< ಆದಿಕಾಂಡ 50 >
1 ೧ ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.
Og Josef bøide sig ned over sin fars ansikt og gråt over ham og kysset ham.
2 ೨ ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
Og Josef bød lægene som han hadde i sin tjeneste, å balsamere hans far; og lægene balsamerte Israel.
3 ೩ ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.
Firti dager gikk med hertil, for så mange dager går med til balsameringen; og egypterne gråt over ham i sytti dager.
4 ೪ ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,
Da sørgedagene over ham var til ende, talte Josef til Faraos husfolk og sa: Dersom jeg har funnet nåde for eders øine, så tal for mig til Farao og si:
5 ೫ ‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು.
Min far tok en ed av mig og sa: Jeg dør; i min grav som jeg lot grave for mig i Kana'ans land, der skal du begrave mig. La mig derfor få dra op og begrave min far og så vende tilbake!
6 ೬ ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು.
Og Farao sa: Dra op og begrav din far, således som du tilsvor ham.
7 ೭ ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ
Så drog Josef op for å begrave sin far; og alle Faraos tjenere, de eldste i hans hus, og alle de eldste i Egyptens land drog op med ham,
8 ೮ ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.
og hele Josefs hus og hans brødre og hans fars hus; bare sine små barn og sitt småfe og storfe lot de bli tilbake i landet Gosen.
9 ೯ ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.
Og både vogner og hestfolk drog op med ham, så det blev et meget stort tog.
10 ೧೦ ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
Da de kom til Goren-Ha'atad på hin side Jordan, holdt de der en stor og høitidelig sørgefest, og han gjorde likferd efter sin far i syv dager.
11 ೧೧ ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.
Og da landets innbyggere, kana'anittene, så likferden i Goren-Ha'atad, sa de: Det er en prektig likferd egypterne holder der. Derfor kalte de stedet Abel Misra'im; det ligger på hin side Jordan.
12 ೧೨ ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.
Og hans sønner gjorde med ham således som han hadde pålagt dem;
13 ೧೩ ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.
hans sønner førte ham til Kana'ans land og begravde ham i hulen på Makpela-marken, den mark som Abraham hadde kjøpt av hetitten Efron til eiendoms-gravsted, østenfor Mamre.
14 ೧೪ ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.
Og da Josef hadde begravet sin far, vendte han tilbake til Egypten, både han og hans brødre og alle de som hadde draget op med ham for å begrave hans far.
15 ೧೫ ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Da Josefs brødre så at deres far var død, sa de: Bare nu ikke Josef vil hate oss og gjengjelde oss alt det onde vi gjorde mot ham!
16 ೧೬ ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,
Så sendte de bud til Josef og lot si: Din far gav oss før sin død dette pålegg:
17 ೧೭ “ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.
Så skal I si til Josef: Tilgi, kjære, dine brødres misgjerning og deres synd, at de har gjort ille mot dig! Så tilgi nu oss, som også tjener din fars Gud, vår misgjerning! Og Josef gråt da de talte således til ham.
18 ೧೮ ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.
Siden kom også hans brødre selv og falt ned for ham og sa: Se, vi vil være dine tjenere.
19 ೧೯ ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?
Da sa Josef til dem: Vær ikke redde; er vel jeg i Guds sted?
20 ೨೦ ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
I tenkte ondt mot mig; men Gud tenkte det til det gode for å gjøre det han nu har gjort, og holde meget folk i live.
21 ೨೧ ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.
Så vær da ikke redde, jeg vil sørge for eder og eders barn. Og han trøstet dem og talte vennlig til dem.
22 ೨೨ ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
Josef blev boende i Egypten, både han og hans fars hus; og Josef blev hundre og ti år gammel.
23 ೨೩ ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.
Og Josef fikk se Efra'ims barn i tredje ledd; også barna til Makir, Manasses sønn, blev født på Josefs knær.
24 ೨೪ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
Og Josef sa til sine brødre: Jeg dør, men Gud skal visselig se til eder og føre eder op fra dette land til det land han har tilsvoret Abraham, Isak og Jakob.
25 ೨೫ ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.
Og Josef tok en ed av Israels sønner og sa: Gud skal visselig se til eder, og da skal I føre mine ben op herfra.
26 ೨೬ ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
Og Josef døde, hundre og ti år gammel; og de balsamerte ham og la ham i kiste i Egypten.