< ಆದಿಕಾಂಡ 6 >
1 ೧ ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು
وقتی تعداد انسانها روی زمین زیاد میشد، و دختران برای ایشان متولد میشدند، | |
2 ೨ ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
پسران خدا دیدند که دختران انسانها زیبا هستند، پس هر کدام را که پسندیدند، برای خود به زنی گرفتند. | |
3 ೩ ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
آنگاه خداوند فرمود: «روح من همیشه در انسان باقی نخواهد ماند، زیرا او موجودی است فانی و نفسانی. پس صد و بیست سال به او فرصت میدهم تا خود را اصلاح کند.» | |
4 ೪ ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
در آن روزها و نیز پس از آن، وقتی پسران خدا و دختران انسانها با هم وصلت نمودند، مردانی غولآسا از آنان به وجود آمدند. اینان دلاوران معروف دوران قدیم هستند. | |
5 ೫ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
خداوند دید که شرارت انسان بر زمین چقدر زیاد شده است، و نیتهای دل او دائماً به بدی تمایل دارد. | |
6 ೬ ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
پس خداوند از آفرینش انسان متأسف شد و در دل محزون گشت. | |
7 ೭ ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
پس خداوند فرمود: «من نسل بشر را که آفریدهام از روی زمین محو میکنم. حتی چارپایان و خزندگان و پرندگان را نیز از بین میبرم، زیرا از آفریدن آنها متأسف شدم.» | |
8 ೮ ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.
اما در این میان نوح مورد لطف خداوند قرار گرفت. | |
9 ೯ ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
این است تاریخچۀ نوح و خاندانش: نوح در میان مردمان زمان خویش مردی صالح بود و با خدا راه میرفت. | |
10 ೧೦ ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
نوح سه پسر داشت به نامهای سام، حام و یافث. | |
11 ೧೧ ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.
در این زمان، گناه و ظلم بسیار زیاد شده بود و از نظر خدا به اوج خود رسیده بود. | |
12 ೧೨ ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
خدا شرارت بشر بر روی زمین را مشاهده کرد، زیرا همۀ مردم دنیا فاسد شده بودند. | |
13 ೧೩ ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
پس خدا به نوح فرمود: «تصمیم گرفتهام تمام این مردم را هلاک کنم، زیرا زمین را از شرارت پُر ساختهاند. من آنها را همراه زمین از بین میبرم. | |
14 ೧೪ ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
«اما تو، ای نوح، با چوب درخت سرو یک کشتی بساز و در آن اتاقهایی درست کن، و درون و بیرونش را با قیر بپوشان. | |
15 ೧೫ ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.
آن را طوری بساز که طولش ۳۰۰ ذراع، عرضش ۵۰ ذراع و ارتفاع آن ۳۰ ذراع باشد. | |
16 ೧೬ ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
یک ذراع پایینتر از سقف، پنجرهای برای روشنایی کشتی بساز. در داخل آن سه طبقه بنا کن و درِ ورودی کشتی را در پهلوی آن بگذار. | |
17 ೧೭ ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
«بهزودی من سراسر زمین را با آب خواهم پوشانید تا هر موجود زندهای که در آن هست، هلاک گردد. | |
18 ೧೮ “ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.
اما عهد خود را با تو استوار خواهم ساخت، و تو وارد کشتی خواهی شد؛ تو و پسرانت و زنت و زنان پسرانت، همراه تو. | |
19 ೧೯ ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
از تمام حیوانات، یک جفت نر و ماده با خود به داخل کشتی ببر، تا از خطر این طوفان در امان باشند. | |
20 ೨೦ ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
جفتی از هر نوع پرنده، از هر نوع چارپا و از هر نوع خزنده نزد تو خواهند آمد تا آنها را زنده نگاه داری. | |
21 ೨೧ ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.
همچنین خوراک کافی برای خود و برای تمام موجودات در کشتی ذخیره کن.» | |
22 ೨೨ ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.
نوح تمام اوامر خدا را انجام داد. | |
![The World is Destroyed by Water](/resources/Gustave-Dore-La-Grande-Bible-de-Tours/web/Gustave-Dore-Bible-Tour-Hebrew-OT-006-The-World-is-Destroyed-by-Water.jpg)
The World is Destroyed by Water