< ಇಬ್ರಿಯರಿಗೆ ಬರೆದ ಪತ್ರಿಕೆ 4 >
1 ೧ ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
Hiza, Xoossay nuna ba shemppo bessaa gelssana gida qaalay buroo sinthafe de7iya gisho, hinttefe oonikka he shemppo bessaa gelonna attonna mela naagettoos.
2 ೨ ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
Enttaw Wonggelay sabbakettidayssada, nuuskka sabbakettis. Shin entti si7idabaa ammanidi ekkiboonna gisho entta go77ibeenna.
3 ೩ ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.
Gidoshin, alamey medhettosappe doomidi Xoossaa oosoy polettidayssa gidikkoka, Xoossay, “Taani ta hanquwan caaqqada, ta shemppo bessaa ubbaka gelokkona” gidayssada, nuuni ammanidayssati iya shemppo bessaa gelana.
4 ೪ ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.
Laappuntha gallasaaba issi bessan, “Xoossay laappuntha gallasan ba ooso ubbaafe shemppis” yaagis.
5 ೫ “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ.
Qassika he bessan, “Entti ta shemppo bessaa ubbarakka gelokkona” yaagis.
6 ೬ ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
Koyro Wonggelaa si7idayssati kiitettonna ixxidi shemppo bessaa gelibookkona. Yaaniya gisho, ha77ika he shemppo bessaa gelana issi issi asati de7oosona.
7 ೭ ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.
Hessa gisho, Xoossay, “Hachchi” gidi xeegishe issi gallas nuus qanxis. Daro wodeppe guye Xoossay Dawite baggara, “Xoossay giyabaa hachchi hintte si7iya wode, hintte wozanaa minthofite” yaagidi odis.
8 ೮ ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.
Iyaasuy enttaw shemppuwa immidabaa gidiyakko, Xoossay hara gallasabaa guyeppe odennashin.
9 ೯ ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.
Hiza, Xoossaa asaas Sambbaata shemppoy naagettidi de7ees.
10 ೧೦ ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
Xoossaa shemppo bessaa geliya oonikka, Xoossay ba oosuwappe shemppidayssada ikka ba oosuwappe shemppana.
11 ೧೧ ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
Hessa gisho, oonikka he asaa kiitetetha ixxuwa kaallidi, kunddonaada Xoossaa shemppo bessaa gelanaw minnoos.
12 ೧೨ ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
Xoossaa qaalay de7onne ootheyssa. Nam77u baggara qarattida bisoppeka aadhdhidi oco. I shemppo, ayyaana, xaphonne kolize gakkanaw kanthidi caddees. Qassi asa wozanan de7iya geemmida qofaanne amuwaa shaakkidi pirddees.
13 ೧೩ ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
Xoossaa sinthafe qosettiyabay ayba medhetethika baawa. Iya ayfe sinthan ubbabay qonccenne kallo de7ees. Nuuni zaaro immanaw bessey iya sinthana.
14 ೧೪ ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
Hiza, salo keyida gita kahine halaqay, Xoossaa na7ay Yesuusi, nuus de7iya gisho nu ammanuwa minthidi naagoos.
15 ೧೫ ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
Nu kahine halaqay nu daaburiya wode nuus qadhettanaw dandda7eyssa. I nuuda ubbaban paacettisippe attin nagara oothibeenna.
16 ೧೬ ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.
Hiza, maarotethaa ekkanawunne maade koshshiya wode aadho keehatethaa demmanaw aadho keehatethay de7iyasuwa Xoossaa araatakko yayyonna shiiqoos.