< ಹಗ್ಗಾಯನು 1 >
1 ೧ ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.
राजा दारयावेश के शासनकाल के द्वितीय वर्ष के छठवें महीने के पहले दिन शिअलतिएल के पुत्र यहूदिया के राज्यपाल ज़ेरुब्बाबेल, तथा यहोत्सादाक के पुत्र महापुरोहित यहोशू के पास याहवेह का यह वचन हाग्गय भविष्यवक्ता के द्वारा पहुंचा:
2 ೨ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.
सर्वशक्तिमान याहवेह का यह कहना है: “ये लोग कहते हैं, ‘याहवेह के भवन के पुनर्निर्माण का समय अभी नहीं आया है.’”
3 ೩ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು,
तब हाग्गय भविष्यवक्ता के द्वारा याहवेह का यह वचन आया:
4 ೪ “ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?”
“क्या यह समय है कि तुम खुद पक्के, भव्य घरों में रहो, और यह भवन उजाड़ पड़ा रहे?”
5 ೫ ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
तब सर्वशक्तिमान याहवेह का यह कहना है: “अपने चालचलन पर सावधानीपूर्वक ध्यान दो.
6 ೬ ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”
तुमने बोया तो बहुत, पर तुम्हें फसल थोड़ी मिली. तुम खाते तो हो, किंतु तुम्हारा पेट कभी नहीं भरता. तुम पीते तो हो, किंतु तुम्हारी प्यास कभी नहीं बुझती. तुम कपड़े पहनते तो हो, किंतु तुम्हें उससे गर्मी नहीं मिलती. तुम मजदूरी तो कमाते हो, किंतु यह कैसे खर्च हो जाती है तुम्हें पता भी नहीं चलता.”
7 ೭ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
सर्वशक्तिमान याहवेह का यह कहना है: “अपने चालचलन पर सावधानीपूर्वक ध्यान दो.
8 ೮ ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.
ऊपर पहाड़ों में जाओ और इमारती लकड़ी नीचे लाकर मेरे भवन को बनाओ, ताकि मुझे खुशी मिले और मेरा आदर हो,” याहवेह का कहना है.
9 ೯ ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”
“तुमने बहुत फसल पाने की आशा की थी, पर थोड़ा ही मिला. और जब तुम उसे लेकर घर आए, तो मैंने उसे उड़ा दिया. क्यों?” सर्वशक्तिमान याहवेह का कहना है. “क्योंकि मेरा भवन उजाड़ पड़ा है, और तुममें से हर एक अपने-अपने घर में व्यस्त है.
10 ೧೦ ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;
इसलिये, तुम्हारे कारण ही आकाश ने ओस और भूमि ने उपज पैदा करना रोक दिया है.
11 ೧೧ ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.
मैंने आदेश दिया है कि खेतों और पहाड़ों पर, अनाज, नये अंगूर की दाखमधु, जैतून तेल और भूमि की हर एक उपज पर, लोगों और घरेलू पशुओं पर, और तुम्हारे सब मेहनत पर अकाल पड़े.”
12 ೧೨ ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
तब शिअलतिएल के पुत्र ज़ेरुब्बाबेल, यहोत्सादाक का पुत्र महापुरोहित यहोशू, और सब बचे हुए लोगों ने याहवेह, अपने परमेश्वर के वचन और हाग्गय भविष्यवक्ता के संदेश का पालन किया, क्योंकि याहवेह उनके परमेश्वर ने उसे भेजा था. और लोगों ने याहवेह का भय माना.
13 ೧೩ ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”
तब याहवेह के संदेशवाहक हाग्गय ने लोगों को याहवेह का यह संदेश दिया: “मैं तुम्हारे साथ हूं,” याहवेह घोषणा करते हैं.
14 ೧೪ ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,
तब याहवेह ने यहूदिया के राज्यपाल शिअलतिएल के पुत्र ज़ेरुब्बाबेल, और यहोत्सादाक के पुत्र महापुरोहित यहोशू तथा सारे बचे हुए लोगों की आत्मा को उभारा. वे सब आये और सर्वशक्तिमान याहवेह, अपने परमेश्वर के भवन के निर्माण का कार्य शुरू किए,
15 ೧೫ ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.
और यह कार्य राजा दारयावेश के शासनकाल के छठवें महीने के चौबीसवें दिन शुरू हुआ. दारयावेश के शासनकाल के दूसरे वर्ष,