< ಆದಿಕಾಂಡ 50 >

1 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.
וַיִּפֹּ֥ל יוֹסֵ֖ף עַל־פְּנֵ֣י אָבִ֑יו וַיֵּ֥בְךְּ עָלָ֖יו וַיִּשַּׁק־לֽוֹ׃
2 ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
וַיְצַ֨ו יוֹסֵ֤ף אֶת־עֲבָדָיו֙ אֶת־הָרֹ֣פְאִ֔ים לַחֲנֹ֖ט אֶת־אָבִ֑יו וַיַּחַנְט֥וּ הָרֹפְאִ֖ים אֶת־יִשְׂרָאֵֽל׃
3 ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.
וַיִּמְלְאוּ־לוֹ֙ אַרְבָּעִ֣ים י֔וֹם כִּ֛י כֵּ֥ן יִמְלְא֖וּ יְמֵ֣י הַחֲנֻטִ֑ים וַיִּבְכּ֥וּ אֹת֛וֹ מִצְרַ֖יִם שִׁבְעִ֥ים יֽוֹם׃
4 ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,
וַיַּֽעַבְרוּ֙ יְמֵ֣י בְכִית֔וֹ וַיְדַבֵּ֣ר יוֹסֵ֔ף אֶל־בֵּ֥ית פַּרְעֹ֖ה לֵאמֹ֑ר אִם־נָ֨א מָצָ֤אתִי חֵן֙ בְּעֵ֣ינֵיכֶ֔ם דַּבְּרוּ־נָ֕א בְּאָזְנֵ֥י פַרְעֹ֖ה לֵאמֹֽר׃
5 ‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು.
אָבִ֞י הִשְׁבִּיעַ֣נִי לֵאמֹ֗ר הִנֵּ֣ה אָנֹכִי֮ מֵת֒ בְּקִבְרִ֗י אֲשֶׁ֨ר כָּרִ֤יתִי לִי֙ בְּאֶ֣רֶץ כְּנַ֔עַן שָׁ֖מָּה תִּקְבְּרֵ֑נִי וְעַתָּ֗ה אֶֽעֱלֶה־נָּ֛א וְאֶקְבְּרָ֥ה אֶת־אָבִ֖י וְאָשֽׁוּבָה׃
6 ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು.
וַיֹּ֖אמֶר פַּרְעֹ֑ה עֲלֵ֛ה וּקְבֹ֥ר אֶת־אָבִ֖יךָ כַּאֲשֶׁ֥ר הִשְׁבִּיעֶֽךָ׃
7 ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ
וַיַּ֥עַל יוֹסֵ֖ף לִקְבֹּ֣ר אֶת־אָבִ֑יו וַיַּֽעֲל֨וּ אִתּ֜וֹ כָּל־עַבְדֵ֤י פַרְעֹה֙ זִקְנֵ֣י בֵית֔וֹ וְכֹ֖ל זִקְנֵ֥י אֶֽרֶץ־מִצְרָֽיִם׃
8 ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.
וְכֹל֙ בֵּ֣ית יוֹסֵ֔ף וְאֶחָ֖יו וּבֵ֣ית אָבִ֑יו רַ֗ק טַפָּם֙ וְצֹאנָ֣ם וּבְקָרָ֔ם עָזְב֖וּ בְּאֶ֥רֶץ גֹּֽשֶׁן׃
9 ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.
וַיַּ֣עַל עִמּ֔וֹ גַּם־רֶ֖כֶב גַּם־פָּרָשִׁ֑ים וַיְהִ֥י הַֽמַּחֲנֶ֖ה כָּבֵ֥ד מְאֹֽד׃
10 ೧೦ ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
וַיָּבֹ֜אוּ עַד־גֹּ֣רֶן הָאָטָ֗ד אֲשֶׁר֙ בְּעֵ֣בֶר הַיַּרְדֵּ֔ן וַיִּ֨סְפְּדוּ־שָׁ֔ם מִסְפֵּ֛ד גָּד֥וֹל וְכָבֵ֖ד מְאֹ֑ד וַיַּ֧עַשׂ לְאָבִ֛יו אֵ֖בֶל שִׁבְעַ֥ת יָמִֽים׃
11 ೧೧ ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.
וַיַּ֡רְא יוֹשֵׁב֩ הָאָ֨רֶץ הַֽכְּנַעֲנִ֜י אֶת־הָאֵ֗בֶל בְּגֹ֙רֶן֙ הָֽאָטָ֔ד וַיֹּ֣אמְר֔וּ אֵֽבֶל־כָּבֵ֥ד זֶ֖ה לְמִצְרָ֑יִם עַל־כֵּ֞ן קָרָ֤א שְׁמָהּ֙ אָבֵ֣ל מִצְרַ֔יִם אֲשֶׁ֖ר בְּעֵ֥בֶר הַיַּרְדֵּֽן׃
12 ೧೨ ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.
וַיַּעֲשׂ֥וּ בָנָ֖יו ל֑וֹ כֵּ֖ן כַּאֲשֶׁ֥ר צִוָּֽם׃
13 ೧೩ ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.
וַיִּשְׂא֨וּ אֹת֤וֹ בָנָיו֙ אַ֣רְצָה כְּנַ֔עַן וַיִּקְבְּר֣וּ אֹת֔וֹ בִּמְעָרַ֖ת שְׂדֵ֣ה הַמַּכְפֵּלָ֑ה אֲשֶׁ֣ר קָנָה֩ אַבְרָהָ֨ם אֶת־הַשָּׂדֶ֜ה לַאֲחֻזַּת־קֶ֗בֶר מֵאֵ֛ת עֶפְרֹ֥ן הַחִתִּ֖י עַל־פְּנֵ֥י מַמְרֵֽא׃
14 ೧೪ ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.
