< ಆದಿಕಾಂಡ 7 >
1 ೧ ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
And Yahweh said to Noah, Enter thou and all thy house, into the ark, —for, thee, have I seen righteous before me, in this generation.
2 ೨ ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.
Of all the clean beasts, shalt thou take to thee by sevens, a male and his female, —and, of the beasts that are not clean, shall be two a male and his female.
3 ೩ ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.
Also of the bird of the heavens, by sevens, male and female, —to keep alive a seed on the face of all the earth.
4 ೪ ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
For in seven days more, I, am sending rain on the earth, forty days and forty nights, —so will I wipe out all the living things which I have made, from off the face of the ground.
5 ೫ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.
And Noah did, —according to all that Yahweh commanded him.
6 ೬ ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು.
Now, Noah, was six hundred years old, —when, the flood, came, even waters on the earth.
7 ೭ ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು.
So Noah entered, and his sons and his wife and his sons’ wives with him into the ark, —from before the waters of the flood,
8 ೮ ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ
Of the beasts that were clean, and of the beasts that were not clean, —and of the birds, and everything that creepeth on the ground,
9 ೯ ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.
two and two, went they in unto Noah, into the ark male and female, —as God commanded Noah.
10 ೧೦ ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು.
And it came to pass, in the seven days, —that the waters of the flood, came on the earth.
11 ೧೧ ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
In the six hundredth year, the year of the life of Noah. in the second month on the seventeenth day of the month on this day, were burst open all the fountains of the great roaring deep, and the windows of the heavens, were set open.
12 ೧೨ ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು.
(And it came to pass that the heavy rain was on the earth, —forty days and forty nights.)
13 ೧೩ ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.
On this selfsame day, entered Noah, and Shem and Ham and Japheth. Noah’s sons, —and Noah’s wife, and his sons’ three wives with them into the ark:
14 ೧೪ ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ
they, and all the wild-beasts after their kind and all the tame-beasts after their kind, and all the creeping things that creep on the earth after their kind, —and all the birds after their kind, every bird of every wing.
15 ೧೫ ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.
So they entered in unto Noah, into the ark, —two and two of all flesh, wherein was the spirit of life.
16 ೧೬ ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
And, they that entered, male and female of all flesh, entered, as God commanded him, —and Yahweh shut him in round about.
17 ೧೭ ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.
And it came to pass, that the flood was forty days on the earth, —and the waters increased and bare up the ark, and it was lifted high above the earth,
18 ೧೮ ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.
And the waters prevailed and increased greatly, on the earth, —and the ark went its way on the face of the waters.
19 ೧೯ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.
Yea the waters, prevailed very greatly, on the earth, —so that all the high mountains became covered, that were under all the heavens:
20 ೨೦ ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,
fifteen cubits upwards, prevailed the waters, so that the mountains became covered.
21 ೨೧ ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.
And all flesh ceased to breathe that moved on the earth, of birds and of tame-beasts and of wild-beasts, and of all the swarming things that swarm on the earth, —and all mankind.
22 ೨೨ ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು.
All in whose nostrils was the breath of the spirit of life of all that were on the dry ground died.
23 ೨೩ ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
Thus was wiped out all that existed on the face of the ground, from man unto beast unto creeping thing, and unto the bird of the heavens, thus were they wiped out from the earth, —so that there was left—only Noah and they that were with him in the ark.
24 ೨೪ ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು.
Thus prevailed the waters on the earth, —a hundred and fifty days.