< ಹಬಕ್ಕೂಕನು 2 >

1 ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು. ಯೆಹೋವನು ನನಗೆ ಏನು ಹೇಳುವನೋ ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರ ಕೊಡಬೇಕೋ ಎಂದು ಎದುರುನೋಡುವೆನು ಅಂದುಕೊಂಡನು.
super custodiam meam stabo et figam gradum super munitionem et contemplabor ut videam quid dicatur mihi et quid respondeam ad arguentem me
2 ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, “ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು!
et respondit mihi Dominus et dixit scribe visum et explana eum super tabulas ut percurrat qui legerit eum
3 ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.
quia adhuc visus procul et apparebit in finem et non mentietur si moram fecerit expecta illum quia veniens veniet et non tardabit
4 ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.
ecce qui incredulus est non erit recta anima eius in semet ipso iustus autem in fide sua vivet
5 ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು. (Sheol h7585)
et quomodo vinum potantem decipit sic erit vir superbus et non decorabitur qui dilatavit quasi infernus animam suam et ipse quasi mors et non adimpletur et congregabit ad se omnes gentes et coacervabit ad se omnes populos (Sheol h7585)
6 “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’
numquid non omnes isti super eum parabolam sument et loquellam enigmatum eius et dicetur vae ei qui multiplicat non sua usquequo et adgravat contra se densum lutum
7 ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು.
numquid non repente consurgent qui mordeant te et suscitabuntur lacerantes te et eris in rapinam eis
8 ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.
quia tu spoliasti gentes multas spoliabunt te omnes qui reliqui fuerint de populis propter sanguinem hominis et iniquitatem terrae civitatis et omnium habitantium in ea
9 ‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;
vae qui congregat avaritiam malam domui suae ut sit in excelso nidus eius et liberari se putat de manu mali
10 ೧೦ ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ.
cogitasti confusionem domui tuae concidisti populos multos et peccavit anima tua
11 ೧೧ ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’
quia lapis de pariete clamabit et lignum quod inter iuncturas aedificiorum est respondebit
12 ೧೨ ‘ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟುವವನೂ, ಊರನ್ನು ಅನ್ಯಾಯದಿಂದ ಸ್ಥಾಪಿಸುವವರ ಗತಿಯನ್ನು ಏನು ಹೇಳಲಿ!
vae qui aedificat civitatem in sanguinibus et praeparat urbem in iniquitate
13 ೧೩ ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.
numquid non haec a Domino sunt exercituum laborabunt enim populi in multo igni et gentes in vacuum et deficient
14 ೧೪ ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’
quia replebitur terra ut cognoscat gloriam Domini quasi aquae operientes mare
15 ೧೫ ‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!
vae qui potum dat amico suo mittens fel suum et inebrians ut aspiciat nuditatem eius
16 ೧೬ ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.
repletus est ignominia pro gloria bibe tu quoque et consopire circumdabit te calix dexterae Domini et vomitus ignominiae super gloriam tuam
17 ೧೭ ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.
quia iniquitas Libani operiet te et vastitas animalium deterrebit eos de sanguinibus hominis et iniquitate terrae et civitatis et omnium habitantium in ea
18 ೧೮ ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’
quid prodest sculptile quia sculpsit illud fictor suus conflatile et imaginem falsam quia speravit in figmento fictor eius ut faceret simulacra muta
19 ೧೯ ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.
vae qui dicit ligno expergiscere surge lapidi tacenti numquid ipse docere poterit ecce iste coopertus est auro et argento et omnis spiritus non est in visceribus eius
20 ೨೦ ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”
Dominus autem in templo sancto suo sileat a facie eius omnis terra

< ಹಬಕ್ಕೂಕನು 2 >