃
21 ೨೧ ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.
וְאֶ֨ת־הָעָ֔ם הֶעֱבִ֥יר אֹת֖וֹ לֶעָרִ֑ים מִקְצֵ֥ה גְבוּל־מִצְרַ֖יִם וְעַד־קָצֵֽהוּ׃
22 ೨೨ ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.
רַ֛ק אַדְמַ֥ת הַכֹּהֲנִ֖ים לֹ֣א קָנָ֑ה כִּי֩ חֹ֨ק לַכֹּהֲנִ֜ים מֵאֵ֣ת פַּרְעֹ֗ה וְאָֽכְל֤וּ אֶת־חֻקָּם֙ אֲשֶׁ֨ר נָתַ֤ן לָהֶם֙ פַּרְעֹ֔ה עַל־כֵּ֕ן לֹ֥א מָכְר֖וּ אֶת־אַדְמָתָֽם׃
23 ೨೩ ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.
וַיֹּ֤אמֶר יוֹסֵף֙ אֶל־הָעָ֔ם הֵן֩ קָנִ֨יתִי אֶתְכֶ֥ם הַיּ֛וֹם וְאֶת־אַדְמַתְכֶ֖ם לְפַרְעֹ֑ה הֵֽא־לָכֶ֣ם זֶ֔רַע וּזְרַעְתֶּ֖ם אֶת־הָאֲדָמָֽה׃
24 ೨೪ ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.
וְהָיָה֙ בַּתְּבוּאֹ֔ת וּנְתַתֶּ֥ם חֲמִישִׁ֖ית לְפַרְעֹ֑ה וְאַרְבַּ֣ע הַיָּדֹ֡ת יִהְיֶ֣ה לָכֶם֩ לְזֶ֨רַע הַשָּׂדֶ֧ה וּֽלְאָכְלְכֶ֛ם וְלַאֲשֶׁ֥ר בְּבָתֵּיכֶ֖ם וְלֶאֱכֹ֥ל לְטַפְּכֶֽם׃
25 ೨೫ ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.
וַיֹּאמְר֖וּ הֶחֱיִתָ֑נוּ נִמְצָא־חֵן֙ בְּעֵינֵ֣י אֲדֹנִ֔י וְהָיִ֥ינוּ עֲבָדִ֖ים לְפַרְעֹֽה׃
26 ೨೬ ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
וַיָּ֣שֶׂם אֹתָ֣הּ יוֹסֵ֡ף לְחֹק֩ עַד־הַיּ֨וֹם הַזֶּ֜ה עַל־אַדְמַ֥ת מִצְרַ֛יִם לְפַרְעֹ֖ה לַחֹ֑מֶשׁ רַ֞ק אַדְמַ֤ת הַכֹּֽהֲנִים֙ לְבַדָּ֔ם לֹ֥א הָיְתָ֖ה לְפַרְעֹֽה׃
27 ೨೭ ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.
וַיֵּ֧שֶׁב יִשְׂרָאֵ֛ל בְּאֶ֥רֶץ מִצְרַ֖יִם בְּאֶ֣רֶץ גֹּ֑שֶׁן וַיֵּאָחֲז֣וּ בָ֔הּ וַיִּפְר֥וּ וַיִּרְבּ֖וּ מְאֹֽד׃
28 ೨೮ ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು.
וַיְחִ֤י יַעֲקֹב֙ בְּאֶ֣רֶץ מִצְרַ֔יִם שְׁבַ֥ע עֶשְׂרֵ֖ה שָׁנָ֑ה וַיְהִ֤י יְמֵֽי־יַעֲקֹב֙ שְׁנֵ֣י חַיָּ֔יו שֶׁ֣בַע שָׁנִ֔ים וְאַרְבָּעִ֥ים וּמְאַ֖ת שָׁנָֽה׃
29 ೨೯ ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.
וַיִּקְרְב֣וּ יְמֵֽי־יִשְׂרָאֵ֘ל לָמוּת֒ וַיִּקְרָ֣א ׀ לִבְנ֣וֹ לְיוֹסֵ֗ף וַיֹּ֤אמֶר לוֹ֙ אִם־נָ֨א מָצָ֤אתִי חֵן֙ בְּעֵינֶ֔יךָ שִֽׂים־נָ֥א יָדְךָ֖ תַּ֣חַת יְרֵכִ֑י וְעָשִׂ֤יתָ עִמָּדִי֙ חֶ֣סֶד וֶאֱמֶ֔ת אַל־נָ֥א תִקְבְּרֵ֖נִי בְּמִצְרָֽיִם׃
30 ೩೦ ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.
וְשָֽׁכַבְתִּי֙ עִם־אֲבֹתַ֔י וּנְשָׂאתַ֙נִי֙ מִמִּצְרַ֔יִם וּקְבַרְתַּ֖נִי בִּקְבֻרָתָ֑ם וַיֹּאמַ֕ר אָנֹכִ֖י אֶֽעֱשֶׂ֥ה כִדְבָרֶֽךָ׃
31 ೩೧ ಇಸ್ರಾಯೇಲನು, “ಪ್ರಮಾಣಮಾಡು” ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.
וַיֹּ֗אמֶר הִשָּֽׁבְעָה֙ לִ֔י וַיִּשָּׁבַ֖ע ל֑וֹ וַיִּשְׁתַּ֥חוּ יִשְׂרָאֵ֖ל עַל־רֹ֥אשׁ הַמִּטָּֽה׃ פ

< ಆದಿಕಾಂಡ 47 >