< ಆದಿಕಾಂಡ 9 >
1 ೧ ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
В това време Бог благослови Ноя и синовете му, като им каза: Плодете се, размножавайте се и напълнете земята.
2 ೨ ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
Ще се страхуват и ще треперят от вас всички земни животни и всички въздушни птици; те са всичко, що пълзи по земята и с всички земни риби са предадени в ръцете ви.
3 ೩ ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
Всичко живо, що се движи ще ви бъде за храна; давам ви всичко също, както дадох зелената трева.
4 ೪ ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.
Месо обаче с живота му, тоест, с кръвта му, да не ядете.
5 ೫ ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
А вашата кръв, кръвта на живота ви, непременно ще изискам; от всяко животно ще я изискам; и от човека, да! от брата на всеки човек, ще изискам живота на човека.
6 ೬ ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
Който пролее човешка кръв, и неговата кръв от човек ще се пролее; защото по Своя образ направи Бог човека.
7 ೭ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.
А вие, плодете се и се размножавайте, разплодете се по земята и умножавайте се по нея.
8 ೮ ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,
После Бог говори на Ноя и на синовете му с него, казвайки:
9 ೯ “ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.
Вижте, Аз поставям завета Си с вас и с потомството ви подир вас;
10 ೧೦ ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.
и всичко живо, що е с вас, - птиците, добитъкът и всичките земни животни, които са с вас, да! с всяко земно животно от всичко, което е излязло от ковчега.
11 ೧೧ ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.
Поставям завета Си с вас, че няма да се изтреби вече никоя твар от водите на потопа, нито ще настане вече потоп да опустоши земята.
12 ೧೨ ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.
Бог рече още: Ето белегът на завета, който Аз поставям до вечни поколения между Мене и вас и всичко живо, което е с вас:
13 ೧೩ ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
поставям дъгата Си в облака, и тя ще бъде белег на завет между Мене и земята.
14 ೧೪ ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು.
Когато докарам облак на земята, дъгата ще се яви в облака:
15 ೧೫ ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
и ще спомня завета Си, който е между мене и вас и всичко живо от всяка твар; и водата няма вече да стане потоп за изтреблението на всяка твар.
16 ೧೬ ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.
Дъгата ще бъде в облака: и ще я гледам, за да си напомням всегдашния завет между Бога и всичко живо от всяка твар, което е на земята.
17 ೧೭ ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.
Каза Бог на Ноя: Това е белегът на завета, който установих между мене и всяка твар, която е на земята.
18 ೧೮ ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.
А излезлите от ковчега Ноеви синове бяха Сим, Хам и Яфет; а Хам беше баща на Ханаана.
19 ೧೯ ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.
Тия трима бяха Ноевите синове; и от тях се насели цялата земя.
20 ೨೦ ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.
В това време Ной почна да работи земята и насади лозе.
21 ೨೧ ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
като пи от виното опи се и се разголи в шатрата си.
22 ೨೨ ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.
И Хам, Ханаановия баща, видя голотата на баща си и каза на двамата си братя отвън.
23 ೨೩ ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.
А Сим и Яфет взеха една дреха и, като я туриха двамата на рамената си, пристъпиха заднишком та покриха голотата на баща си; лицата им гледаха назад, та не видяха бащината си голота.
24 ೨೪ ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು,
Като изтрезня Ной от виното си и се научи за онова, което му бе направил по-младият ме син, рече:
25 ೨೫ “ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು.
Проклет да е Ханаан; Слуга на слуги ще бъде на братята си.
26 ೨೬ ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.
Рече още: Благословен Господ, Симовия Бог; И Ханаан да му бъде слуга.
27 ೨೭ ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು.
Бог да разшири Яфета. И да се засели в шатрите на Сима; И Ханаан да им бъде слуга.
28 ೨೮ ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರ್ಷ ಬದುಕಿದನು.
И след потопа Ной живя триста и петдесет години.
29 ೨೯ ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು.
И всичките дни на Ноя станаха деветстотин и петдесет години; и умря.