< ಆದಿಕಾಂಡ 8 >
1 ೧ ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
কিন্তু ঈশ্বর নোহকে এবং জাহাজে তাঁর সাথে থাকা সব বন্য ও গৃহপালিত পশুকে স্মরণ করলেন, এবং পৃথিবীতে তিনি বাতাস পাঠালেন, ও জল সরে গেল।
2 ೨ ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.
এদিকে মাটির নিচে থাকা জলের উৎসগুলি, ও আকাশমণ্ডলের জানালাগুলি বন্ধ হয়ে গেল, এবং আকাশ থেকে বৃষ্টি পড়াও বন্ধ হল।
3 ೩ ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.
পৃথিবী থেকে জল সরার প্রক্রিয়া অব্যাহত রইল। 150 দিন পর জল নিচে নামল,
4 ೪ ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.
এবং সপ্তম মাসের সপ্তদশতম দিনে জাহাজটি আরারট পর্বতের চূড়ায় এসে স্থির হল।
5 ೫ ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
দশম মাস পর্যন্ত জল অনবরত সরে এল, এবং দশম মাসের প্রথম দিনে পাহাড়-পর্বতের চূড়াগুলি দৃষ্টিগোচর হল।
6 ೬ ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.
চল্লিশ দিন পর নোহ সেই জানালাটি খুলে দিলেন, যেটি তিনি সেই জাহাজে তৈরি করেছিলেন
7 ೭ ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
এবং একটি দাঁড়কাক বাইরে পাঠালেন, আর পৃথিবীতে জল না শুকানো পর্যন্ত সেটি ইতস্তত বাইরে যাচ্ছিল ও ফিরে আসছিল।
8 ೮ ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.
পরে স্থলভূমির উপরে জল শুকিয়েছে কি না, তা দেখার জন্য তিনি একটি পায়রা বাইরে পাঠালেন।
9 ೯ ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
কিন্তু পায়রাটি তার পা রাখার জায়গা পায়নি, কারণ পৃথিবীর উপরে সর্বত্র তখনও জল জমে ছিল; তাই সেটি জাহাজে নোহের কাছে ফিরে এল। তখন তিনি তাঁর হাত বাড়িয়ে পায়রাটিকে ধরে জাহাজে তাঁর নিজের কাছে ফিরিয়ে আনলেন।
10 ೧೦ ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.
তিনি আরও সাত দিন অপেক্ষা করলেন এবং আবার জাহাজ থেকে সেই পায়রাটিকে বাইরে পাঠালেন।
11 ೧೧ ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
সন্ধ্যাবেলায় যখন সেই পায়রাটি তাঁর কাছে ফিরে এল, তখন সেটির চঞ্চুতে ছিল জলপাই গাছের একটি টাটকা পাতা! তখন নোহ জানতে পারলেন যে পৃথিবী থেকে জল সরে গিয়েছে।
12 ೧೨ ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.
তিনি আরও সাত দিন অপেক্ষা করলেন এবং আবার সেই পায়রাটিকে বাইরে পাঠালেন, এবার কিন্তু সেটি আর তাঁর কাছে ফিরে এল না।
13 ೧೩ ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
নোহের জীবনকালের 601 তম বছরের প্রথম মাসের প্রথম দিনে, পৃথিবীর উপরে জল শুকিয়ে গেল। নোহ তখন জাহাজ থেকে আচ্ছাদনটি সরিয়ে দিলেন এবং দেখতে পেলেন যে স্থলভূমির উপরদিকটি শুকিয়ে গিয়েছে।
14 ೧೪ ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು.
দ্বিতীয় মাসের সাতাশতম দিনে পৃথিবী পুরোপুরি শুকিয়ে গেল।
16 ೧೬ “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
“তুমি ও তোমার স্ত্রী ও তোমার ছেলেরা ও তাদের স্ত্রীরা—তোমরা জাহাজ থেকে বাইরে বেরিয়ে এসো।
17 ೧೭ ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
যেসব জীবিত প্রাণী তোমার সাথে আছে—পাখিরা, পশুরা, ও সব সরীসৃপ প্রাণী—সবাইকে বাইরে বের করে আনো, যেন সেগুলি পৃথিবীতে বংশবৃদ্ধি করে এখানে ফলবান হয় ও সংখ্যায় বৃদ্ধি পায়।”
18 ೧೮ ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.
অতএব নোহ তাঁর স্ত্রীকে, ছেলেদের, এবং তাঁর পুত্রবধূদের সাথে নিয়ে বাইরে বের হয়ে এলেন।
19 ೧೯ ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.
সব পশু এবং সরীসৃপ প্রাণী ও পাখি—পৃথিবীতে বিচরণকারী সবকিছু, তাদের প্রজাতি অনুসারে এক এক করে জাহাজ থেকে বাইরে বের হয়ে এল।
20 ೨೦ ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
পরে নোহ সদাপ্রভুর উদ্দেশে একটি যজ্ঞবেদি তৈরি করলেন এবং, সব শুচিশুদ্ধ পশু ও শুচিশুদ্ধ পাখির মধ্যে থেকে কয়েকটি নিলেন, ও সেই বেদিতে হোমবলি উৎসর্গ করলেন।
21 ೨೧ ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
সদাপ্রভু সেই প্রীতিকর সৌরভের ঘ্রাণ নিয়ে মনে মনে বললেন: “মানুষের জন্য আমি আর কখনোই ভূমিকে অভিশাপ দেব না, যদিও শিশুকাল থেকেই মানুষের অন্তরের সব প্রবণতা মন্দ। যেভাবে আমি সব জীবিত প্রাণীকে ধ্বংস করেছি, আমি আর তা করব না।
22 ೨೨ ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.
“যতদিন এই পৃথিবী টিকে থাকবে, বীজবপনকাল ও ফসল গোলাজাত করার সময়, শৈত্য ও উত্তাপ, গ্রীষ্মকাল ও শীতকাল, দিন ও রাত কখনোই শেষ হবে না।”