< ಇಬ್ರಿಯರಿಗೆ ಬರೆದ ಪತ್ರಿಕೆ 3 >
1 ೧ ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
Therefore, holy brothers, you share in a heavenly calling. Think about Jesus, the apostle and high priest of our confession.
2 ೨ ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.
He was faithful to God, who appointed him, just as Moses was also faithful in God's house.
3 ೩ ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.
For Jesus has been considered worthy of greater glory than Moses, because the one who builds a house has more honor than the house itself.
4 ೪ ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.
For every house is built by someone, but the one who built everything is God.
5 ೫ ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.
For Moses was faithful as a servant in God's entire house, bearing witness about the things that were to be spoken of in the future.
6 ೬ ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
But Christ is faithful as a Son who is in charge of God's house. We are his house if we hold fast to our courage and the hope of which we boast.
7 ೭ ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,
Therefore, it is just as the Holy Spirit says: “Today, if you hear his voice
8 ೮ ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
do not harden your hearts as in the rebellion, in the time of testing in the wilderness.
9 ೯ ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.
This was when your ancestors rebelled by testing me, and when, during forty years, they saw my deeds.
10 ೧೦ ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.
Therefore I was displeased with that generation. I said, 'They have always gone astray in their hearts. They have not known my ways.'
11 ೧೧ ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”
It is just as I swore in my anger: 'They will never enter my rest.'”
12 ೧೨ ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
Be careful, brothers, so that among you there will not be anyone with an evil heart of unbelief, a heart that turns away from the living God.
13 ೧೩ ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
Instead, encourage one another daily, as long as it is called “today,” so that no one among you will be hardened by the deceitfulness of sin.
14 ೧೪ ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
For we have become partners of Christ if we firmly hold to our confidence in him from the beginning to the end.
15 ೧೫ “ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”
About this it has been said, “Today, if you hear his voice, do not harden your hearts, as in the rebellion.”
16 ೧೬ ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?
Who was it who heard God and rebelled? Was it not all those who came out of Egypt through Moses?
17 ೧೭ ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.
With whom was he angry for forty years? Was it not with those who sinned, whose dead bodies fell in the wilderness?
18 ೧೮ ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
To whom did he swear that they would not enter his rest, if it was not to those who disobeyed him?
19 ೧೯ ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.
We see that they were not able to enter his rest because of unbelief.