< ಇಬ್ರಿಯರಿಗೆ ಬರೆದ ಪತ್ರಿಕೆ 5 >
1 ೧ ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.
Every high priest is appointed from among men to represent them in matters relating to God, to offer gifts and sacrifices for sins.
2 ೨ ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.
He is able to deal gently with those who are ignorant and misguided, since he himself is beset by weakness.
3 ೩ ಆದ್ದರಿಂದ, ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು.
That is why he is obligated to offer sacrifices for his own sins, as well as for the sins of the people.
4 ೪ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
No one takes this honor upon himself; he must be called by God, just as Aaron was.
5 ೫ ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.
So also Christ did not take upon Himself the glory of becoming a high priest, but He was called by the One who said to Him: “You are My Son; today I have become Your Father.”
6 ೬ ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ. (aiōn )
And in another passage God says: “You are a priest forever in the order of Melchizedek.” (aiōn )
7 ೭ ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
During the days of Jesus’ earthly life, He offered up prayers and petitions with loud cries and tears to the One who could save Him from death, and He was heard because of His reverence.
8 ೮ ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.
Although He was a Son, He learned obedience from what He suffered.
9 ೯ ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು. (aiōnios )
And having been made perfect, He became the source of eternal salvation to all who obey Him (aiōnios )
10 ೧೦ ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.
and was designated by God as high priest in the order of Melchizedek.
11 ೧೧ ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.
We have much to say about this, but it is hard to explain, because you are dull of hearing.
12 ೧೨ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
Although by this time you ought to be teachers, you need someone to reteach you the basic principles of God’s word. You need milk, not solid food!
13 ೧೩ ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.
For everyone who lives on milk is still an infant, inexperienced in the message of righteousness.
14 ೧೪ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.
But solid food is for the mature, who by constant use have trained their senses to distinguish good from evil.