< ಹಬಕ್ಕೂಕನು 2 >
1 ೧ ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು. ಯೆಹೋವನು ನನಗೆ ಏನು ಹೇಳುವನೋ ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರ ಕೊಡಬೇಕೋ ಎಂದು ಎದುರುನೋಡುವೆನು ಅಂದುಕೊಂಡನು.
और मैं अपनी दीदगाह पर खड़ा रहूँगा और बुर्ज पर चढ़कर इन्तिज़ार करूँगा कि वह मुझ से क्या कहता है, और मैं अपनी फ़रियाद के बारे में क्या जवाब दूँ।
2 ೨ ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, “ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು!
तब ख़ुदावन्द ने मुझे जवाब दिया और फ़रमाया कि “ख्व़ाब को तख़्तियों पर ऐसी सफ़ाई से लिख कि लोग दौड़ते हुए भी पढ़ सकें।
3 ೩ ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.
क्यूँकि ये ख़्वाब एक मुक़र्ररा वक़्त के लिए है; ये जल्द ज़हूर में आएगा और ख़ता न करेगा। अगरचे इसमें देर हो, तोभी इसके इन्तिज़ार में रह, क्यूँकि ये यक़ीनन नाज़िल होगा, देर न करेगा।
4 ೪ ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.
देख, घमण्डी आदमी का दिल रास्त नहीं है, लेकिन सच्चा अपने ईमान से ज़िन्दा रहेगा।
5 ೫ ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು. (Sheol )
बेशक, घमण्डी आदमी शराब की तरह दग़ाबाज़ है, वह अपने घर में नहीं रहता। वह पाताल की तरह अपनी ख़्वाहिश बढ़ाता है; वह मौत की तरह है, कभी आसूदा नहीं होता; बल्कि सब क़ौमों को अपने पास जमा' करता है, और सब उम्मतों को अपने नज़दीक इकठ्ठा करता है।” (Sheol )
6 ೬ “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’
क्या ये सब उस पर मिसाल न लाएँगे, और तनज़न न कहेंगे कि “उस पर अफ़सोस, जो औरों के माल से मालदार होता है, लेकिन ये कब तक? और उस पर जो कसरत से गिरवी लेता है।”
7 ೭ ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು.
क्या वह मुझे खा जाने को अचानक न उठेंगे, और तुझे परेशान करने को बेदार न होंगे, और उनके लिए लूट न होगा?
8 ೮ ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.
क्यूँकि तूने बहुत सी क़ौमों को लूट लिया, और मुल्क — ओ — शहर — ओ — बाशिंदों में खू़ँरेज़ी और सितमगरी की है, इसलिए बाक़ी माँदा लोग तुझे ग़ारत करेंगे।
9 ೯ ‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;
“उस पर अफ़सोस जो अपने घराने के लिए नाजायज़ नफ़ा' उठाता है, ताकि अपना आशियाना बुलन्दी पर बनाये, और मुसीबत से महफ़ूज़ रहे।
10 ೧೦ ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ.
तूने बहुत सी उम्मतों को बर्बाद करके अपने घराने के लिए रुसवाई हासिल की, और अपनी जान का गुनहगार हुआ।
11 ೧೧ ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’
क्यूँकि दीवार से पत्थर चिल्लायेंगे, और छत से शहतीर जवाब देंगे।
12 ೧೨ ‘ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟುವವನೂ, ಊರನ್ನು ಅನ್ಯಾಯದಿಂದ ಸ್ಥಾಪಿಸುವವರ ಗತಿಯನ್ನು ಏನು ಹೇಳಲಿ!
उस पर अफ़सोस, जो क़स्बे को खू़ँरेज़ी से और शहर को बादकिरदारी से ता'मीर करता है!
13 ೧೩ ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.
क्या यह रब्ब — उल — अफ़्वाज की तरफ़ से नहीं कि लोगों की मेहनत आग के लिए हो, और क़ौमों की मशक़्क़त बतालत के लिए हो?
14 ೧೪ ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’
क्यूँकि जिस तरह समन्दर पानी से भरा है, उसी तरह ज़मीन ख़ुदावन्द के जलाल के 'इल्म से मा'मूर है।
15 ೧೫ ‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!
उस पर अफ़सोस जो अपने पड़ोसी को अपने क़हर का जाम पिलाकर मतवाला करता है, ताकि उसको बे पर्दा करे!
16 ೧೬ ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.
तू 'इज़्ज़त के 'इवज़ रुसवाई से भर गया है। तू भी पीकर अपनी नामख़्तूनी ज़ाहिर कर! ख़ुदावन्द के दहने हाथ का प्याला अपने दौर में तुझ तक पहुँचेगा, और रुसवाई तेरी शौकत को ढाँप लेगी।
17 ೧೭ ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.
चूँकि तूने मुल्क — ओ — शहर — ओ — बाशिन्दों में खूँरेज़ी और सितमगरी की है, इसलिए वह ज़ियादती जो लुबनान पर हुई और वह हलाकत जिसमें जानवर डर गए, तुझ पर आएगी।
18 ೧೮ ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’
खोदी हुई मूरत से क्या हासिल कि उसके बनाने वाले ने उसे खोदकर बनाया? ढली हुई मूरत और झूट सिखाने वाले से क्या फ़ायदा कि उसका बनाने वाला उस पर भरोसा रखता और गूँगे बुतों को बनाता है?
19 ೧೯ ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.
उस पर अफ़सोस जो लकड़ी से कहता है, जाग, और बे ज़बान पत्थर से कि उठ, क्या वह ता'लीम दे सकता है? देख वह तो सोने और चाँदी से मढ़ा है लेकिन उसमें कुछ भी ताक़त नहीं।
20 ೨೦ ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”
मगर ख़ुदावन्द अपनी मुक़द्दस हैकल में है; सारी ज़मीन उसके सामने ख़ामोश रहे।”