< ಆದಿಕಾಂಡ 7 >

1 ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
Тогава Господ рече на Ноя: Влез ти и целият ти дом в ковчега; защото в това поколение тебе видях праведен пред Мене.
2 ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.
Вземи си по седем от всички чисти животни, мъжки и женските им; а от нечистите животни по две, мъжки и женските им;
3 ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.
също и от въздушните птици по седем, мъжки и женски; за да опазиш от тях разплод по лицето на цялата земя.
4 ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
Защото още седем дни и Аз ще направя да вали дъжд по земята четиридесет дни и четиридесет нощи; и ще изтребя от лицето на земята всичко живо, що съм направил.
5 ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.
И Ной извърши всичко, според както му заповяда Господ.
6 ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು.
А Ной беше на шестстотин години когато стана на земята потопът от водата.
7 ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು.
И поради водите на потопа влязоха в ковчега Ной, синовете му, жена му и снахите му с него.
8 ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ
От чистите животни и от нечистите животни, от птиците, и от всичко, което пълзи по земята,
9 ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.
влязоха в ковчега две по две при Ноя, мъжки и женски, според както заповяда Бог на Ноя.
10 ೧೦ ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು.
И след седмия ден водите на потопа заляха земята.
11 ೧೧ ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
В шестстотната година на Ноевия живот, във втория месец, на седемнадесетия ден от месеца, в същия ден всичките извори на голямата бездна се разпукнаха и небесните отвори се разкриха.
12 ೧೨ ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು.
И дъждът валя на земята четиридесет дни и четиридесет нощи.
13 ೧೩ ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.
В тоя същи ден влязоха в ковчега Ной и синовете Ноеви: Сим, Хам и Яфет, и Ноевата жена, и с тях трите му снахи
14 ೧೪ ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ
те и всичките животни според вида си, всичкият добитък според вида си, и всичките влечуги, които пълзят по земята според вида си и всичките птици според вида си, всяко пернато от всякакъв вид.
15 ೧೫ ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.
Две по две от всяка твар, която има в себе си жизнено дихание, влязоха в ковчега при Ноя.
16 ೧೬ ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
И като влязоха, мъжки и женски от всяка твар влязоха, според както Бог бе заповядал; и Господ го затвори вътре.
17 ೧೭ ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.
Четиридесет дни трая потопът на земята; и водите дойдоха та подеха ковчега и той се издигна над земята.
18 ೧೮ ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.
Водите се усилваха и прииждаха много на земята, така ковчегът се носеше по повърхността на водите.
19 ೧೯ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.
Водите се усилваха и твърде много на земята, така щото се покриха всичките високи планини намиращи се под цялото небе.
20 ೨೦ ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,
Петнадесет лакти по-горе от тях се издигнаха водите, та планините се покриха.
21 ೨೧ ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.
И всяка твар, която се движеше по земята, умря, - птици, добитък, зверове, всички животни, които пълзят по земята и всеки човек.
22 ೨೨ ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು.
От всичко що беше на сушата, всичко, което имаше в ноздрите си жизнено дихание, измря.
23 ೨೩ ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
Всичко живо що се намираше по лицето на земята се изтреби, - човеци, добитък, животни и небесни птици; изтребиха се от земята; останаха само Ной и ония, които бяха с него в ковчега.
24 ೨೪ ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು.
А водите се застояха по земята сто и петдесет дни.

< ಆದಿಕಾಂಡ 7 >

The Great Flood
The Great Flood