< ಇಬ್ರಿಯರಿಗೆ ಬರೆದ ಪತ್ರಿಕೆ 13 >
1 ೧ ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.
Basi ulugano lwa lukalo luleendelee.
2 ೨ ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
Musite ukhusamwa ukhuva karibisya avageni manya pakhi vomba ewo, vingi vavakalibisye avasungwa bila kulumanya.
3 ೩ ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
Khumbukha voni avali mli khifungo avange mkhale navo, nage mivili gwenyo gwa vombeliwe nda vene.
4 ೪ ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
Nidova uvutegulane vudwadiwage na vanu voni nei eikhihaga khwa vutegulane kheve safi, pakhuva uNguluve ukhuvahiga voni avaligu na vamalaya.
5 ೫ ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
Injila n'chinyo n'cha vutamo n'chive nomu mundu gano lwa hela mve vanu vakhulisekha neifinu ifi mule na fyo. Pakhuva uNguluve vioyu achovile, “Sanikhuvalegha umwe nukhuva yan'cha.”
6 ೬ ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
Basi mulisekhe pu tun'chovage na makha u Daada vintangeli vango sanidwadaga. Umunu ei khungaha khekhi?”
7 ೭ ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.
Muvasayilagevala avakhavalongo n'chaga avakhan'chovaga elimenyu lya Nguluve khuluemwe, hange mkumbukhage ulugendo ne migendelo gwa vene, ei gila einyedikho n'cha vene.
8 ೮ ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು. (aiōn )
UYesu Klisiti vi ula pamihe nei lelo, ni sikhu nchooni. (aiōn )
9 ೯ ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
Usite ukhulongonchiwa nu lumanyisyo amageni lunonu inumbula n'chinchengiwe mkhisa sio ndulagilo lwa kya kyulura, ago sagiokhu vatanga avitama mwago.
10 ೧೦ ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.
Tulinakyo eikhite khelo kya vala ava vivomba mugati mutembile vi n'chila luhusa ulwa khulya.
11 ೧೧ ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.
Khunjila ya mikisa gwa fikanu n'chi humen'chiwe nekhelo khunjila yavo tulanongwa, yaletiwe nutekhaen'chi mugati muvavalan'che, neimiviili gya chene gwanyanywe panjika palikambi.
12 ೧೨ ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.
Nayu Yesu atesikhe panji pavo jenge ili yevenekhelo khuvanu ukhugendela mukisa gwa mwene.
13 ೧೩ ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.
Pu uno tulutage panji pavu n'chenge, tukhagege ulubeelo lwa mwene.
14 ೧೪ ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.
Pakhuva tuvan'chila vutamo uwa sikhu inyingi pakhilunga eihe. Khunjila eiye tulonde uvun'chenge uvuvukhwin'cha.
15 ೧೫ ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
Ukhugendela khwa Yesu yinofiwa khila misekhi ukhwihomwa nekelo khwa Nguluve, tuginieage tukave isekhen'cha milomo gyeto, n'cheidekhe eilitawa lya mwene.
16 ೧೬ ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
Usite ukhusanwa ukhuvomba amanonu, nukhutanga yumwe khwa yumwe. Pakhuva einekhelo ndeiyo uNguluve inogwa fin'cho.
17 ೧೭ ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
Mwidekhage nu khwikha pasi pavalongon'chi venyo, pakhuva vigendelela ukhudema inumbula n'chenyo, ndavanu avavihumya eimbalilo n'chenyo. Eidekha pu avalongon'chi venyo vavalongon'cha nulu hekhelo, sio nuluvipo ulusalu khi vatanga.
18 ೧೮ ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.
Tweisayage pakhuva tulumanyile ukhuta tulinamasage amanonu, twinogwa uvutamo uvunonu neili sima pa mbombo n'choni.
19 ೧೯ ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.
Gooni nikhuvapa amaga muvombe n'chi ili muvuye khumonyo khimbeve.
20 ೨೦ ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. (aiōn , aiōnios )
Leno uNguluve valugano uvei avagegile ukhuma khuvufye undongon'chi umbaha va ng'osi, Bwana veito Yesu, Klisite khunjila ya ndagano ya sikhun'choni, (aiōnios )
Ukhuvapa amakha gakhila mbombo ei nonu, nukhukonga indagilo n'cha mwene, nukhuvomba eimbombo ei nonu igati ndyufye, eiye nogile pamiho ga mwene, ukhugendela khwa Yesu Klisite, khu mwene vuve vuvalanche wa sikhun'choni. Amina. (aiōn )
22 ೨೨ ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.
Lino nikhukhupa amakha lukolo lwango, ukhukongana nei limenyu lya khukhupa amakha lilyo nesi mbile lesopi khuliumwe.
23 ೨೩ ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
Mulumanye ukhuta ulukolo lwenyu u Timoti vandekhile mumbwa vukhe paninie numwene ni khwi n'cha khukhuva vona usikhe gunga fikhe.
24 ೨೪ ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.
Ponwa avalongon'chi vakho voninava kelesite voni. Vala avavihuma khuu itali vikhuva ponwa.
25 ೨೫ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
Uluhekhelo luve numwene mwe voni.