< ಹಬಕ್ಕೂಕನು 3 >
1 ೧ ಶಿಗ್ಯೋನೋತ್ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ.
シギヨノテの調べによる、預言者ハバククの祈。
2 ೨ ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.
主よ、わたしはあなたのことを聞きました。主よ、わたしはあなたのみわざを見て恐れます。この年のうちにこれを新たにし、この年のうちにこれを知らせてください。怒る時にもあわれみを思いおこしてください。
3 ೩ ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; (ಸೆಲಾ) ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;
神はテマンからこられ、聖者はパランの山からこられた。その栄光は天をおおい、そのさんびは地に満ちた。 (セラ)
4 ೪ ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.
その輝きは光のようであり、その光は彼の手からほとばしる。かしこにその力を隠す。
5 ೫ ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ.
疫病はその前に行き、熱病はその後に従う。
6 ೬ ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.
彼は立って、地をはかり、彼は見て、諸国民をおののかせられる。とこしえの山は散らされ、永遠の丘は沈む。彼の道は昔のとおりである。
7 ೭ ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.
わたしが見ると、クシャンの天幕に悩みがあり、ミデアンの国の幕は震う。
8 ೮ ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!
主よ、あなたが馬に乗り、勝利の戦車に乗られる時、あなたは川に向かって怒られるのか。川に向かって憤られるのか。あるいは海に向かって立腹されるのか。
9 ೯ ನಿನ್ನ ಬಿಲ್ಲು ಈಚೆಗೆ ತೆಗೆಯಲ್ಪಟ್ಟಿದೆ. ಆಹಾ, ನಿನ್ನ ತೋಳ್ಬಲದಿಂದ ಪ್ರಯೋಗಿಸಿದ ಬಾಣಗಳ ಬಲವು ಜೀವಬುಗ್ಗೆಯನ್ನು ಭೂಮಿಯೊಳಗಿನಿಂದ ಹರಿದು ಬರುವಂತೆ ಮಾಡಿತು. (ಸೆಲಾ)
あなたの弓は取り出された。矢は、弦につがえられた。[セラ あなたは川をもって地を裂かれた。
10 ೧೦ ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.
山々はあなたを見て震い、荒れ狂う水は流れいで、淵は声を出して、その手を高くあげた。
11 ೧೧ ಹಾರಿ ಬರುವ ನಿನ್ನ ಬಾಣಗಳ ಬೆಳಕಿಗೆ, ಮಿಂಚುವ ನಿನ್ನ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.
飛び行くあなたの矢の光のために、電光のようにきらめく、あなたのやりのために、日も月もそのすみかに立ち止まった。
12 ೧೨ ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ.
あなたは憤って地を行きめぐり、怒って諸国民を踏みつけられた。
13 ೧೩ ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. (ಸೆಲಾ)
あなたはあなたの民を救うため、あなたの油そそいだ者を救うために出て行かれた。あなたは悪しき者の頭を砕き、彼を腰から首まで裸にされた。 (セラ)
14 ೧೪ ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ
あなたはあなたのやりで将軍の首を刺しとおされた。彼らはわたしを散らそうとして、つむじ風のように来、貧しい者をひそかに、のみ滅ぼすことを楽しみとした。
15 ೧೫ ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ.
あなたはあなたの馬を使って、海と大水のさかまくところを踏みつけられた。
16 ೧೬ ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.
わたしは聞いて、わたしのからだはわななき、わたしのくちびるはその声を聞いて震える。腐れはわたしの骨に入り、わたしの歩みは、わたしの下によろめく。わたしはわれわれに攻め寄せる民の上に悩みの日の臨むのを静かに待とう。
17 ೧೭ ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
いちじくの木は花咲かず、ぶどうの木は実らず、オリブの木の産はむなしくなり、田畑は食物を生ぜず、おりには羊が絶え、牛舎には牛がいなくなる。
18 ೧೮ ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.
しかし、わたしは主によって楽しみ、わが救の神によって喜ぶ。
19 ೧೯ ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
主なる神はわたしの力であって、わたしの足を雌じかの足のようにし、わたしに高い所を歩ませられる。これを琴に合わせ、聖歌隊の指揮者によって歌わせる。