< ಹಗ್ಗಾಯನು 2 >
1 ೧ ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು,
Siódmego miesiąca, dwudziestego i pierwszego dnia tegoż miesiąca stało się słowo Pańskie przez Aggieusza proroka, mówiąc:
2 ೨ “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
Mów teraz do Zorobabela, syna Salatyjelowego, książęcia Judzkiego, i do Jesuego, syna Jozedekowego, kapłana najwyższego, i do ostatku ludu, mówiąc:
3 ೩ ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’
Któż między wami pozostał, co widział ten dom w sławie pierwszej jego? I jaki wy teraz widzicie? Izali nie jest przeciwko onemu jako nic w oczach waszych?
4 ೪ ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
Jednak teraz zmocnij się Zorobabelu! mówi Pan; zmocnij się, Jesue, synu Jozedekowy, kapłanie najwyższy! zmocnij się też wszystek ludu tej ziemi, mówi Pan, a róbcie; bom Ja z wami, mówi Pan zastępów,
5 ೫ ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
Według słowa, któremem przymierze uczynił z wami, gdyście wychodzili z Egiptu; duch także mój stanie w pośrodku was, nie bójcież się.
6 ೬ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
Bo tak mówi Pan zastępów: Oto Ja jeszcze raz, a to po małym czasie, poruszę niebem i ziemią, i morzem i suchą;
7 ೭ ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Poruszę, mówię, wszystkie narody, i przyjdą do Pożądanego od wszystkich narodów; i napełnię ten dom chwałą, mówi Pan zastępów.
8 ೮ ‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Mojeć jest srebro, i moje złoto, mówi Pan zastępów.
9 ೯ ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Większa będzie sława domu tego pośledniego, niż onego pierwszego, mówi Pan zastępów; bo na tem miejscu dam pokój, mówi Pan zastępów.
10 ೧೦ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.
Dwudziestego i czwartego dnia, dziewiątego miesiąca, roku wtórego Daryjusza, stało się słowo Pańskie przez Aggieusza proroka, mówiąc:
11 ೧೧ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,
Tak mówi Pan zastępów: Pytaj się teraz kapłanów o zakon, mówiąc:
12 ೧೨ ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
Gdyby kto niósł mięso poświęcone w podołku sukni swej, alboby się dotknął podołkiem swoim chleba, albo potrawy, albo wina, albo oliwy, albo wszelkiego pokarmu, izali się poświęci? I odpowiedzieli kapłani a rzekli: Nie.
13 ೧೩ ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.
Tedy rzekł Aggieusz: Jeźli kto będąc nieczysty od trupa, dotknąłby się czego z tych rzeczy, będzieli nieczyste? I odpowiedzieli kapłani i rzekli: Będzie nieczyste.
14 ೧೪ ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
Tedy odpowiadając Aggieusz rzekł: Takci lud ten, tak i naród ten przed obliczem mojem, mówi Pan, tak i wszystka sprawa rąk ich, i cokolwiek tam ofiarowali, nieczyste było.
15 ೧೫ “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
A tak uważajcież, proszę, jako się wam powodziło od tego dnia aż do onego, kiedy przestano kłaść kamienia na kamieniu w kościele Pańskim;
16 ೧೬ ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
Od tego czasu, gdy kto przyszedł do gromady zboża, od dwudziestu korcy znalazł dziesięć; gdy przyszedł do prasy, aby naczerpał pięćdziesiąt wiader wina, znalazł tylko dwadzieścia;
17 ೧೭ ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
Karałem was zarazą zbóż i rdzą, i gradem wszystkie prace rąk waszych; wszakże żaden z was nie wrócił się do mnie, mówi Pan.
18 ೧೮ “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
Uważajcież teraz ode dnia tego aż do onego, ode dnia dwudziestego i czwartego miesiąca dziewiątego aż do dnia, którego był założony kościół Pański, uważajcie, mówię:
19 ೧೯ ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
Izali jeszcze jest nasienie w szpichlerzu? I owszem, ani macica winna, ani figowe ani granatowe ani oliwne drzewo nie wydały owocu; lecz ode dnia tego będę błogosławił.
20 ೨೦ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,
Potem stało się słowo Pańskie powtóre do Aggieusza dnia dwudziestego i czwartego tegoż miesiąca, mówiąc:
21 ೨೧ “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
Mów do Zorobabela, książęcia Judzkiego, a rzecz: Ja poruszę niebiosa i ziemię;
22 ೨೨ ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”
I podwrócę stolice królestw, i zepsuję moc królestw pogańskich; podwrócę, mówię, wóz, i tych, którzy na nim jeżdżą, i upadną konie i jeżdżący na nich, każdy od miecza brata swego.
23 ೨೩ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.
W on dzień, mówi Pan zastępów, wezmę cię, Zorobabelu, synu Salatyjelowy, sługo mój! mówi Pan, i uczynię cię jako sygnet; albowiem wybrałem cię, mówi Pan zastępów.