< ಇಬ್ರಿಯರಿಗೆ ಬರೆದ ಪತ್ರಿಕೆ 2 >

1 ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
Vậy, chúng ta phải giữ vững những chân lý đã nghe để khỏi bị lôi cuốn, trôi giạt.
2 ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.
Nếu những lời thiên sứ rao truyền đã là những mệnh lệnh bắt buộc, mọi người vi phạm, bất tuân đều bị trừng phạt đích đáng thì
3 ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
chúng ta làm sao thoát khỏi hình phạt, một khi khước từ ơn cứu rỗi lớn lao này? Chính Chúa đã công bố sứ điệp cứu rỗi này trước hết, rồi các môn đệ Ngài truyền lại cho chúng ta.
4 ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.
Đức Chúa Trời cũng đã xác nhận sứ điệp bằng những dấu lạ, phép lạ và việc quyền năng, cùng ban các ân tứ Thánh Linh cho mỗi người tùy theo ý muốn Ngài.
5 ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.
Đức Chúa Trời không đem thế giới tương lai đặt dưới quyền các thiên sứ.
6 “ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?
Như có trong Kinh Thánh chép: “Loài người là gì mà Chúa nhớ đến, con loài người là ai mà Chúa săn sóc?
7 ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
Chúa tạo người chỉ kém thiên sứ một chút, đội lên đầu danh dự và vinh quang.
8 ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.
Bắt vạn vật phục dưới chân người.” Khi bảo vạn vật phục con người, Đức Chúa Trời chẳng miễn trừ một vật nào. Hiện nay ta chưa thấy vạn vật phục con người.
9 ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.
Tuy nhiên, đem lời ấy áp dụng cho Chúa Giê-xu thật đúng: Ngài đã chịu xuống thấp hơn các thiên sứ một bực, nhưng Ngài đã hy sinh, nên được đội vương miện vinh quang và danh dự. Do ơn phước của Đức Chúa Trời, Chúa Giê-xu đã chịu chết để cứu rỗi mọi người.
10 ೧೦ ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
Đức Chúa Trời là Đấng sáng tạo và bảo tồn vạn vật đã khiến Chúa Giê-xu chịu khổ nạn để hoàn thành sự cứu rỗi. Điều đó thật hợp lý, vì nhờ đó Ngài dìu dắt nhiều người vào cuộc sống vinh quang.
11 ೧೧ ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
Đấng thánh hóa loài người, và những người được thánh hóa đều là con một Cha. Nên Chúa Giê-xu không ngại mà gọi họ là anh chị em.
12 ೧೨ “ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,
Ngài phán: “Con sẽ truyền Danh Chúa cho anh chị em con; giữa hội chúng dâng lời ca ngợi Chúa.”
13 ೧೩ “ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ.
Ngài còn phán: “Con sẽ tin cậy Ngài,” và: “Này, Ta đây, cùng với các con cái Đức Chúa Trời đã ban cho Ta.”
14 ೧೪ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
Vì con cái Đức Chúa Trời là người bằng xương thịt và máu, nên Chúa Giê-xu cũng đã nhập thể làm người. Ngài chịu chết để chiến thắng ma quỷ, vua sự chết.
15 ೧೫ ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.
Ngài cũng giải cứu những người vì sợ chết, buộc lòng làm nô lệ suốt đời.
16 ೧೬ ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ.
Hiển nhiên Chúa Giê-xu không trở thành thiên sứ, nhưng Ngài đã thành người, làm hậu tự Áp-ra-ham.
17 ೧೭ ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.
Chúa trở nên giống như ta, là anh chị em Ngài, về mọi phương diện, để làm Thầy Thượng Tế thương xót, trung thành trước mặt Đức Chúa Trời, chuộc tội cho mọi người.
18 ೧೮ ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
Vì Chúa từng chịu thống khổ khi đương đầu với các cơn cám dỗ, nên Ngài có thể giải cứu những người đang bị màng lưới cám dỗ vây quanh.

< ಇಬ್ರಿಯರಿಗೆ ಬರೆದ ಪತ್ರಿಕೆ 2 >