< ಹಬಕ್ಕೂಕನು 1 >
1 ೧ ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ.
Pa inge mwe fahkak su LEUM GOD El akkalemye nu sin mwet palu Habakkuk.
2 ೨ ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.
O LEUM GOD, lusa kac pacl nga ac pang in suk kasru na kom fah lohngyu, ac nga ac tung putaka na kom fah molikutla liki mwe keok?
3 ೩ ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.
Efu ku kom oru ngan liye kain in mwe lokoalok inge? Efu ku kom ku in muteng kain orekma sufal inge? Mwe kunausla ac mwe keok rauniyuyak, ac oasr amei ac anwuk orek yen nukewa.
4 ೪ ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.
Ma sap uh munasla ac wanginla sripa, ac nununku suwohs tiana orek. Mwet koluk uh kutangla mwet wo, ouinge nununku suwohs ikilyukelik.
5 ೫ ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.
Na LEUM GOD El fahk nu sin mwet lal, “Suiyana mutunfacl su raunikowosyak, ac kowos fah fwefela ke ma kowos liye. Nga ac oru sie ma, ac kowos ac tia lulalfongi ke kowos ac lohngak uh.
6 ೬ ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.
Nga ac sang ku nu sin mwet Babylonia tuh elos in leumi mutunfacl uh. Mwet inge mwet na sulallal ac irpit. Elos oatula som sasla faclu in kutangla acn saya.
7 ೭ ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.
Elos akyokyelik sangeng ac tuninfong, ac in nunak fulat lalos elos tiana akilen kutena ma sap sayen ma elos lungse oru.
8 ೮ ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.
“Horse natulos uh mui liki kosro leopard, ac sulallal liki wolf masrinsralla uh. Mwet kasrusr fin horse lalos tuku yen loesla me. Horse natulos kihling infohk uh. Elos pwesroulme oana luman won eagle ke elos putati in sruokya ma nalos.
9 ೯ ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.
“Mwet mweun lalos sikla ac sulallal in anwuk, ac mwet e nukewa elos tuninfongla ke elos ac sikme uh. Pisen mwet elos sruokya uh pukanten oana puhk uh.
10 ೧೦ ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.
Elos aklusrongtenye tokosra uh ac isrun mwet leum. Wangin pot ku ac ku in sikululosi — elos ac yolsani fohk uh nu pe pot uh, fanyak kac ac eisla acn uh.
11 ೧೧ ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.
Na elos ac tuhyak oana eng uh sasla som. Mwet inge oru mu ku lalos uh pa god lalos.”
12 ೧೨ ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.
O LEUM GOD, nuna kom na pa God oe ke mutawauk ah me. Kom God luk, su mutal ac moul ma pahtpat. LEUM GOD luk ac Mwet Lango luk, kom sulela mwet Babylonia ac sang ku nu selos elos in mau ku in kalyei kut.
13 ೧೩ ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?
Tusruktu, efu ku kom ku in muteng orekma lun mwet koluk inge? Motom arulana mutalla in liye ma koluk, ac kom arulana srunga liye ke mwet uh oru ma koluk. Ke ma inge efu ku kom mislana ke elos kunausla mwet su arulana suwohs lukelos?
14 ೧೪ ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ?
Efu ku kom ku in oru mwet uh oana ik uh, ku oana ma orakrak ma wangin leum lalos?
15 ೧೫ ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?
Mwet Babylonia orekmakin ka in sruokya mwet uh, oana ik uh. Elos amakunulos in nwek natulos, ac sasa ke engankinyen ma elos sruokya!
16 ೧೬ ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.
Elos alyalu pacna nu ke nwek natulos ac orek kisa nu kac, mweyen nwek natulos uh pa sang mwe insewowo nu selos.
17 ೧೭ ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
Ya elos ac orekmakinna cutlass natulos nwe tok, ac nuna kunausna mutanfahl uh ac tia pakomuta?