וַיָּ֨שָׁב יוֹסֵ֤ף מִצְרַ֙יְמָה֙ ה֣וּא וְאֶחָ֔יו וְכָל־הָעֹלִ֥ים אִתּ֖וֹ לִקְבֹּ֣ר אֶת־אָבִ֑יו אַחֲרֵ֖י קָבְר֥וֹ אֶת־אָבִֽיו׃
15 ೧೫ ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
וַיִּרְא֤וּ אֲחֵֽי־יוֹסֵף֙ כִּי־מֵ֣ת אֲבִיהֶ֔ם וַיֹּ֣אמְר֔וּ ל֥וּ יִשְׂטְמֵ֖נוּ יוֹסֵ֑ף וְהָשֵׁ֤ב יָשִׁיב֙ לָ֔נוּ אֵ֚ת כָּל־הָ֣רָעָ֔ה אֲשֶׁ֥ר גָּמַ֖לְנוּ אֹתֽוֹ׃
16 ೧೬ ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,
וַיְצַוּ֕וּ אֶל־יוֹסֵ֖ף לֵאמֹ֑ר אָבִ֣יךָ צִוָּ֔ה לִפְנֵ֥י מוֹת֖וֹ לֵאמֹֽר׃
17 ೧೭ “ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.
כֹּֽה־תֹאמְר֣וּ לְיוֹסֵ֗ף אָ֣נָּ֡א שָׂ֣א נָ֠א פֶּ֣שַׁע אַחֶ֤יךָ וְחַטָּאתָם֙ כִּי־רָעָ֣ה גְמָל֔וּךָ וְעַתָּה֙ שָׂ֣א נָ֔א לְפֶ֥שַׁע עַבְדֵ֖י אֱלֹהֵ֣י אָבִ֑יךָ וַיֵּ֥בְךְּ יוֹסֵ֖ף בְּדַבְּרָ֥ם אֵלָֽיו׃
18 ೧೮ ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.
וַיֵּלְכוּ֙ גַּם־אֶחָ֔יו וַֽיִּפְּל֖וּ לְפָנָ֑יו וַיֹּ֣אמְר֔וּ הִנֶּ֥נּֽוּ לְךָ֖ לַעֲבָדִֽים׃
19 ೧೯ ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?
וַיֹּ֧אמֶר אֲלֵהֶ֛ם יוֹסֵ֖ף אַל־תִּירָ֑אוּ כִּ֛י הֲתַ֥חַת אֱלֹהִ֖ים אָֽנִי׃
20 ೨೦ ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
וְאַתֶּ֕ם חֲשַׁבְתֶּ֥ם עָלַ֖י רָעָ֑ה אֱלֹהִים֙ חֲשָׁבָ֣הּ לְטֹבָ֔ה לְמַ֗עַן עֲשֹׂ֛ה כַּיּ֥וֹם הַזֶּ֖ה לְהַחֲיֹ֥ת עַם־רָֽב׃
21 ೨೧ ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.
וְעַתָּה֙ אַל־תִּירָ֔אוּ אָנֹכִ֛י אֲכַלְכֵּ֥ל אֶתְכֶ֖ם וְאֶֽת־טַפְּכֶ֑ם וַיְנַחֵ֣ם אוֹתָ֔ם וַיְדַבֵּ֖ר עַל־לִבָּֽם׃
22 ೨೨ ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
וַיֵּ֤שֶׁב יוֹסֵף֙ בְּמִצְרַ֔יִם ה֖וּא וּבֵ֣ית אָבִ֑יו וַיְחִ֣י יוֹסֵ֔ף מֵאָ֥ה וָעֶ֖שֶׂר שָׁנִֽים׃
23 ೨೩ ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.
וַיַּ֤רְא יוֹסֵף֙ לְאֶפְרַ֔יִם בְּנֵ֖י שִׁלֵּשִׁ֑ים גַּ֗ם בְּנֵ֤י מָכִיר֙ בֶּן־מְנַשֶּׁ֔ה יֻלְּד֖וּ עַל־בִּרְכֵּ֥י יוֹסֵֽף׃
24 ೨೪ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
וַיֹּ֤אמֶר יוֹסֵף֙ אֶל־אֶחָ֔יו אָנֹכִ֖י מֵ֑ת וֵֽאלֹהִ֞ים פָּקֹ֧ד יִפְקֹ֣ד אֶתְכֶ֗ם וְהֶעֱלָ֤ה אֶתְכֶם֙ מִן־הָאָ֣רֶץ הַזֹּ֔את אֶל־הָאָ֕רֶץ אֲשֶׁ֥ר נִשְׁבַּ֛ע לְאַבְרָהָ֥ם לְיִצְחָ֖ק וּֽלְיַעֲקֹֽב׃
25 ೨೫ ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.
וַיַּשְׁבַּ֣ע יוֹסֵ֔ף אֶת־בְּנֵ֥י יִשְׂרָאֵ֖ל לֵאמֹ֑ר פָּקֹ֨ד יִפְקֹ֤ד אֱלֹהִים֙ אֶתְכֶ֔ם וְהַעֲלִתֶ֥ם אֶת־עַצְמֹתַ֖י מִזֶּֽה׃
26 ೨೬ ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
וַיָּ֣מָת יוֹסֵ֔ף בֶּן־מֵאָ֥ה וָעֶ֖שֶׂר שָׁנִ֑ים וַיַּחַנְט֣וּ אֹת֔וֹ וַיִּ֥ישֶׂם בָּאָר֖וֹן בְּמִצְרָֽיִם׃

< ಆದಿಕಾಂಡ 50 >