< ಇಬ್ರಿಯರಿಗೆ ಬರೆದ ಪತ್ರಿಕೆ 3 >

1 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
Тому, святі брати, учасники небесного покликання, дивіться на Апостола та Первосвященника нашого свідчення – Ісуса.
2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.
Він був вірний Тому, Хто призначив Його, як і Мойсей був вірний в усьому [Божому] домі.
3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.
Але [Ісус] гідний більшої шани, ніж Мойсей, як і будівельник має більшу честь, ніж сам дім.
4 ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.
Бо всякий дім хтось збудував, а Той, Хто збудував усе, – Бог.
5 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.
Мойсей був вірним слугою в усьому домі [Божому], щоб свідчити про те, що буде сказано в майбутньому.
6 ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
А Христос – [вірний] Син над домом [Божим]. І Його дім – ми, якщо будемо й далі непохитно триматися сміливості та надії, якою ми пишаємося.
7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,
Отже, як каже Святий Дух: «Сьогодні, коли ви почуєте Його голос,
8 ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
не зачерствійте серцями вашими, як було в [день] повстання, у день випробування в пустелі,
9 ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.
де Мене спокушали ваші батьки, випробовуючи Мене, хоча й бачили Мої діла
10 ೧೦ ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.
сорок років. Тоді Я обурився на цей рід і сказав: „Вони завжди блукають своїм серцем, не знають шляхів Моїх.
11 ೧೧ ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”
Тому присягнув Я у гніві Моєму: не увійдуть вони до Мого спокою!“».
12 ೧೨ ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
Стережіться, брати, щоб ні в кого з вас не було лукавого та невірного серця, що призведе до відвернення від живого Бога.
13 ೧೩ ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
Але підбадьорюйте одне одного щодня, доки це «сьогодні» ще триває, щоб ніхто з вас не зачерствів через оману гріха.
14 ೧೪ ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
Адже ми стали учасниками Христа, якщо лише твердо збережемо до кінця [нашу] первісну надію.
15 ೧೫ “ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”
Як сказано: «Сьогодні, якщо ви почуєте Його голос, не зачерствійте серцями вашими, як було в [день] повстання».
16 ೧೬ ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?
Бо ким були ті, що, почувши [голос Божий], збунтувалися? Чи не всі ті, що вийшли з Єгипту з Мойсеєм?
17 ೧೭ ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.
А на кого Він гнівався сорок років? Хіба не на тих, хто згрішив, чиї тіла загинули в пустелі?
18 ೧೮ ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
І кому [Бог] поклявся, що не ввійдуть до Його спокою, як не тим, хто не послухався?
19 ೧೯ ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.
Тож, як бачимо, вони не змогли увійти через невіру.

< ಇಬ್ರಿಯರಿಗೆ ಬರೆದ ಪತ್ರಿಕೆ 3 >